Asianet Suvarna News Asianet Suvarna News

KEA Assistant Professor Exam: ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷಾ ಕೇಂದ್ರಕ್ಕೆ ಅಶ್ವತ್ಥನಾರಾಯಣ ಭೇಟಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇರುವ 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆ ಅತ್ಯಂತ ಪಾರದರ್ಶಕವಾಗಿ ಮತ್ತು ಯಾವುದೇ ಅಕ್ರಮಗಳಿಲ್ಲದೆ ಕಟ್ಟುನಿಟ್ಟಾಗಿ ನಡೆಯುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

transparent competitive examination for recruitment of assistant professors in karnataka gow
Author
Bengaluru, First Published Mar 12, 2022, 7:44 PM IST | Last Updated Mar 12, 2022, 7:44 PM IST

ಬೆಂಗಳೂರು(ಮಾ.12): ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (government first grade college) ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆ (assistant professors) ನೇಮಕಾತಿಯ ಭಾಗವಾಗಿ ಶನಿವಾರದಿಂದ ಆರಂಭವಾಗಿರುವ ಸ್ಪರ್ಧಾತ್ಮಕ ಪರೀಕ್ಷೆ ಅತ್ಯಂತ ಪಾರದರ್ಶಕವಾಗಿ ಮತ್ತು ಯಾವುದೇ ಅಕ್ರಮಗಳಿಲ್ಲದೆ ಕಟ್ಟುನಿಟ್ಟಾಗಿ ನಡೆಯುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (Dr. cn  Ashwathnarayan) ಹೇಳಿದ್ದಾರೆ.

ಮಲ್ಲೇಶ್ವರಂ 13ನೇ ಅಡ್ಡರಸ್ತೆಯಲ್ಲಿರುವ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದಕ್ಕೆ ಮೊದಲ ದಿನವಾದ ಶನಿವಾರ ಭೇಟಿ ನೀಡಿ, ಪರೀಕ್ಷಾ ಪ್ರಕ್ರಿಯೆಯನ್ನು ವೀಕ್ಷಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

 

ಬೋಧನಾ ವೃತ್ತಿಗೆ ಇವತ್ತು ಆಕರ್ಷಕ ವೇತನ ಇದ್ದು, ಇಲ್ಲಿಗೆ ಅರ್ಹರನ್ನು ತರಬೇಕಾಗಿದೆ. ಅದರಲ್ಲೂ ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಬೋಧಕರ ಅಗತ್ಯ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಕ್ಷವಾಗಿ ಕಾರ್ಯನಿರ್ವಹಿಸುತ್ತಿದ್ದು, ದೇಶದ ಉಳಿದ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದ ಎಲ್ಲ  ಕೇಂದ್ರಗಳಲ್ಲೂ ಪರೀಕ್ಷೆ ಸುಗಮವಾಗಿ‌ ನಡೆದಿದೆ. ಯಾವುದೇ ಗೊಂದಲಗಳಿಗೆ ಆಸ್ಪದ ಇಲ್ಲದಂತೆ ಕ್ರಮವಹಿಸಲಾಗಿದೆ ಎಂದು ಅವರು ತಿಳಿಸಿದರು. ಮಾರ್ಚ್ 12ರಿಂದ 16ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.

KARNATAKA TEACHERS RECRUITMENT: 10 ದಿನದಲ್ಲಿ 15000 ಶಿಕ್ಷಕರ ನೇಮಕಾತಿಗೆ ನೋಟಿಫಿಕೇಶ್ ಬಿಡುಗಡೆ 

10 ದಿನದಲ್ಲಿ 15000 ಶಿಕ್ಷಕರ ನೇಮಕಾತಿಗೆ ನೋಟಿಫಿಕೇಶನ್‌ ಬಿಡುಗಡೆ: ಶಿಕ್ಷಕರ ನೇಮಕಾತಿ (Teachers Recruitment) ಪ್ರಕ್ರಿಯೆ ಎಲ್ಲವೂ ಮುಗಿದಿದ್ದು, ಇನ್ನು 10 ದಿನಗಳಲ್ಲಿ ನೋಟಿಫಿಕೇಶ್ ಬಿಡಲಾಗುತ್ತದೆ. ಏಜ್ ಲಿಮಿಟ್ ಬದಲಾವಣೆ ಸೇರಿದಂತೆ ಹಲವು ಕೆಲಸಗಳನ್ನು ನಡೆಸಲಾಗಿದೆ. ರಾಜ್ಯದಲ್ಲಿ ಸುಮಾರು 15000 ಶಿಕ್ಷಕರ ನೇಮಕಾತಿ ನಡೆಯುತ್ತದೆ. 5000 ಕಲ್ಯಾಣ ಕರ್ನಾಟಕ ಹಾಗೂ ಉಳಿದವು ರಾಜ್ಯದ ಇತರ ಭಾಗಕ್ಕೆ ನೇಮಕಾತಿಯಾಗಲಿದೆ ಎಂದು  ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಎನ್. ನಾಗೇಶ್ (Education Minister BC Nagesh) ಕಾರವಾರದಲ್ಲಿ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಪದವಿ ಪೂರ್ವ ಮಹಾವಿದ್ಯಾಲಯಗಳ ನೌಕರರ ಸಂಘ ಹಾಗೂ ಉತ್ತರ ಕನ್ನಡ ಜಿಲ್ಲೆ ಪಿಯು ಪ್ರಾಚಾರ್ಯರ ಸಂಘದ ಸಂಯುಕ್ತಾಶ್ರಯದಲ್ಲಿ ಕಾರವಾರದಲ್ಲಿ ಆಯೋಜಿಸಿದ್ದ 'ರಾಷ್ಟ್ರೀಯ ‌ಶಿಕ್ಷಣ ನೀತಿ-2020' ವಿಚಾರ ಸಂಕಿರಣ ಹಾಗೂ 'ಪದವಿ ಪೂರ್ವ ನೌಕರರ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನ'ವನ್ನು ಉದ್ಘಾಟಿಸಿದ  ಬಳಿಕ ಈ ಹೇಳಿಕೆ ನೀಡಿದ್ದಾರೆ.

CBSE 10th Term 1 Result Declared: ಸಿಬಿಎಸ್‌ಇ 10ನೇ ತರಗತಿ ಟರ್ಮ್ 1ರ ಫಲಿತಾಂಶ ಪ್ರಕಟ

ಮುಂದಿನ ವರ್ಷ ರಾಜ್ಯದ ಸುಮಾರು 20ಸಾವಿರ ಶಾಲೆಗಳಲ್ಲಿ ಅರ್ಲಿ ಚೈಲ್ಡ್ ಎಜ್ಯುಕೇಶನ್ (ECE) ಪರಿಚಯಿಸಲಿದ್ದೇವೆ. 1-2 ವರ್ಷದ ಮಕ್ಕಳನ್ನು ಪ್ರೈಮರಿ ಸೆಕ್ಷನ್ ಹಾಗೂ 3ನೇ ವರ್ಷದ ಮಗುವಿನ ಅಭ್ಯಾಸವನ್ನು ಅಂಗನವಾಡಿಯಲ್ಲಿ ಮಾಡಲು ಸರಕಾರ ನಿರ್ಧರಿಸಿದೆ. ಅಗತ್ಯವಿರುವ ತರಬೇತಿ ನಿಧಾನಕ್ಕೆ ನೀಡುತ್ತಾ ಯೋಜನೆ ಪರಿಚಯಿಸುತ್ತೇವೆ ಎಂದಿದ್ದಾರೆ.

ಇನ್ನು ಇದೇ ವೇಳೆ ಮಾತನಾಡಿದ ನಾಗೇಶ್ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಸಂಬಂಧಿಸಿ 2013ರಲ್ಲಿ ತಂದಂತಹ ಬದಲಾವಣೆಯನ್ನು ಸರಿಪಡಿಸುವ ಕೆಲಸ‌ ನಡೆಯುತ್ತಿದೆ. ಮುಂದಿನ ವರ್ಷದ ಪಠ್ಯ ಪುಸ್ತಕಗಳಲ್ಲಿ ತಪ್ಪು ಮಾಹಿತಿ ತೆಗೆದು ಹಾಕಿ ಸರಿಯಾದ ಮಾಹಿತಿ ನೀಡಲಾಗುತ್ತದೆ. ಎನ್‌ಇಪಿಯಲ್ಲಿ ದೇಶ ಸ್ವಾಭಿಮಾನ ಹಾಗೂ ಸ್ವಾವಲಂಭಿಯಾಗುವ ಶಿಕ್ಷಣ ನೀಡಲಾಗುತ್ತದೆ. ಇತಿಹಾಸದಲ್ಲಿ ಯಾವುದು ಹೇಳಬೇಕು ಹಾಗೂ ಯಾವುದು ಹೇಳಬಾರದು ಅನ್ನೋ ಎಚ್ಚರಿಕೆ ವಹಿಸಲಾಗುತ್ತದೆ ಎಂದು ಹೇಳಿದ್ದಾರೆ.

Latest Videos
Follow Us:
Download App:
  • android
  • ios