ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿಗೆ 1 ಲಕ್ಷ ಪರಿಹಾರ| ವಿದ್ಯಾರ್ಥಿನಿ ದಾಖಲಾಗಿರುವ ನಿಮ್ಹಾನ್ಸ್‌ಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಚಿವರು| ಬಾಲಕಿಗೆ ನೆರವಾಗುವಂತೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ|
ಬೆಂಗಳೂರು(ಫೆ.03): ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಗೆ ತೆರಳುವಾಗ ಅಪಘಾತಕ್ಕೊಳಗಾಗಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿ ಯಶಸ್ವಿನಿ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖಾ ಸಚಿವ ಎಸ್.ಸುರೇಶ್ ಕುಮಾರ್ 1 ಲಕ್ಷ ಸಹಾಯಧನದ ಚೆಕ್ ವಿತರಿಸಿದ್ದಾರೆ.
ವಿದ್ಯಾರ್ಥಿನಿ ದಾಖಲಾಗಿರುವ ನಿಮ್ಹಾನ್ಸ್‌ಗೆ ಮಂಗಳವಾರ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಚಿವರು, ಸಹಾಯಧನದ ಚೆಕ್ ವಿತರಿಸಿ ಬಾಲಕಿಯ ಪೋಷಕರಿಗೆ ಸಮಾಧಾನ ಹೇಳಿದ್ದಾರೆ.
ರಾಜ್ಯದಲ್ಲಿ ಈ ನಾಲ್ಕು ತರಗತಿಗಳು ಆರಂಭ?
ಬಾಲಕಿಯ ತಂದೆ ಸೆಕ್ಯೂರಿಟಿ ಕೆಲಸ ಮಾಡುತ್ತಿದಾರೆ. ಹೀಗಾಗಿ ಬಾಲಕಿಗೆ ನೆರವಾಗುವಂತೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಈ ವೇಳೆ ಸಚಿವರು ಸೂಚಿಸಿದರು. ಸಚಿವರಿಂದ ಮಾಹಿತಿ ಪಡೆದುಕೊಂಡಿದ್ದ ನಗರ ಸಂಚಾರ ಜಂಟಿ ಪೊಲೀಸ್ ಆಯುಕ್ತರು ಕೂಡ ಬಾಲಕಿಯ ಚಿಕಿತ್ಸೆಗೆ ಧನ ಸಹಾಯ ಮಾಡಿದ್ದಾರೆಂದು ಬಾಲಕಿಯ ತಂದೆ ತಿಳಿಸಿದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 3, 2021, 9:49 AM IST