ಅರ್ಚಕರು, ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಧನ, ಅರ್ಚಕ ಮೃತಪಟ್ಟರೆ 2 ಲಕ್ಷ ಪರಿಹಾರ
ದೇವಸ್ಥಾನಗಳ ಅರ್ಚಕರು, ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಧನ ನೀಡಲು, ಅರ್ಚಕರು, ನೌಕರರು ಮೃತಪಟ್ಟರೆ 2 ಲಕ್ಷ ಪರಿಹಾರ ಸೇರಿದಂತೆ ಹಲವು ಯೋಜನೆಗಳಿಗೆ ಮುಜರಾಯಿ ಇಲಾಖೆಯ ಧಾರ್ಮಿಕ ಪರಿಷತ್ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಬೆಂಗಳೂರು (ಅ.18): ದೇವಸ್ಥಾನಗಳ ಅರ್ಚಕರು, ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಧನ ನೀಡಲು ಮುಜರಾಯಿ ಇಲಾಖೆಯ ಧಾರ್ಮಿಕ ಪರಿಷತ್ ತೀರ್ಮಾನಿಸಿದೆ. ಇದರ ಜೊತೆಗೆ ಅರ್ಚಕರು, ನೌಕರರು ಮೃತಪಟ್ಟರೆ 2 ಲಕ್ಷ ಪರಿಹಾರ. ಆಯುಷ್ಮಾನ್ ಭಾರತ್ ಯೋಜನೆಯಡಿ ಆರೋಗ್ಯ ಕಾರ್ಡ್ ಸೇರಿ ಹಲವು ಯೋಜನೆಗಳಿಗೆ ಒಪ್ಪಿಗೆ ಸೂಚಿಸಲಾಗಿದೆ.
ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರೂ, ಹಿಂದೂ ಧಾರ್ಮಿಕ ದತ್ತಿ ಸಚಿವರೂ ಆಗಿರುವ ರಾಮಲಿಂಗಾರೆಡ್ಡಿ ಮುಂದಾಳತ್ವದಲ್ಲಿ ಅಕ್ಟೋಬರ್ 13 ರಂದು ನಡೆದ 4ನೇ ರಾಜ್ಯ ಧಾರ್ಮಿಕ ಪರಿಷತ್ತಿನ ಪ್ರಪ್ರಥಮ ಸಭೆಯಲ್ಲಿ ಈ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಇದರ ಜೊತೆಗೆ ಹತ್ತು ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.
Mysuru : ಕುಸಿದು ಬಿದ್ದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ದೇವಾಲಯದ ಗೋಡೆ
ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿ ದೇವಾಲಯ ಅಥವಾ ಸಂಸ್ಥೆಗಳಲ್ಲಿ ಕರ್ತವ್ಯದಲ್ಲಿರುವ ಅರ್ಚಕರು ಮತ್ತು ನೌಕರರು ಸಾವನ್ನಪ್ಪಿದ್ದಲ್ಲಿ 2 ಲಕ್ಷ ರೂಪಾಯಿ ಪರಿಹಾರ ನೀಡಲು ಕೂಡ ತೀರ್ಮಾನಿಸಲಾಗಿದೆ.
ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಪ್ರವರ್ಗ 'ಬಿ' ಮತ್ತು 'ಸಿ' ಅಧಿಸೂಚಿತ ದೇವಾಲಯ ಅಥವಾ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರು ಅರ್ಚಕರು ಹಾಗೂ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಾರ್ಷಿಕ ಪ್ರೋತ್ಸಾಹ ಧನ ವಿತರಿಸಲು ಹಾಗೂ ಇದಕ್ಕೆ ತಗಲುವ ವೆಚ್ಚವನ್ನು ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಭರಿಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ.
ಭಾರೀ ಮಳೆಗೆ ಇತಿಹಾಸ ಪ್ರಸಿದ್ಧ ನಾಗನಾಥೇಶ್ವರ ದೇವಾಲಯದ ತೇರು ಧರೆಗೆ!
ಅರ್ಚಕರ ಹಾಗೂ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಾರ್ಷಿಕ ಪ್ರೋತ್ಸಾಹಧನ ಮಾಹಿತಿ ಇಂತಿದೆ
- ಪದವಿ ಪೂರ್ವ ಶಿಕ್ಷಣ (ಪಿಯುಸಿ) ವಿದ್ಯಾರ್ಥಿಗಳಿಗೆ 5 ಸಾವಿರ ರೂ
- ಐಟಿಐ/ಜೆಒಸಿ/ಡಿಪ್ಲೋಮಾ ವಿದ್ಯಾರ್ಥಿಗಳಿಗೆ 5 ಸಾವಿರ ರೂ
- ಪದವಿ ವಿದ್ಯಾರ್ಥಿಗಳಿಗೆ 7 ಸಾವಿರ ರೂ
- ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 15 ಸಾವಿರ ರೂ
- ಆರ್ಯುವೇದಿಕ್ / ಹೋಮಿಯೋಪತಿ ಪದವಿ ವಿದ್ಯಾರ್ಥಿಗಳಿಗೆ 25 ಸಾವಿರ ರೂ
- ವೈದ್ಯಕೀಯ, ಡೆಂಟಲ್ ಶಿಕ್ಷಣ ವಿದ್ಯಾರ್ಥಿಗಳಿಗೆ 50 ಸಾವಿರ ರೂ
- ವಿದೇಶ ವ್ಯಾಸಂಗ ವಿದ್ಯಾರ್ಥಿಗಳಿಗೆ (ಒಂದು ಬಾರಿ ಮಾತ್ರ) 1 ಲಕ್ಷ ರೂ. ಪ್ರೋತ್ಸಾಹ ಧನ
ಇತರ ಮಹತ್ವದ ತೀರ್ಮಾನಗಳು
- ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಪ್ರಾಧಿಕಾರ ರಚನೆ
- ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ
- 65 ವರ್ಷ ಮೇಲ್ಪಟ್ಟವರಿಗೆ ಸರತಿ ಸಾಲಿನಲ್ಲಿ ನಿಲ್ಲದೆ ನೇರ ದರ್ಶನಕ್ಕೆ ಅವಕಾಶ
- ಕಾಶಿ ಯಾತ್ರೆಯಲ್ಲಿ ಗಯಾ ಸೇರ್ಪಡೆ, ಪ್ರಸ್ತುತ 5 ಸಾವಿರ ರೂ. ಇದ್ದ ಸಹಾಯಧನವನ್ನು 7,500 ರೂ.ಗೆ ಹೆಚ್ಚಳ , ಊಟ, ತಿಂಡಿಗಾಗಿ ಪ್ರತ್ಯೇಕ ವ್ಯವಸ್ಥೆ, ವೈದ್ಯರ ಸೇವೆಗಾಗಿ ಪ್ರತ್ಯೇಕ ಬೋಗಿ