2ನೇ ದಿನವೂ ದ್ವಿತೀಯ ಪಿಯು ಉತ್ತರ ಪತ್ರಿಕೆ ಪಡೆಯಲು ವಿದ್ಯಾರ್ಥಿಗಳ ಪರದಾಟ
- ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ ಎರಡನೇ ದಿನವೂ ಅಲಭ್ಯ
- ಮರು ಮೌಲ್ಯಮಾಪನ ಹಾಕಲು ಸ್ಕ್ಯಾನ್ ಕಾಪಿಗೆ ಅರ್ಜಿ ಹಾಕಿರುವ ವಿದ್ಯಾರ್ಥಿಗಳು
- ಪಿಯು ಬೋರ್ಡ್ ವೆಬ್ ಸೈಟ್ ನಲ್ಲಿ ಸ್ಕ್ಯಾನ್ ಕಾಪಿ ಡೌನ್ ಲೋಡ್ ಆಗ್ತಿಲ್ಲ
- ಮೊದಲ ದಿನ ತಾಂತ್ರಿಕ ದೋಷವೆಂದಿದ್ದ ಪಿಯು ಬೋರ್ಡ್
ಬೆಂಗಳೂರು (ಜು.7): ದ್ವಿತೀಯ ಪಿಯುಸಿ ಫಲಿತಾಂಶದ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲಾಗದೆ ಸಮಸ್ಯೆ ಅನುಭವಿಸುತ್ತಿದ್ದಾರೆ. ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ ಎರಡನೇ ದಿನವೂ ಅಲಭ್ಯವಾಗಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳು ಪಿಯು ಬೋರ್ಡ್ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಬುಧವಾರದಿಂದ ಇಲಾಖೆಯ ವೆಬ್‌ಸೈಟ್‌ನಲ್ಲಿ ಸ್ಕ್ಯಾನ್ ಪ್ರತಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಪಿಯು ಇಲಾಖೆ ತಿಳಿಸಿತ್ತು. ಮೊದಲ ದಿನ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ದಿನವಿಡೀ ಪ್ರಯತ್ನಿಸಿದರು ಸ್ಕ್ಯಾನ್ ಪ್ರತಿಗಳು ಡೌನ್‌ಲೋಡ್ ಆಗಲಿಲ್ಲ. ಎರಡನೇ ದಿನವೂ ಅದು ಮುಂದುವರೆಯಿತು.
ಜಮ್ಮು ಮತ್ತು ಕಾಶ್ಮೀರದ ಬುಡಕಟ್ಟು ವಿದ್ಯಾರ್ಥಿಗಳಿಗೆ ಉಚಿತ NEET, JEE ತರಬೇತಿ
ಮೊದಲ ದಿನ ತಾಂತ್ರಿಕ ಕಾರಣಗಳಿಂದ ಬುಧವಾರ ಸ್ಕ್ಯಾನ್ ಪ್ರತಿಗಳ ಡೌನ್‌ಲೋಡ್ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ವಿದ್ಯಾರ್ಥಿಗಳು ಆತಂಕ ಪಡಬೇಕಿಲ್ಲ. ಸಮಸ್ಯೆ ಸರಿಪಡಿಸಲಾಗುತ್ತಿದೆ. ಗುರುವಾರ ಮಧ್ಯಾಹ್ನ 12 ಗಂಟೆಯಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅಗತ್ಯಬಿದ್ದರೆ ಕಾಲಾವಕಾಶ ವಿಸ್ತರಿಸಲಾಗುತ್ತದೆ ಎಂದು ಇಲಾಖೆ ಅಧಿಕಾರಿಳಿ ಹೇಳಿದ್ದರು. ಎರಡನೇ ದಿನ ಸಮಸ್ಯೆ ಬಗೆಹರಿದಿದೆ ಎಂದು ಹೇಳಿತ್ತು. ಆದ್ರೆ ಎರಡನೇ ದಿನವೂ ಸ್ಕ್ಯಾನ್ ಕಾಪಿ ಸಿಗದೇ ವಿದ್ಯಾರ್ಥಿಗಳಿಗೆ ಪರದಾಟ ನಡೆಸಿದರು. ಇದರಿಂದ ಪಿಯು ಬೋರ್ಡ್ ವಿರುದ್ದ ಪೋಷಕರು, ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ 10 ಲಕ್ಷ ಮಕ್ಕಳು ಶಾಲೆಯಿಂದ ಹೊರಗೆ
ಸ್ಕ್ಯಾನ್ ಪ್ರತಿ ಪಡೆದವರು ಮಾತ್ರವೇ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಎರಡು ದಿನ ಕಳೆದರೂ ಪ್ರತಿಗಳು ಸಿಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಪ್ರಶ್ನಿಸಿದರೆ ಯಾವಾಗ ವೆಬ್‌ಸೈಟ್ ಸರಿಹೋಗಲಿದೆ ಎಂಬ ಬಗ್ಗೆ ಉತ್ತರವನ್ನೇ ನೀಡುತ್ತಿಲ್ಲ. ಕಾಯಿರಿ ಎಂದು ಉಡಾಫೆ ಉತ್ತರ ನೀಡುತ್ತಾರೆ. ಇಂತಹ ಬೇಜವಾಬ್ದಾರಿ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಸರ್ಕಾರ ಕ್ರಮ ವಹಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಸದ್ಯ ಈ ಬಗ್ಗೆ ಪರಿಶೀಲಿಸಿ, ಸಮಸ್ಯೆ ಬಗೆಹರಿಸಲಾಗುವುದು ಎಂದು ಪಿಯು ಬೋರ್ಡ್ ಅಧಿಕಾರಿಗಳ ಸ್ಪಷ್ಟನೆ ನೀಡಿದ್ದಾರೆ.
ಸ್ಕ್ಯಾನ್ ಪ್ರತಿ ಪಡೆದವರಿಗೆ ಮಾತ್ರವೇ ಮರು ಮೌಲ್ಯಮಾಪನ ಮತ್ತು ಅಂಕ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ತಾವು ಬರೆದ ಉತ್ತರಕ್ಕೆ ಸರಿಯಾಗಿ ಅಂಕ ಬಂದಿಲ್ಲವೇ ಎಂಬುದನ್ನು ಪರಿಶೀಲಿಸಿಕೊಂಡ ಬಳಿಕವೇ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದಕ್ಕೆ ಜು.13 ಕೊನೆಯ ದಿನವಾಗಿದ್ದು, ಪ್ರತಿ ವಿಷಯದ ಮರು ಮೌಲ್ಯಮಾಪನಕ್ಕೆ 1670 ರು. ಶುಲ್ಕ ನಿಗದಿಪಡಿಸಿದೆ. ಅಂಕ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಶುಲ್ಕವಿಲ್ಲ ಎಂದು ಇಲಾಖೆ ಹೇಳಿದೆ.
Ballari ಸರಕಾರಿ ಕಾಲೇಜಿನಲ್ಲಿ, IGNOUದಲ್ಲಿ ವಿವಿಧ ಕೋರ್ಸ್‌ಗಳಿಗೆ ಪ್ರವೇಶಾತಿ
ಮಕ್ಕಳಿಗೆ ಈ ವರ್ಷವೇ ಶೂ, ಸೈಕಲ್ ವಿತರಣೆ: ಶಾಲಾ ಮಕ್ಕಳಿಗೆ ಶೂ ಮತ್ತು ಸೈಕಲ್ ಈ ವರ್ಷವೇ ಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ವಿತರಣೆ ಮಾಡುವಲ್ಲಿ ಸ್ವಲ್ಪ ವಿಳಂಬವಾಗಿದೆ. ಶಿಕ್ಷಣ ಸಚಿವ ನಾಗೇಶ್ ಇದನ್ನ ನೋಡಿಕೊಳ್ಳುತ್ತಿದ್ದಾರೆ. ಈ ವರ್ಷವೇ ಶೂ ಮತ್ತು ಸೈಕಲ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಶಾಲಾಮಕ್ಕಳಿಗೆ ಶೂ ಮತ್ತು ಸೈಕಲ್ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಅನೇಕ ಮುಖಂಡರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಈ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದರು. ಅದರ ಬೆನ್ನಲ್ಲೇ ಮುಖ್ಯಮಂತ್ರಿಗಳೂ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.