Asianet Suvarna News Asianet Suvarna News

ಪ್ರತಿಭಾವಂತ ವಿದ್ಯಾರ್ಥಿಗಳೇ... ಈ ಸ್ಕಾಲರ್‌ಶಿಪ್‌ಗಳನ್ನು ಗಮನಿಸಿ!

*ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಮುಂದುವರಿಸಲು ಸ್ಕಾಲರ್‌ಶಿಪ್‌ಗಳು ನೆರವು ನೀಡುತ್ತವೆ
*ಸಾಕಷ್ಟು ಸಂಘ ಸಂಸ್ಥೆಗಳು, ಕಂಪನಿಗಳು, ಶೈಕ್ಷಣಿಕ ಸಂಸ್ಥೆಗಳು ವಿದ್ಯಾರ್ಥಿ ವೇತನಗಳನ್ನು ಒದಗಿಸುತ್ತವೆ
*ಅರ್ಹ, ಬಡ ಹಾಗೂ ಕೆಲವು ನಿರ್ದಿಷ್ಟ ಮಾನದಂಡಗಳನ್ನು ಪೂರೈಸುವವರಿಗೆ ಈ ವೇತನಗಳು ಸಿಗಲಿವೆ

These three Scholarship can help needy and meritorious student
Author
First Published Oct 13, 2022, 2:50 PM IST

ಪ್ರತಿಭೆ ಇದ್ದೂ ಓದಲು ಹಣಕಾಸಿನ ತೊಂದರೆ ಇರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಗಳು(Scholarship)ಗಳು ನೆರವು ಒದಗಿಸುತ್ತವೆ. ಅದೇ ಕಾರಣಕ್ಕೆ ನಾವು ನಾನಾ ರೀತಿಯ ಸ್ಕಾಲರ್‌ಶಿಪ್‌ಗಳನ್ನು ಕಾಣಬಹುದು. ಅವುಗಳ ಉದ್ದೇಶವಿಷ್ಟೇ, ಹಣಕಾಸಿನ ಕಾರಣಕ್ಕೆ ಪ್ರತಿಭಾವಂತರ ಓದು (Education) ಅರ್ಧಕ್ಕೆ ನಿಲ್ಲಬಾರದು ಎಂಬುದು. ಹಾಗಾಗಿ, ಸ್ಕಾಲರ್‌ಶಿಪ್ ಮತ್ತು ಫೆಲೋಶಿಪ್‌ (Fellowship) ಪ್ರೋಗ್ರಾಮ್‌ಗಳನ್ನು ರೂಪಿಸಲಾಗಿರುತ್ತದೆ. ವಿವಿಧ ಶೈಕ್ಷಣಿಕ ಅರ್ಹತೆಗಳು, ವಯಸ್ಸು ಮತ್ತು ಸಾಂಸ್ಕೃತಿಕ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ  ಅನ್ವಯಿಸುತ್ತವೆ. ಉತ್ತಮ ಸ್ಕಾಲರ್‌ಶಿಪ್ ಕಾರ್ಯಕ್ರಮಗಳು,  ಉನ್ನತ ಸಂಸ್ಥೆಗಳಲ್ಲಿ ಅಧ್ಯಯನಕ್ಕೆ ಸಹಾಯ ಮಾಡುತ್ತವೆ.  ಇಲ್ಲದಿದ್ದರೆ ಉನ್ನತ ಶಿಕ್ಷಣದ ಖರ್ಚುವೆಚ್ಚಗಳನ್ನು ವಿದ್ಯಾರ್ಥಿಯು ಭರಿಸಲಾಗದು. ವಿದ್ಯಾರ್ಥಿವೇತನವು ಹಣಕಾಸಿನ ಒತ್ತಡವನ್ನು ಕಡಿಮೆ ಮಾಡುವುದರಿಂದ ವಿದೇಶದಲ್ಲಿ ಅಧ್ಯಯನ ಮಾಡಲು ಹೆಚ್ಚು ಸುಲಭವಾಗುತ್ತದೆ. ಆದರೆ, ಬಹಳಷ್ಟು ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿಯೇ ಇರುವುದಿಲ್ಲ. ಅಂಥ ಕೆಲವು ಸ್ಕಾಲರ್‌ಶಿಪ್‌ಗಳ ಬಗ್ಗೆ ನಾವಿಲ್ಲಿ ಮಾಹಿತಿಯನ್ನು ನೀಡುತ್ತಿದ್ದೇವೆ. 

ಲೋರಿಯಲ್‌ನಿಂದ 2.5 ಲಕ್ಷ ರೂ. ಸ್ಕಾಲರ್‌ಶಿಪ್, ಅಪ್ಲೈ ಮಾಡಿ

ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ಸ್ಕಾಲರ್ಶಿಪ್: ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ 1 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳು ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಂದ ತಮ್ಮ ಶಿಕ್ಷಣವನ್ನು ಮುಂದುವರಿಸಲು ಅವರನ್ನು ಬೆಂಬಲಿಸಲು ಅರ್ಜಿಗಳನ್ನು ಆಹ್ವಾನಿಸುತ್ತದೆ. ಕೋವಿಡ್-19 ಕಾರಣದಿಂದಾಗಿ ತಮ್ಮ ಪೋಷಕರನ್ನು ಕಳೆದುಕೊಂಡಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಅರ್ಜಿದಾರರು 1ರಿಂದ 12 ನೇ ತರಗತಿಗಳು ಮತ್ತು ಪದವಿಪೂರ್ವ (ಸಾಮಾನ್ಯ ಮತ್ತು ವೃತ್ತಿಪರ) ಕೋರ್ಸ್‌ಗಳಲ್ಲಿ ಓದುತ್ತಿರಬೇಕು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ನವೆಂಬರ್ 10 ಕೊನೆಯ ದಿನಾಂಕವಾಗಿದೆ. ಒಂದೇ ಹಂತದಲ್ಲಿ 60 ಸಾವಿರ ರೂ. ಸ್ಕಾಲರ್ಶಿಪ್ ಸಿಗಲಿದೆ.

ಜಿಎಸ್ಕೆ ವಿದ್ಯಾರ್ಥಿವೇತನ: GSK ವಿದ್ವಾಂಸರ ಕಾರ್ಯಕ್ರಮದಡಿ ಸರ್ಕಾರಿ ಕಾಲೇಜುಗಳಲ್ಲಿ ಪ್ರಥಮ ವರ್ಷದ MBBS ಓದುತ್ತಿರುವ ಅರ್ಹ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಬೆಂಬಲಿಸುತ್ತದೆ. 12ನೇ ತರಗತಿಯಲ್ಲಿ ಕನಿಷ್ಠ 65% ಅಂಕಗಳನ್ನು ಹೊಂದಿರುವ ಪ್ರಥಮ ವರ್ಷದ MBBS ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ 6,00,000ಕ್ಕಿಂತ ಕಡಿಮೆ ಇರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅಕ್ಟೋಬರ್ 15 ಕೊನೆಯ ದಿನವಾಗಿದೆ. ವಾರ್ಷಿಕ 1 ಲಕ್ಷ ರೂ. ವಿದ್ಯಾರ್ಥೀವೇತನ ಸಿಗಲಿದೆ. 

ಕೀಪ್ ಇಂಡಿಯಾ ಸ್ಮೈಲಿಂಗ್ ಫೌಂಡೇಷನಲ್ ಸ್ಕಾಲರ್ ಶಿಪ್: ಇದು ಕೋಲ್ಗೇಟ್-ಪಾಮೋಲಿವ್ (ಇಂಡಿಯಾ) ಲಿಮಿಟೆಡ್ ಯುವ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಒದಗಿಸುವ ಸ್ಕಾಲರ್‌ಶಿಪ್ ಆಗಿದೆ. ಪ್ರತಿಭಾವಂತರಾಗಿದ್ದೂ ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾ ಸಂಪನ್ಮೂಲಗಳ ಕೊರತೆಯನ್ನು ಎದುರಿಸುತ್ತಿರುವವರಿಗೆ ಈ ವಿದ್ಯಾರ್ಥಿವೇತನದ ಲಾಭ ದೊರೆಯಲಿದೆ. ಅರ್ಜಿದಾರರು ಪದವೀಧರರಾಗಿರಬೇಕು ಮತ್ತು ಹಿಂದುಳಿದ ಮಕ್ಕಳ ಗುಂಪಿಗೆ ಕಲಿಸುವುದು ಅಥವಾ ಅವರಿಗೆ ಕ್ರೀಡಾ ತರಬೇತಿ ನೀಡುವಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರಬೇಕು. ಕ್ರೀಡಾಪಟುಗಳಿಗೆ, ಅರ್ಜಿದಾರರು ಕಳೆದ 2/3 ವರ್ಷಗಳಲ್ಲಿ ರಾಜ್ಯ/ ರಾಷ್ಟ್ರೀಯ/ ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಜ್ಯ/ ದೇಶವನ್ನು ಪ್ರತಿನಿಧಿಸಿರಬೇಕು. ಅವರು ರಾಷ್ಟ್ರೀಯ ಶ್ರೇಯಾಂಕದಲ್ಲಿ 500 ರೊಳಗೆ / ರಾಜ್ಯ ಶ್ರೇಯಾಂಕದಲ್ಲಿ 100 ರೊಳಗೆ ಸ್ಥಾನ ಪಡೆದಿರಬೇಕು. ಅವರು 9 ರಿಂದ 20 ವರ್ಷ ವಯಸ್ಸಿನವರಾಗಿರಬೇಕು.  ಎಲ್ಲಾ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ವಾರ್ಷಿಕ  5 ರೂ.ಗಿಂತ ಲಕ್ಷಗಳಿಗಿಂತ ಕಡಿಮೆಯಿರಬೇಕು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಡಿಸೆಂಬರ್ 31 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮೂರು ವರ್ಷಗಳ ಕಾಲ ವಾರ್ಷಿಕ 75 ಸಾವಿರ ರೂ. ವಿದ್ಯಾರ್ಥಿವೇತನ ದೊರೆಯಲಿದೆ.

SBIಬ್ಯಾಂಕಿನಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್, ಅಪ್ಲೈ ಮಾಡಿ    

Follow Us:
Download App:
  • android
  • ios