Asianet Suvarna News Asianet Suvarna News

Textbook Revision; ‘ಆಡಿಸಿ ನೋಡು’ ಗೀತೆಯ ಕರ್ತೃ ಹೆಸರೇ ಬದಲು ಮಾಡಿದ ಚಕ್ರತೀರ್ಥ ಸಮಿತಿ!

ರಾಜ್ಯೋತ್ಸವ ಮೆರವಣಿಗೆಗೆ ಪಠ್ಯದಿಂದ ಕೊಕ್‌

- 6ನೇ ತರಗತಿ ಪಠ್ಯ ಪರಿಷ್ಕರಣೆ ವೇಳೆ ಕನ್ನಡಕ್ಕೆ ಅವಮಾನ ಆರೋಪ

textbook revision committee  changed Aadisi Nodu Beelisi Nodu song author name  Chi Udayashankar to R N Jayagopal
Author
Bengaluru, First Published Jun 6, 2022, 2:50 PM IST

ಬೆಂಗಳೂರು (ಜೂ.6): ಪಠ್ಯ ಪರಿಷ್ಕರಣೆ (Textbook Revision) ವಿವಾದ ಮುಗಿಯದ ಅಧ್ಯಾಯವಾದಂತಿದೆ. ಇದೀಗ ತರಗತಿಯೊಂದರ ಪಠ್ಯದಲ್ಲಿ ಚಿತ್ರ ಸಾಹಿತಿ ಚಿ.ಉದಯಶಂಕರ್‌ (Chi Udayashankar) ಅವರ ಅವರ ರಚನೆಯ ‘ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು’ (ಡಾ.ರಾಜ್‌ಕುಮಾರ್‌ ಅವರ ಕಸ್ತೂರಿ ನಿವಾಸ ಚಿತ್ರದ ಪ್ರಮುಖ ಹಾಡು) ಗೀತೆಯನ್ನು ಆರ್‌.ಎನ್‌.ಜಯಗೋಪಾಲ್‌ (R  N Jayagopal) ಅವರು ರಚಿಸಿದ್ದು ಎಂದು ತಪ್ಪಾಗಿ ಮುದ್ರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಗೀತೆಯ ರಚನಕಾರರ ಸ್ಥಳದಲ್ಲಿ ಉದಯಶಂಕರ್‌ ಹೆಸರು ಬದಲು ಆರ್‌.ಎನ್‌. ಜಯಗೋಪಾಲ್‌ ಅವರ ಹೆಸರಿರುವ ಪಠ್ಯದ ಪುಟವೊಂದರ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದರ ಜೊತೆ ಕನ್ನಡ ರಾಜ್ಯೋತ್ಸವದ ಕುರಿತು ಆರನೇ ತರಗತಿಯ ಕನ್ನಡ ಭಾಷಾ ಪಠ್ಯದಲ್ಲಿ ತಾಯಿ ಭುವನೇಶ್ವರಿಯ ‘ಮೆರವಣಿಗೆ’ ಕುರಿತ ಪಾಠವನ್ನು ರೋಹಿತ್‌ ಚಕ್ರತೀರ್ಥ (Rohith Chakrathirtha ) ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಕೈಬಿಟ್ಟಿರುವ ಆರೋಪ ಕೇಳಿ ಬಂದಿದೆ.

ಪಠ್ಯಪುಸ್ತಕ ಪರಿಷ್ಕರಣೆ ಮೂಲಕ ಶಿಕ್ಷಣವನ್ನೇ ಬುಡಮೇಲು ಮಾಡಲಾಗಿದೆಯೇ?

6ನೇ ತರಗತಿ ‘ಸಿರಿಗನ್ನಡ’ ಪ್ರಥಮ ಭಾಷಾ ಪಠ್ಯಪುಸ್ತಕದಲ್ಲಿ ಆರನೇ ಗದ್ಯವಾಗಿ ಮೆರವಣಿಗೆ ಪಾಠವಿತ್ತು. ಈ ಪಠ್ಯವನ್ನು ಹಿಂದಿನ ಸಮಿತಿಯೇ ರೂಪಿಸಿತ್ತು. ಕನ್ನಡ ರಾಜ್ಯೋತ್ಸವಕ್ಕಾಗಿ ಶಾಲೆಯೊಂದರಲ್ಲಿ ನಡೆದ ಸಿದ್ಧತೆ, ನವೆಂಬರ್‌ 1ರ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ಹಾಗೂ ಭುವನೇಶ್ವರಿ ತಾಯಿಯ ಮೆರವಣಿಗೆಯನ್ನು ತಿಳಿಸುವ ಪಾಠ ಇದಾಗಿತ್ತು. ಆದರೆ, ಈ ಪಾಠವನ್ನು ಕೈಬಿಟ್ಟು ಬದಲಾಗಿ ಹುಬ್ಬಳ್ಳಿಯ ಸಿದ್ಧಾರೂಢ ಮಠದಿಂದ ಪ್ರತಿ ವರ್ಷ ನಡೆಯುವ ‘ಸಿದ್ಧಾರೂಢ ಜಾತ್ರೆ’ ಪಾಠವನ್ನು ಸೇರಿಸಲಾಗಿದೆ ಎನ್ನಲಾಗುತ್ತಿದೆ.

ಭಾರತವು ನೂರಾರು ಮಠಮಾನ್ಯಗಳಿಂದ ತುಂಬಿರುವ ದೇಶ. ಇಲ್ಲಿ ಪ್ರತಿ ಧಾರ್ಮಿಕ ಸಂಸ್ಥೆಯೂ ತನ್ನ ಆಚರಣೆ, ಸಂಪ್ರದಾಯ, ಸಮಾಜಸೇವೆ ಇತ್ಯಾದಿ ಕೆಲಸಗಳಿಂದ ವಿಶಿಷ್ಟವಾಗಿ ನಿಲ್ಲುತ್ತದೆ. ಹೀಗೆ ಹೊಸ ಪಾಠ ಆರಂಭವಾಗಿ ಆರಂಭವಾಗುತ್ತದೆ. ರುಸ್ತುಂ ಎಂಬ ಹುಡುಗ ಸಿದ್ಧಾರೂಢರ ಕುರಿತು ಹೇಳುತ್ತಾನೆ. ನಂತರ ಹಸೀನಾ ಎಂಬ ಹುಡುಗಿ ಕೂಡ ಮಠದ ಬಗ್ಗೆ ಮಾಹಿತಿ ಕೇಳುತ್ತಾಳೆ. ಗುರುಗಳು ವಿವರಿಸುತ್ತಾ ಹೋಗುವ ಪಾಠ ಇದಾಗಿದೆ.

6ನೇ ತರಗತಿ ಪಠ್ಯದಲ್ಲಿ ಕನ್ನಡಕ್ಕೆ ಅವಮಾನ, ಚಕ್ರತೀರ್ಥ ವಿರುದ್ಧ ಹೊಸ ಆರೋಪ!

ಸಿದ್ಧಾರೂಢರ ಜಾತ್ರೆಯನ್ನು ಪಠ್ಯದಲ್ಲಿ ಸೇರಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಯಾವುದೇ ಆಕ್ಷೇಪವಿಲ್ಲ. ಆದರೆ, ರಾಜ್ಯೋತ್ಸವ ಪಾಠವನ್ನು ತೆಗೆಯುವ ಬದಲು ಅದನ್ನು ಹಾಗೇ ಉಳಿಸಿಕೊಂಡು ಜಾತ್ರೆಯ ಪಾಠವನ್ನು ಬೇರೆಡೆ ಸೇರಿಸಬಹುದಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇದಲ್ಲದೇ ಹೊಸದಾಗಿ ಸೇರಿಸಿರುವ ಸಿದ್ಧಾರೂಢ ಜಾತ್ರೆಯ ಪಾಠದಲ್ಲಿ ತೇರಿನ ಮುಂದೆ ಕೇಸರಿ ಬಾವುಟ ಹಾರಾಡುತ್ತಿರುವ ಚಿತ್ರವನ್ನು ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ.

ಆಕ್ಷೇಪಾರ್ಹ ವಿಚಾರಗಳಿದ್ದರೆ ಗಮನಕ್ಕೆ ತನ್ನಿ: ಕನ್ನಡ ರಾಜ್ಯೋತ್ಸವ (Kannada Rajyotsava) ಕುರಿತ ಪಾಠವನ್ನು ಪಠ್ಯದಿಂದ ಕೈಬಿಟ್ಟಿರುವುದು ಇದುವರೆಗೆ ನನ್ನ ಗಮನಕ್ಕೆ ಬಂದಿಲ್ಲ. ಪರಿಶೀಲಿಸಲಾಗುವುದು. ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಯಾವುದಾದರೂ ಆಕ್ಷೇಪಾರ್ಹ ವಿಷಯಗಳಿದ್ದಲ್ಲಿ ಅವುಗಳನ್ನು ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರ್ಕಾರ ಹೊಂದಿದೆ ಎಂದು ಈಗಾಗಲೇ ಮುಖ್ಯಮಂತ್ರಿ ಅವರು ಹೇಳಿದ್ದಾರೆ. ಹೀಗಾಗಿ ಅನಗತ್ಯವಾಗಿ ಮತ್ತಷ್ಟುವಿವಾದ ಸೃಷ್ಟಿಸುವ ಪ್ರಯತ್ನ ಮಾಡುವ ಬದಲು ಯಾವುದೇ ಆಕ್ಷೇಪಗಳಿದ್ದರೆ ಸಲ್ಲಿಸಲಿ, ಪರಿಷ್ಕರಣೆಗೆ ಮುಕ್ತ ಅವಕಾಶವಿದೆ ಎಂದು  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದ್ದಾರೆ.

Follow Us:
Download App:
  • android
  • ios