ಶಾಲೆ-ಕಾಲೇಜು, ಚಿತ್ರಮಂದಿರ ಪುನಾರಂಭಕ್ಕೆ ಗ್ರೀನ್ ಸಿಗ್ನಲ್
ಕೊರೋನಾ ವೈರಸ್ ಸೋಂಕು ಹರಡುವಿಕೆ ಪ್ರಮಾಣ ಕೊಂಚ ತಗ್ಗಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ಪ್ರಾರಂಭಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಚೆನ್ನೈ, (ನ.01): ಕೋವಿಡ್-19 ಸೋಂಕು ಹರಡುವ ಭೀತಿ ಜಗತ್ತಿನ ಎಲ್ಲ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಅದರಲ್ಲೂ ಶೈಕ್ಷಣಿಕ ಕ್ಷೇತ್ರದ ಮೇಲೆ ಭಾರೀ ಹೊಡೆತ ಬಿದ್ದಿದೆ. ಇದೀಗ ಹಂತ-ಹಂತವಾಗಿ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಸರ್ಕಾರಗಳು ಮುಂದಾಗಿವೆ.
ಇದೇ ನವೆಂಬರ್.16ರಿಂದ ಶಾಲೆ, ಕಾಲೇಜು, ಸಂಶೋಧನಾ ಕಚೇರಿಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಹೋಟೆಲ್ ಗಳನ್ನು ಪುನಾರಂಭಿಸಲು ಅನುಮತಿ ನೀಡಲಾಗಿದೆ ಎಂದು ತಮಿಳುನಾಡಿನಲ್ಲಿ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅಧಿಕೃತವಾಗಿ ಘೋಷಿಸಿದ್ದಾರೆ.
ಆದರೆ 9 ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮಾತ್ರ ಶಾಲೆ ಆರಂಭಿಸುವುದಕ್ಕೆ ಸೂಚಿಸಲಾಗಿದೆ. ತಮಿಳುನಾಡಿನಲ್ಲಿಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ಕೊಂಚ ತಗ್ಗಿರುವುದರಿಂದ ಶಾಲೆ ಪ್ರಾರಂಭಿಸಲು ಸಿಎಂ ತೀರ್ಮಾನಿಸಿದ್ದಾರೆ.
ಬಿಗ್ ನ್ಯೂಸ್: ಕರ್ನಾಟಕದಲ್ಲಿ ಶಾಲೆ ಪ್ರಾರಂಭಿಸಲು ಸಕಲ ಸಿದ್ಧತೆ
ಇನ್ನು ಕರ್ನಾಟಕದಲ್ಲಿ ಶಾಲೆಗಳನ್ನ ಪುನರಾರಂಭಿಸಲು ರಾಜ್ಯ ಸರ್ಕಾರ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ. ಮೂಲಗಳ ಪ್ರಕಾರ ನವೆಂಬರ್ ಕೊನೆ ವಾರದಲ್ಲಿ ಶಾಲೆ ಪ್ರಾರಂಭಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಯಾಕಂದ್ರೆ ರಾಜ್ಯದಲ್ಲಿ ಕೊರೋನಾ ಸೊಂಕಿನ ಪ್ರಮಾಣ ಕೊಂಚ ಕಡಿಮೆಯಾಗುತ್ತಿದೆ. ಮೊದಲು ಪ್ರತಿನಿತ್ಯ 8 ರಿಂದ 9 ಪಾಸಿಟಿವ್ ಕೇಸ್‌ಗಳು ಪತ್ತೆಯಾಗುತ್ತದ್ದವು. ಆದ್ರೆ ಕಳೆದ 15 ದಿನಗಳಿಂದ 3ರಿಂದ 4 ಸಾವಿರ ಮಾತ್ರ ಕೊರೋನಾ ಪ್ರಕರಣಗಳು ಪತ್ತೆಯಾಗುತ್ತಿವೆ.