Asianet Suvarna News Asianet Suvarna News

ನ.5ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ: ಸುರೇಶ್‌ಕುಮಾರ್‌

ನವೆಂಬರ್‌ 5ರಿಂದ ಆರಂಭವಾಗಲಿದ್ದು, ಈ ಸಂಬಂಧ ಇಂದು ಅಧಿಕೃತ ವೇಳಾಪಟ್ಟಿ ಪ್ರಕಟವಾಗಲಿದೆ 

Teachers Transfer Process will Begin From November 5 snr
Author
Bengaluru, First Published Oct 22, 2020, 8:37 AM IST

ಬೆಂಗಳೂರು (ಅ.22):  ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನವೆಂಬರ್‌ 5ರಿಂದ ಆರಂಭವಾಗಲಿದ್ದು, ಈ ಸಂಬಂಧ ಇಂದು ಅಧಿಕೃತ ವೇಳಾಪಟ್ಟಿ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ವಿಳಂಬವಾಗಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಇನ್ನೊಂದು ವಾರದೊಳಗೆ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ, ಸಚಿವ ಸುರೇಶ್‌ ಕುಮಾರ್‌ ಕೂಡ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕುರಿತು ಟ್ವೀಟ್‌ ಮಾಡಿದ್ದಾರೆ.

ಆನ್​ಲೈನ್ ಶಿಕ್ಷಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವರಿಂದ ಮಹತ್ವದ ಸುತ್ತೋಲೆ

‘ನ.5ರಿಂದ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆ ಆರಂಭವಾಗಲಿದೆ. ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣೆಗೆ ಒಳಗಾದ ಶಿಕ್ಷಕರಿಗೆ ಮೊದಲ ಆದ್ಯತೆ ಸಿಗಲಿದೆ. ಈ ನಿಟ್ಟಿನಲ್ಲಿ ಅಧಿಸೂಚನೆ ಹಾಗೂ ವೇಳಾಪಟ್ಟಿಯನ್ನು ಹೊರಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದೇನೆ. ಗುರುವಾರ ವೇಳಾಪಟ್ಟಿಪ್ರಕಟವಾಗಲಿದೆ’ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

‘ರಾಜ್ಯದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರುಗಳಿಗೆ ವರ್ಗಾವಣೆ ಸೌಲಭ್ಯಗಳಿಲ್ಲದೆ ಆತಂಕಕ್ಕೊಳಗಾಗಿದ್ದಾರೆ. ಈಗಾಗಲೇ ಸರ್ಕಾರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿ 5 ತಿಂಗಳಾದರೂ ವರ್ಗಾವಣೆ ಪ್ರಕ್ರಿಯೆ ವೇಳಾಪಟ್ಟಿಯನ್ನು ಹೊರಡಿಸಿಲ್ಲ. ಆದರೆ, ಬೇರೆ ಇಲಾಖೆಗಳಲ್ಲಿ ವರ್ಗಾವಣೆ ಪ್ರಕ್ರಿಯೆಗಳು ಕಾಲಕಾಲಕ್ಕೆ ನಡೆಯುತ್ತಿವೆ. ಇದರಿಂದ ನೌಕರರಿಗೆ ತಾರತಮ್ಯ ಮಾಡಿದಂತಾಗುತ್ತದೆ. ಹೀಗಾಗಿ ಶಿಕ್ಷಕರ ಮತ್ತು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಮನವಿ ಮಾಡಿತ್ತು.

Follow Us:
Download App:
  • android
  • ios