Tumakuru ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ವಾಸನೆ
ತುಮಕೂರು ಜಿಲ್ಲೆಯ ನವೋದಯ ಶಾಲೆ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮದ ವಾಸನೆ ಕಂಡು ಬಂದಿದೆ. ಜವಾಹರ ನವೋದಯ ವಿದ್ಯಾಲಯ 6ನೇ ತರಗತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ವರದಿ : ಮಹಂತೇಶ್ ಕುಮಾರ್, ಏಷ್ಯಾನೆಟ್ ಸುವರ್ಣ ನ್ಯೂಸ್
ತುಮಕೂರು (ಮೇ.5): ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಬಯಲಾಗಿ ರಾಜ್ಯಾದ್ಯಂತ ವಿವಾದ ಸೃಷ್ಟಿದ ಬೆನ್ನಲ್ಲೇ, ತುಮಕೂರು ಜಿಲ್ಲೆಯ ನವೋದಯ ಶಾಲೆ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮದ ವಾಸನೆ ಕಂಡು ಬಂದಿದೆ. ಜವಾಹರ ನವೋದಯ ವಿದ್ಯಾಲಯ 6ನೇ ತರಗತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಕೂಡಲೇ ಮರು ಪರೀಕ್ಷೆ ನಡೆಸಬೇಕೆಂದು ಪೋಷಕರು ತುಮಕೂರು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಗೆ ಮನವಿ ಮಾಡಿದ್ದಾರೆ.
ಏಪ್ರಿಲ್ 30 ರಂದು ತುಮಕೂರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಸಾಧ್ಯತೆಯಿದೆ ಎಂದು ಆರೋಪಿಸಿದ್ದಾರೆ. ಪರೀಕ್ಷಾ ಕೊಠಡಿಯ ಮೇಲ್ವಿಚಾರಕರೇ ಅಕ್ರಮದಲ್ಲಿ ಪಾಲುದಾರರಾಗಿದ್ದು, ಮೇಲ್ವಿಚಾರಕರೇ ತಮ್ಮ ಕೈಯಲ್ಲಿ ಉತ್ತರಗಳನ್ನು ಬರೆದುಕೊಂಡು ಬಂದು ಆಯ್ದ ವಿದ್ಯಾರ್ಥಿಗಳಿಗೆ ಹೇಳಿಕೊಡುವ ಮೂಲಕ ಅಕ್ರಮ ಎಸಗಿದ್ದಾರೆ. ಅಲ್ಲದೆ ಪರೀಕ್ಷಾ ಸಮಯ ಪಾಲನೆಯನ್ನು ಸರಿಯಾಗಿ ಮಾಡಿರುವುದಿಲ್ಲ.
ಕೋಲಾರ ಮಾವು ಬೆಳಗಾರರ ಬೇಡಿಕೆಗೆ ಕ್ಯಾರೇ ಎನ್ನದ ಸರಕಾರ!
ಕೆಲವು ಕೊಠಡಿಯಲ್ಲಿ ಕೊನೆಯವರೆಗೂ ವಿದ್ಯಾರ್ಥಿಗಳಿಗೆ ತಮ್ಮ ಹೆಸರು, ಸಹಿ, ರೋಲ್ ನಂ. ಹಾಗೂ ಇತರೆ ವಿವರಗಳನ್ನು ಬರೆಯದಂತೆ ಒತ್ತಡ ಹೇರಿರುತ್ತಾರೆ. ಇನ್ನು ಕೆಲವು ಪರೀಕ್ಷಾ ಕೊಠಡಿಯಲ್ಲಿ ಒಎಮ್‍ಆರ್ ಶೀಟನ್ನು ಸಂಪೂರ್ಣವಾಗಿ ಕೊಠಡಿ ಮೇಲ್ವಿಚಾರಕರೇ ತುಂಬಿರುವುದು ತಿಳಿದು ಬಂದಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಇದೇ ರೀತಿ ಇನ್ನೂ ಹಲವು ಪರೀಕ್ಷಾ ಕೇಂದ್ರಗಳಲ್ಲೂ ಅಕ್ರಮ ನಡೆದಿರುವುದಾಗಿ ತಿಳಿದು ಬಂದಿರುತ್ತದೆ. ಆದ್ದರಿಂದ ಜಿಲ್ಲಾಧಿಕಾರಿಗಳು ಕೂಲಂಕಷ ತನಿಖೆ ನಡೆಸುವುದರ ಮೂಲಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಮರು ಪರೀಕ್ಷೆ ನಡೆಸಬೇಕೆಂದು ಪರೀಕ್ಷೆ ಬರೆದ ಮಕ್ಕಳು ಹಾಗೂ ಪೋಷಕರು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಿದ್ದಾರೆ.
DAVANAGERE ಬ್ಲೂವೇಲ್ ಗೇಮ್ ವಿದ್ಯಾರ್ಥಿಯ ಜೀವನಕ್ಕೆ ಮುಳುವಾಯ್ತಾ?
ತಿಪಟೂರಿನ ಸರ್ಕಾರಿ ಮಾದರಿ ಶಾಲೆಗೆ 2 ಮಾರುತಿ ಇಕೋ ವಾಹನಗಳ ಹಸ್ತಾಂತರ: ಸರ್ಕಾರಿ ಮಾದರಿ ಶಾಲೆಗಳಿಗೆ (Government Model School) ಮಕ್ಕಳನ್ನು (Childrens) ಕರೆ ತರಲು ಕೆನರಾ ಬ್ಯಾಂಕ್ ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ನಿಧಿಯಡಿ ಒದಗಿಸಿರುವ ಎರಡು ಮಾರುತಿ ಇಕೋ ವಾಹನಗಳನ್ನು (Maruti Eco Vehicles) ತಿಪಟೂರಿನ ಈಚನೂರು ಹಾಗೂ ಅರಳಗುಪ್ಪೆ ಶಾಲೆಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ (BC Nagesh) ಅವರ ಸಮ್ಮುಖದಲ್ಲಿ ಕೆನರಾ ಬ್ಯಾಂಕ್ ಅಧಿಕಾರಿಗಳು, ಸರ್ಕಾರಿ ಶಾಲೆಗಳಿಗೆ ಹಸ್ತಾಂತರಿಸಿರು. ತಿಪಟೂರಿನ ಕೆನರಾ ಬ್ಯಾಂಕ್ ಶಾಖೆ ಎದುರು ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಎರಡು ವಾಹನಗಳನ್ನು ಶಾಲೆಗಳಿಗೆ ಹಸ್ತಾಂತರಿಸಲಾಯಿತು.
ಸಚಿವ ನಾಗೇಶ್ ಮಾತನಾಡಿ, ‘ಕಡಿಮೆ ಮಕ್ಕಳು ಮತ್ತು ಅಗತ್ಯಕ್ಕಿಂತ ಕಡಿಮೆ ಶಿಕ್ಷಕರಿಂದ ಶಾಲಾ ಮಕ್ಕಳಿಗೆ ಸಿಗಬೇಕಾದ ಸಮಗ್ರ ಶಿಕ್ಷಣ ದೊರಕುತ್ತಿಲ್ಲ. ಕಡಿಮೆ ಮಕ್ಕಳಿರುವ ಶಾಲೆಗಳಲ್ಲಿ ಶಿಕ್ಷಣ ಕೊಡುವ ವಿಚಾರದಲ್ಲಿ ನ್ಯಾಯ ಕೊಡಿಸುತ್ತಿದ್ದೇವೆ ಎನಿಸುತ್ತಿಲ್ಲ. ಇದಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರಿ ಮಾದರಿ ಶಾಲೆಗಳ ಯೋಜನೆ ಜಾರಿಗೆ ತರಲಾಗುತ್ತಿದೆ. ಉತ್ತಮ ಮೂಲಸೌಕರ್ಯ, ಅಗತ್ಯ ತರಗತಿ ಕೊಠಡಿಗಳು, ಶಿಕ್ಷಕರು ಇರುವ ಶಾಲೆಗಳಿಗೆ ಕಡಿಮೆ ನೋಂದಣಿ ಇರುವ ಶಾಲೆಗಳಿಂದ ಮಕ್ಕಳನ್ನು ಕರೆತರಲು ಪ್ರಯತ್ನಿಸಲಾಗುತ್ತದೆ.
ಮಾದರಿ ಶಾಲೆಗೆ ಮಕ್ಕಳನ್ನು ಕರೆತರಲು ದಾನಿಗಳು, ವಿವಿಧ ಸಂಸ್ಥೆಗಳ ಸಿಎಸ್ಆರ್ ನಿಧಿಯಿಂದ ವಾಹನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಅದರ ಮೊದಲ ಹೆಜ್ಜೆಯಾಗಿ ತಿಪಟೂರಿನ ಈಚನೂರು ಹಾಗೂ ಅರಳಗುಪ್ಪೆ ಶಾಲೆಗಳಿಗೆ ಮಕ್ಕಳನ್ನು ತರಲು ಕೆನರಾ ಬ್ಯಾಂಕ್ ಎರಡು ವಾಹನಗಳನ್ನು ಒದಗಿಸಿದೆ ಎಂದು ಸಚಿವರು ಹೇಳಿದರು.ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಉತ್ತಮ ಶಾಲೆಗೆ ಕಡಿಮೆ ಸಂಖ್ಯೆಯಲ್ಲಿ ಮಕ್ಕಳಿರುವ ಶಾಲೆಗೆ ಕರೆತಂದರೆ, ಪ್ರತಿ ವಿದ್ಯಾರ್ಥಿಯ ಶಿಕ್ಷಣ ಗುಣಮಟ್ಟ ಹೆಚ್ಚಳ ಮಾಡಬಹುದಾಗಿದೆ. ಈ ಸದುದ್ದೇಶದ ಕುರಿತು ಕೆನರಾ ಬ್ಯಾಂಕ್ ಕೇಳಿಕೊಂಡಾಗ ಅವರು ಸಂತೋಷದಿಂದ ಒಪ್ಪಿಕೊಂಡು ಎರಡು ಮಾರುತಿ ಇಕೋ ವಾಹನಗಳನ್ನು ಒದಗಿಸಿದ್ದಾರೆ’ ಎಂದು ಸಚಿವರು ತಿಳಿಸಿದರು.