ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧ ರಾಜ್ಯ ಬಿಜೆಪಿ ಸರ್ಕಾರಕ್ಕೆ ಪತ್ರ ಬರೆದಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಜತೆ ಮಾತನಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಯಾರಿದ್ದಾರೆ. 

ತುಮಕೂರು (ಜೂ.26): ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧ ರಾಜ್ಯ ಬಿಜೆಪಿ ಸರ್ಕಾರಕ್ಕೆ ಪತ್ರ ಬರೆದಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಜತೆ ಮಾತನಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಯಾರಿದ್ದಾರೆ. ಆದರೆ ದೇವೇಗೌಡರೇ ಚರ್ಚೆಗೆ ಬಾರದೆ ಮಾರ್ಗದಲ್ಲಿ ಕುಳಿತುಕೊಳ್ತೇನೆ ಅಂದರೆ ಹೇಗೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಪ್ರಶ್ನಿಸಿದ್ದಾರೆ. 

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕುವೆಂಪು ಕುರಿತಂತೆ ಪಠ್ಯದಲ್ಲಿ ಹೆಚ್ಚಿನ ವಿಚಾರ ಸೇರಿಸಿದ್ದು ಬಿಜೆಪಿ. ಕುವೆಂಪು ಅವರ ಎರಡು ಕವನಗಳನ್ನು ನಾಡಗೀತೆ, ರೈತಗೀತೆ ಮಾಡಿದ್ದು ಬಿಜೆಪಿ. ಹಾಗಾಗಿ ನಾವು ಕುವೆಂಪು ಅವರಿಗೆ ಅಪಮಾನ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ ಸದಾನಂದಗೌಡರು, ಪಠ್ಯದಲ್ಲಿ ಕೆಲವು ಸಣ್ಣಪುಟ್ಟಬದಲಾವಣೆ ಮಾಡಲು ಸರ್ಕಾರ ಒಪ್ಪಿಕೊಂಡಿದೆ ಎಂದು ತಿಳಿಸಿದರು. ಎಲ್ಲವೂ ರಾಜಕೀಯ ಪ್ರೇರಿತವಾಗಿರಬಾರದು. ಈಗಾಗಲೇ ಕೆಲವು ಬದಲಾವಣೆಗಳನ್ನ ಮಾಡಲಾಗಿದೆ. 

ಆರೆಸ್ಸೆಸ್‌ ಕಂಡರೆ ಎಲ್ಲರಿಗೂ ಭಯ: ಸದಾನಂದಗೌಡ ಮಾತಿಗೆ ಸಿದ್ದು ತಿರುಗೇಟು!

ನಾವು ಯಾವುದರಲ್ಲೂ ರಾಜಕಾರಣ ತುರುಕಿ, ಬೆಳೆಯುವಂತಹ ಮಕ್ಕಳ ಮನಸ್ಸನ್ನು ಹಾಳು ಮಾಡಲು. ದೇಶದ ಸಂಸ್ಕೃತಿ, ಸಂಸ್ಕಾರ ಉಳಿಯಬೇಕು. ಪರದೇಶದ ಶಿಕ್ಷಣ ಪದ್ಧತಿಯಿಂದ ನಾವು ಹೊರಬರಲೇಬೇಕು. ಮೆಕಾಲೆ ಆಧಾರಿತ ಶಿಕ್ಷಣ ಪದ್ದತಿಯನ್ನ ಭಾರತೀಯ ಶಿಕ್ಷಣ ಪದ್ಧತಿಯಾಗಿ ಬದಲಾಯಿಸಬೇಕು. ಹಾಗಂತ ನಾನು ಗುರುಕುಲ ಶಿಕ್ಷಣ ಪದ್ಧತಿ ಬೇಕು ಅಂತಾ ಹೇಳುತ್ತಿಲ್ಲಾ. ಭಾರತೀಯ ಸಂಸ್ಕೃತಿಯ ಮೂಲ ಬೇರಿನೊಂದಿಗೆ ನಮ್ಮ ಶಿಕ್ಷಣ ಪದ್ಧತಿ ಸಾಗಬೇಕು ಎಂದು ಸ್ಪಷ್ಟಪಡಿಸಿದರು.

ತುರ್ತು ಪರಿಸ್ಥಿತಿಗೆ 47 ವರ್ಷ: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ 47 ವರ್ಷಗಳಾದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಶನಿವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಕರಾಳ ದಿನ ಆಚರಿಸಲಾಯಿತು. ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಕಾಂಗ್ರೆಸ್‌ ಸರ್ಕಾರ ತುರ್ತು ಪರಿಸ್ಥಿತಿ ಹೇರುವ ಮೂಲಕ ದೇಶದಲ್ಲಿ ಸ್ವಾತಂತ್ರ್ಯ ಹರಣ ನಡೆಸಿತ್ತು ಎಂದು ಆರೋಪಿಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣೆ ಕೂಗಿದರು.

ಶಿರಾಡಿಘಾಟ್‌ ಸುರಂಗ ಮಾರ್ಗ ನಿರ್ಮಾಣದ ಮೆಗಾ ಯೋಜನೆ ಕೇಂದ್ರದ ಮುಂದಿದೆ: ಸದಾನಂದಗೌಡ

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಸಂಸದ ಪಿ.ಸಿ.ಮೋಹನ್‌, ಬಿಜೆಪಿ ಮುಖಂಡ ಸಪ್ತಗಿರಿಗೌಡ ಮತ್ತಿತರರು ಕೈದಿಗಳನ್ನು ಇರಿಸುತ್ತಿದ್ದ ಬ್ಯಾರಕ್‌ ಮತ್ತಿತರ ಸ್ಥಳಗಳನ್ನು ವೀಕ್ಷಿಸಿದರು. ತುರ್ತು ಪರಿಸ್ಥಿತಿ ಮುಗಿದ ಬಳಿಕ ಜೈಲಿನಿಂದ ಬಿಡುಗಡೆಯಾಗಿ ಹೊರಬರುತ್ತಿರುವ ಲಾಲ್‌ಕೃಷ್ಣ ಅಡ್ವಾಣಿ, ರಾಮಕೃಷ್ಣ ಹೆಗಡೆ, ಜೆ.ಎಚ್‌.ಪಟೇಲ್‌, ರಾಮ ಜೋಯಿಸ್‌, ಅನಂತಕುಮಾರ್‌ ಅವರಿರುವ ಅಪರೂಪದ ಛಾಯಾಚಿತ್ರವನ್ನು ಇದೇ ಸಂದರ್ಭದಲ್ಲಿ ಪ್ರದರ್ಶಿಸಿದರು.