ಎನ್ಇಪಿ ಜಾರಿಗೆ ಶಿಕ್ಷಕರ ಕೊಡುಗೆ ನಿರ್ಣಾಯಕ: ಬೊಮ್ಮಾಯಿ

ರಾಜ್ಯ ಸರಕಾರವು ಹೊಸ ಕಾಲೇಜುಗಳಿಗೆ ಅನುಮತಿ ಕೊಡುತ್ತಿಲ್ಲ.  ಶಿಕ್ಷಣ ಕ್ಷೇತ್ರದ ಸ್ವಾಯತ್ತೆಗೆ ಸದ್ಯವೇ ಸೂಕ್ತ ಶಾಸನ ತರಲಾಗುತ್ತಿದೆ ಎಂದು  ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

Teachers contribution must to  implementation of NEP says cm  Bommai gow

ಬೆಂಗಳೂರು (ಸೆ.5): ಮೂರು ವರ್ಷಗಳ ಪರಿಶ್ರಮದಿಂದ ರೂಪಿಸಿರುವ ಎನ್ಇಪಿ ಪಠ್ಯಕ್ರಮವನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ಜಾರಿಗೊಳಿಸಲು ಶಿಕ್ಷಕರು ನಿರ್ಣಾಯಕ ಪಾತ್ರ ವಹಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.  ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇಂದ್ರ ಸರಕಾರವು ಎನ್ಇಪಿ ಘೋಷಿಸುವುದಕ್ಕೂ ಮೊದಲೇ ಅದಕ್ಕೆ ಸಂಬಂಧಿಸಿದಂತೆ ಕಾರ್ಯಪಡೆ ರಚಿಸಿದ ಕೀರ್ತಿ ಕರ್ನಾಟಕದ್ದು. ಪರಿಣತರು, ವಿಷಯ ತಜ್ಞರು, ಉದ್ಯಮಿಗಳು ಒಂದೆಡೆ ಕೂತು ಪಠ್ಯಗಳನ್ನು ರೂಪಿಸಿದ್ದಾರೆ. ಇದರ ಜಾರಿಯಲ್ಲಿ ನಾವು ದೇಶದಲ್ಲೇ ಪ್ರಥಮ ಸ್ಥಾನದಲ್ಲಿ ಇದ್ದೇವೆ. ಇದರಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಅವರ ಪಾತ್ರ ದೊಡ್ಡದಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಇಂದು ತಂತ್ರಜ್ಞಾನ, ಜಗತ್ತನ್ನು ಆಳುತ್ತಿದ್ದು, ನಮ್ಮ ಮೌಲ್ಯಗಳು ಕೂಡ ಅದರಿಂದಲೇ ನಿರ್ದೇಶಿತ ವಾಗುತ್ತಿವೆ. ಬೋಧನೆಯನ್ನು ಬದುಕಿನ ಜತೆ ಬೆಸೆಯುವುದು ಅತ್ಯುತ್ತಮ ವಿಧಾನ ಎಂದು ಅವರು ಅಭಿಪ್ರಾಯ ಪಟ್ಟರು. ಮನುಷ್ಯನಲ್ಲಿ ಚಿಂತನಾ ಪ್ರಕ್ರಿಯೆಗೆ ಶಿಸ್ತು ತರುವುದೇ ಶಿಕ್ಷಣ. ಇದರಲ್ಲಿ ಮಕ್ಕಳ ಮುಗ್ಧತೆ ಮತ್ತು ಕುತೂಹಲ ಉಳಿಸಿಕೊಳ್ಳುವುದೇ ಈಗಿರುವ ಸವಾಲು ಎಂದು ಅವರು ಪ್ರತಿಪಾದಿಸಿದರು. ಸ್ವಾಮಿ ವಿವೇಕಾನಂದರು ಇಂದು ತುಂಬಾ ಪ್ರಸ್ತುತರಾಗಿದ್ದಾರೆ. ಶಿಕ್ಷಣವು ತಾರ್ಕಿಕತೆ, ತಾತ್ವಿಕತೆ ಮತ್ತು ನೈತಿಕತೆಗಳನ್ನು ಬೆಸೆಯಬೇಕು ಎಂದು ಅವರು ಹೇಳಿದರು.

ಸದ್ಯದಲ್ಲೇ ಶಾಸನ: ರಾಜ್ಯ ಸರಕಾರವು ಹೊಸ ಕಾಲೇಜುಗಳಿಗೆ ಅನುಮತಿ ಕೊಡುತ್ತಿಲ್ಲ. ಬದಲಿಗೆ ಇರುವ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುತ್ತಿದೆ. ಜತೆಗೆ, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿಕೇಂದ್ರೀಕರಣ, ಸ್ವಾಯತ್ತತೆ ಮತ್ತು ಸ್ವಾತಂತ್ರ್ಯ ತರಲು ಸದ್ಯದಲ್ಲೇ ಸೂಕ್ತ ಶಾಸನವನ್ನು ತರಲಾಗುತ್ತಿದೆ. ಈ ಪ್ರಕ್ರಿಯೆ ಈಗ ಅಂತಿಮ ಹಂತದಲ್ಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಇದೇ ಸಂದರ್ಭದಲ್ಲಿ ತಿಳಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಹಿಂದೆ ಇದ್ದ ವಿಐಪಿ ಸಂಸ್ಕೃತಿಯನ್ನು ಕೊನೆಗೊಳಿಸಿ, ಪ್ರತಿಭೆಗೆ ಮನ್ನಣೆ ಕೊಡಲಾಗುತ್ತಿದೆ. ವಿ.ವಿ.ಗಳಲ್ಲಿ ಪಾರದರ್ಶಕತೆ ತಂದಿದ್ದು, ಎನ್ಇಪಿ ಮೂಲಕ ಸರ್ವಾಂಗೀಣ ಪ್ರಗತಿ ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ಶಿಕ್ಷಣದಲ್ಲಿ ವಿದ್ಯಾರ್ಥಿ ಕೇಂದ್ರಿತ ನೀತಿ ಜಾರಿಗೊಳಿಸಲಾಗಿದೆ. ಸರ್ಕಾರಿ ಕಾಲೇಜುಗಳ ಹಾಗೆ ಅನುದಾನಿತ ಕಾಲೇಜುಗಳಿಗೂ ಸ್ಥಳೀಯವಾಗಿ ಶುಲ್ಕ ರೂಪದಲ್ಲಿ ಸಂಗ್ರಹವಾಗುವ ಹಣವನ್ನು ಸಂಪೂರ್ಣವಾಗಿ ಆಯಾ ಕಾಲೇಜುಗಳಿಗೇ ಕೊಡಲಾಗುತ್ತಿದೆ. ಈ ಹಿಂದೆ ಅನುದಾನಿತ ಕಾಲೇಜುಗಳಿಗೆ ಶೇ.50ರಷ್ಟು ಹಣ ಮಾತ್ರ ಬಳಸಲು ಅವಕಾಶವಿತ್ತು ಎಂದು ಅವರು ವಿವರಿಸಿದರು.

ಶಿಕ್ಷಣದ ಅಂತಾರಾಷ್ಟ್ರೀಕರಣ, ಉದ್ಯಮ ಗಳ ಜತೆ ಸಕ್ರಿಯ ಸಂಬಂಧ, ಜಾಗತಿಕ ಮಟ್ಟದ ಸಂಸ್ಥೆಗಳೊಂದಿಗೆ ಒಡಂಬಡಿಕೆಗಳಿಗೆ ಆದ್ಯತೆ ಕೊಡಲಾಗಿದೆ. ಜತೆಯಲ್ಲಿ ಪ್ರಾಧ್ಯಾಪಕರ ಬಡ್ತಿ ಪ್ರಕ್ರಿಯೆ ಶೀಘ್ರವೇ ಆರಂಭ ಆಗಲಿದೆ ಎಂದು ಸಚಿವರು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಗದಗಿನ ರಾಮಕೃಷ್ಣ-ವಿವೇಕಾನಂದ ಆಶ್ರಮದ ಶ್ರೀ ನಿರ್ಭಯಾನಂದ ಸರಸ್ವತಿ ಮಹಾರಾಜ್ ಆಶಯ ಭಾಷಣ ಮಾಡಿದರು.

Teachers Day: ಶಿಕ್ಷಕರೂ ಹೋಂ ವರ್ಕ್ ಮಾಡಬೇಕು!

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಬಿ ತಿಮ್ಮೇಗೌಡ, ಬೆಂಗಳೂರು ನಗರ ವಿವಿ ಕುಲಪತಿ ಡಾ.ಲಿಂಗರಾಜ ಗಾಂಧಿ, ನೃಪತುಂಗ ವಿವಿ ಕುಲಪತಿ ಡಾ. ಶ್ರೀನಿವಾಸ ಬಳ್ಳಿ, ಮಹಾರಾಣಿ ವಿವಿ ಕುಲಪತಿ ಡಾ. ಗೋಮತಿದೇವಿ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಕಾಲೇಜು ಪ್ರಾಧ್ಯಾಪಕರ ಸಂಘದ ಅಧ್ಯಕ್ಷ ಮಂಜುನಾಥ ಇದ್ದರು.
ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರು ಸ್ವಾಗತಿಸಿದರು.

ಕಂಠಪಾಠದ ಕಲಿಕೆಯಿಂದ ಮಕ್ಕಳನ್ನು ಹೊರತರಬೇಕು

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ (education) ಇಲಾಖೆಯ ವತಿಯಿಂದ ಸೋಮವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಡಾ.ಸಿ ಎನ್ ಅಶ್ವತ್ಥನಾರಾಯಣ ಮತ್ತು ಬೈರತಿ ಬಸವರಾಜು, ಶ್ರೀ ನಿರ್ಭಯಾನಂದ ಸರಸ್ವತಿ ಮಹಾರಾಜ್ ಭಾಗವಹಿಸಿದ್ದರು.

Latest Videos
Follow Us:
Download App:
  • android
  • ios