KARTET: ಮುಂದಿನ ವಾರಾಂತ್ಯದಲ್ಲಿ ಟಿಇಟಿ ಫಲಿತಾಂಶ ಪ್ರಕಟ : ಬಿ.ಸಿ. ನಾಗೇಶ್

ಪ್ರಾಥಮಿಕ ಮತ್ತು ಪದವೀಧರ ಶಿಕ್ಷಕರಾಗುವ  3,32,913 ಅಭ್ಯರ್ಥಿಗಳಿಗೆ ನವೆಂಬರ್‌ ಮೊದಲ ವಾರ ನಡೆಸಲಾಗಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆಎಆರ್-ಟಿಇಟಿ) ಪರೀಕ್ಷೆಯ ಫಲಿತಾಂಶವನ್ನು  ಮುಂದಿನ ವಾರಾಂತ್ಯದೊಳಗೆ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

TET Result Announced Next Weekend BC Nagesh sat

ಬೆಂಗಳೂರು (ಡಿ.8):  ರಾಜ್ಯದಲ್ಲಿ 1ರಿಂದ 5ನೇ ತರಗತಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು 6ರಿಂದ 8ನೇ ತರಗತಿವರೆಗಿನ ಪ್ರಾಥಮಿಕ ಶಾಲೆ ಪದವೀಧರ ಶಿಕ್ಷಕ ಅಭ್ಯರ್ಥಿಗಳಿಗೆ ಕಳೆದ ನವೆಂಬರ್‌ 6ರಂದು ನಡೆಸಲಾಗಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆಎಆರ್-ಟಿಇಟಿ) ಪರೀಕ್ಷೆಯನ್ನು ಒಟ್ಟು 3,32,913 ಅಭ್ಯರ್ಥಿಗಳು ಬರೆದಿದ್ದರು. ಈ ಎಲ್ಲ ಅಭ್ಯರ್ಥಿಗಳ ಟಿಇಟಿ ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್‌ ಮೂಲಕ ಮಾಹಿತಿ ಹಂಚಿಕೊಂಡಿರುವ ಶಿಕ್ಷಣ ಸಚಿವ ನಾಗೇಶ್‌ 'ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಮುಂದಿನ ವಾರಾಂತ್ಯದೊಳಗೆ ಪ್ರಕಟಿಸಲಾಗುವುದು' ಎಂದು  ಶಿಕ್ಷಕ ಅಭ್ಯರ್ಥಿಗಳಿಗೆ ಸಂದೇಶ ರವಾನಿಸಿದ್ದಾರೆ. ಕಳೆದ ವರ್ಷ  15,000 ಪದವೀಧರ ಶಿಕ್ಷಕರ ನೇಮಕಾತಿ ಪರೀಕ್ಷೆ ಮುಕ್ತಾಯಗೊಂಡ ತಕ್ಷಣವೇ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಕರೆಯಲಾಗಿತ್ತು. ಅರ್ಜಿ ಸಲ್ಲಿಕೆಯ ನಂತರದ ಒಂದೆರಡು ತಿಂಗಳಲ್ಲಿ ಟಿಇಟಿ ಪಲಿತಾಂಶ ನಡೆಸಿದ್ದರು. ನ.೬ರಂದು ರಾಜ್ಯಾದ್ಯಂತ ಶಿಕ್ಷಕ ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಈಗ ಫಲಿತಾಂಶ ಬಂದಲ್ಲಿ ಶಿಕ್ಷಕರ ನೇಮಕಾತಿಗೆ ಅರ್ಹತೆ ಪಡೆದುಕೊಳ್ಳಲಿದ್ದಾರೆ. ಇನ್ನು ಬಹುತೇಕರು ತಮ್ಮ ಹಿಂದಿನ ಪರೀಕ್ಷೆಯಲ್ಲಿ ಪಡೆದಿದ್ದ ಅಂಕಗಳನ್ನು ಹೆಚ್ಚಳ ಮಾಡಿಕೊಳ್ಳಲು ಮತ್ತೊಮ್ಮೆ ಟಿಇಟಿ ಪರೆದಿದ್ದಾರೆ ಎಂದು ಶಿಕ್ಷಣ ಇಲಾಖೆ ಮೂಲಗಳಿಂದ ತಿಳಿದುಬಂದಿದೆ.

ಟಿಇಟಿ ಹಾಲ್‌ ಟಿಕೆಟಲ್ಲಿ ಸನ್ನಿ ಲಿಯೋನ್‍ ಅಶ್ಲೀಲ ಫೋಟೋ: ದೂರು ದಾಖಲು

ಟಿಇಟಿ ಪರೀಕ್ಷೆ ಬರೆದವರ ವಿವರ:  ರಾಜ್ಯಾದ್ಯಂತ ನ.೬ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬಿಗಿ ಬಂದೋಬಸ್ತ್‌ನಲ್ಲಿ ನಡೆದಿದೆ. ಒಟ್ಟಾರೆ 3.61 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದರು. ಈ ಅಭ್ಯರ್ಥಿಗಳಿಗೆ ರಾಜ್ಯದ 781 ಕೇಂದ್ರಗಳಲ್ಲಿ ಪರೀಕ್ಷೆಗೆ ಸಿದ್ಧತೆ ಮಾಡಲಾಗಿತ್ತು. ಇನ್ನು ಅರ್ಜಿ ಸಲ್ಲಿಸಿದವರ ಪೈಕಿ 28,471 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು. 1 ರಿಂದ 5ನೇ ತರಗತಿವರೆಗೂ ಬೋಧಿಸಲು ಅರ್ಹತೆ ಪಡೆಯುವ ಪೇಪರ್‌-1ಕ್ಕೆ 1,54,929 ಅಭ್ಯರ್ಥಿಗಳು ನೋಂದಾಯಿಸಿದ್ದರು. ಇದರಲ್ಲಿ 1,40,801 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, 14,128 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ. 6 ರಿಂದ 8ನೇ ತರಗತಿವರೆಗೂ ಬೋಧಿಸಲು ಅರ್ಹತೆ ಪಡೆಯುವ ಪೇಪರ್‌-2 ಕ್ಕೆ 2,06,455 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು 1,92,112 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. 14,343 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ. ಕೆಲ ಅಭ್ಯರ್ಥಿಗಳು ಎರಡೂ ಪರೀಕ್ಷೆ ಬರೆದಿದ್ದಾರೆ. 

Chikkamagaluru; ಆನ್ ಲೈನ್ ಎಡವಟ್ಟು ಟಿಇಟಿ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳು

ಬಿಗಿಯಾಗಿ ನಡೆದಿದ್ದ ಪರೀಕ್ಷೆ: ಪರೀಕ್ಷೆಯ ವೇಳೆ ಮೊಬೈಲ್‌, ಕ್ಯಾಲ್ಕುಲೇಟರ್‌, ಕೈಗಡಿಯಾರ, ಬೆಂಕಿಪೊಟ್ಟಣ, ಲೈಟರ್‌, ಬ್ಲೂಟೂತ್‌ ಮತ್ತಿತರ ಎಲೆಕ್ಟ್ರಾನಿಕ್ಸ್‌ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ. ಹಾಲ್‌ ಟಿಕೆಟ್‌ನಲ್ಲಿ ಸಹಿ ಮತ್ತು ಪೋಟೋ ಪ್ರಕಟವಾಗದಿದ್ದರೆ ಅಥವಾ ಸಹಿ ಮತ್ತು ಪೋಟೋಗೆ ವ್ಯತ್ಯಾಸವಿದ್ದರೆ ಅಂತಹ ಅಭ್ಯರ್ಥಿಗಳು ತಮ್ಮೊಂದಿಗೆ ಇತ್ತೀಚಿನ ಪೋಟೋ, ಆನ್‌ಲೈನ್‌ ಅರ್ಜಿ, ಆಧಾರ್‌ ಕಾರ್ಡ್‌ ಅಥವಾ ಇನ್ಯಾವುದೇ ಅಧಿಕೃತ ಗುರುತಿನ ಚೀಟಿ ತೋರಿಸಬೇಕು. ಪೇಪರ್‌-1ರ ಅಭ್ಯರ್ಥಿಗಳು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೂ 589 ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು. ಇನ್ನು ಪೇಪರ್‌-2ರ ಅಭ್ಯರ್ಥಿಗಳು ಮಧ್ಯಾಹ್ನ 2 ರಿಂದ ಸಂಜೆ 4.30 ರವರೆಗೆ 781 ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.

Latest Videos
Follow Us:
Download App:
  • android
  • ios