ಬೆಂಗಳೂರು, (ಜೂನ್.03): ದೇಶದ ಹಲವು ರಾಜ್ಯಗಳಲ್ಲಿ 12ನೇ ತರಗತಿಯ ಪರೀಕ್ಷೆಗಳನ್ನ ರದ್ದು ಮಾಡಲಾಗಿದೆ. ಆದ್ರೆ, ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಬೇಕೋ? ಬೇಡವೋ ಎನ್ನುವ ಗೊಂದಲ ಇನ್ನೂ ಮುಂದುವರೆದಿದೆ.

ಇದೀಗ ಆ ಎಲ್ಲಾ ಗೊಂದಲಗಳಿಗೆ ತೆರೆಬೀಳುವ ಸಮಯ ಬಂದಿದ್ದು, ಎಸ್​ಎಸ್‌ಎಲ್​ಸಿ ಮತ್ತು ಪಿಯುಸಿ ಪರೀಕ್ಷೆ ವಿಚಾರವಾಗಿ ನಾಳೆ ಅಂದ್ರೆ ಜೂನ್ 04 ಬೆಳಗ್ಗೆ 10 ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ ಕರೆದಿದ್ದು, ಭಾರೀ ಕುತೂಹಲ ಮೂಡಿಸಿದೆ.

ಮುಂದುವರೆದ SSLC, PUC ಪರೀಕ್ಷೆ ಗೊಂದಲ: ಶಿಕ್ಷಣ ಸಚಿವರಿಂದ ಹೊರಬಿತ್ತು ಮಹತ್ವದ ಸ್ಪಷ್ಟನೆ

ಇಲ್ಲಿಯವರೆಗೆ ಈ ಬಗ್ಗೆ ಸಭೆ, ಚರ್ಚೆಗಳನ್ನು ಮಾಡಿದ್ದಾರೆ. ಅಂತಿಮವಾಗಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಎಸ್​ಎಸ್​ಎಲ್​ಸಿ ಮತ್ತು ಪಿಯು ಪರೀಕ್ಷೆಗಳ ಬಗ್ಗೆ ಸುರೇಶ್ ಕಮಾರ್ ಅವರು ಮಹತ್ವದ ನಿರ್ಧಾರವನ್ನು ಘೋಷಿಸುವ ಸಾಧ್ಯತೆಗಳಿವೆ.

ಇನ್ನು ಕೆಲ ಸಚಿವರು ಪರೀಕ್ಷೆ ನಡೆಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ರೆ, ಇನ್ನು ಕೆಲವರು ರದ್ದು ಮಾಡುವುದು ಸೂಕ್ತ ಎಂದಿದ್ದಾರೆ. ಅಲ್ಲದೇ ಇಂದು (ಗುರುವಾರ) ಸಿಎಂ ಯಡಿಯೂರಪ್ಪ ನಡೆಸಿದ ಸುದ್ದಿಗೋಷ್ಠಿಯಲ್ಲಿ ಎಸ್​ಎಸ್‌ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಹುದು.

SSLC, PUC ಪರೀಕ್ಷೆ ನಡೆಸಬೇಕೋ? ಬೇಡವೋ? ಮಹತ್ವದ ಸಲಹೆ ಕೊಟ್ಟ ಸಚಿವ ಅಶೋಕ್

ಈಗಾಗಲೇ ಕೇಂದ್ರ ಸರ್ಕಾರವು ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಇದರ ಬೆನ್ನಲ್ಲೇ ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಗುಜರಾತ್, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಬೋರ್ಡ್‌ಗಳು ಸಹ 12 ಕ್ಲಾಸ್ ಪರೀಕ್ಷೆಗಳನ್ನ ರದ್ದು ಮಾಡಿವೆ. 

ಒಟ್ಟಿನಲ್ಲಿ ಸುರೇಶ್ ಕುಮಾರ್ ಪ್ರೆಸ್‌ಮೀಟ್ ತೀವ್ರ ಕುತೂಹಲ ಕೆರಳಿಸಿದ್ದು, ಪರೀಕ್ಷೆಗಳನ್ನ ರದ್ದು ಮಾಡ್ತಾರೋ? ನಡೆಸುತ್ತಾರೋ? ಎನ್ನುವುದನ್ನು ಕಾದುನೋಡಬೇಕಿದೆ.