Asianet Suvarna News Asianet Suvarna News

ವಿದ್ಯಾರ್ಥಿಗಳಿಗೆ ಖುಷಿ ಸುದ್ದಿ ನೀಡಿದ ಸರ್ಕಾರ: ಸರ್ಕಾರಿ ಕಾಲೇಜು ಪಿಜಿ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶದ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿ ಆದೇಶ ಹೊರಡಿಸಿದೆ. 
 

There is no increase in government college PG course fees gvd
Author
First Published Oct 2, 2023, 2:00 AM IST

ಬೆಂಗಳೂರು (ಅ.02): ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶದ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿ ಆದೇಶ ಹೊರಡಿಸಿದೆ. ಎಂಸಿಎ, ಎಂಬಿಎ ಒಳಗೊಂಡಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಗೆ 2023-24 ನೇ ಸಾಲಿನಲ್ಲಿ ಪ್ರವೇಶ ಪಡೆಯಲಿರುವ ವಿದ್ಯಾರ್ಥಿಗಳಿಗೆ ಹಿಂದಿನ ವರ್ಷದ ಶುಲ್ಕವೇ ಅನ್ವಯವಾಗಲಿದೆ. 

ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಕೆಲವು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆರಂಭಿಸಿರುವ ಪಿಜಿ ಕೋರ್ಸ್‌ಗಳಿಗೆ 2019-20 ನೇ ಸಾಲಿನಲ್ಲಿದ್ದ ಶುಲ್ಕವನ್ನು ಮುಂದಿನ ವರ್ಷಗಳಲ್ಲೂ ಮುಂದುವರೆಸಲಾಗಿತ್ತು. ಇದೀಗ 2023-24 ನೇ ಸಾಲಿಗೂ ಅದೇ ಶುಲ್ಕವನ್ನೇ ನಿಗದಿ ಮಾಡಲಾಗಿದೆ. ಗ್ರಾಮಿಣ ಪ್ರದೇಶದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಪಾಲಕರಿಗೆ ಆರ್ಥಿಕ ಹೊರೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನನ್ನ ಚಿತ್ರಕ್ಕೂ ಕಾವೇರಿ ವಿವಾದಕ್ಕೂ ಸಂಬಂಧವೇ ಇಲ್ಲ: ನಟ ಸಿದ್ದಾರ್ಥ್‌

ಪಿಯು ಮೌಲ್ಯಮಾಪನ ಭತ್ಯೆ ಬಿಡುಗಡೆಗೆ ಅ.3ರ ಗಡುವು: ಕಳೆದ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ, ಜೂನ್‌ನಲ್ಲಿ ನಡೆದ ಮೊದಲ ಹಾಗೂ ಆಗಸ್ಟ್-ಸೆಪ್ಟೆಂಬರ್‌ನಲ್ಲಿ ನಡೆದ ಎರಡನೇ ಪೂರಕ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ಸಂಭಾವನೆ ಮತ್ತು ಭತ್ಯೆಯನ್ನು ಅಕ್ಟೋಬರ್‌ 3ರೊಳಗೆ ಉಪನ್ಯಾಸಕರಿಗೆ ಬಿಡುಗಡೆ ಮಾಡದಿದ್ದರೆ ಮಂಡಳಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಶಿಕ್ಷಕ ಮತ್ತು ಆಡಳಿತ ಮಂಡಳಿ ಫೋರಂ, ಶಿಕ್ಷಣ ಇಲಾಖೆಯನ್ನು ಎಚ್ಚರಿಸಿದೆ.

ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷರಿಗೆ ಪತ್ರ ಬರೆದಿರುವ ಫೋರಂನ ಅಧ್ಯಕ್ಷ ಎ.ಪಿ.ರಂಗನಾಥ್‌, ಶಿಕ್ಷಣ ಇಲಾಖೆಯು ನಡೆಸಿದ ಮೂರೂ ಪರೀಕ್ಷೆಗಳ ಮೌಲ್ಯಮಾಪನದ ಸಂಭಾವನೆಯನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ. ಉಪನ್ಯಾಸಕರು ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಕಾವೇರಿ ನೀರಿನ ಸಮಸ್ಯೆಗೆ ಮೇಕೆದಾಟು ಪರಿಹಾರ: ಸಂಸದ ಡಿ.ಕೆ.ಸುರೇಶ್

ಪರೀಕ್ಷೆ ಮತ್ತು ಮೌಲ್ಯಮಾಪನದಲ್ಲಿ ಭಾಗಿಯಾಗುವ ಮೂಲಕ ಮಂಡಳಿಯ ಯಶಸ್ಸಿಗೆ ಕಾರಣಕರ್ತರಾಗಿದ್ದೇವೆ. ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಪರೀಕ್ಷಾ ಶುಲ್ಕವನ್ನು ಮೌಲ್ಯಮಾಪಕರಿಗೆ ನೀಡಲು ಯಾವ ಕಾರಣಕ್ಕೆ ವಿಳಂಬ ಮಾಡಲಾಗುತ್ತಿದೆ ಎಂಬುದು ತಿಳಿಯುತ್ತಿಲ್ಲ ಎಂದು ಉಪನ್ಯಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.

Follow Us:
Download App:
  • android
  • ios