ಯುಜಿಸಿಯಿಂದ ನಾನಾ ವಿದ್ಯಾರ್ಥಿ ವೇತನ, ಅರ್ಹತೆ ಪರೀಕ್ಷಿಸಿಕೊಳ್ಳಿ
*ವಿಶ್ವವಿದ್ಯಾಲಯ ಧನ ಸಹಾಯ ಆಯೋಗ ನಾಲ್ಕು ರೀತಿಯ ಸಾಲ್ಕರ್‌ಶಿಪ್ ನೀಡುತ್ತಿದೆ
* ಯುಜಿಸಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು
* ಸ್ಕಾಲರ್‌ಶಿಪ್‌ಗೆ ವಿದ್ಯಾರ್ಥಿಗಿಳು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗುತ್ತದೆ.
ಸೌಲಭ್ಯ ವಂಚಿತ, ಬಡವ, ಹೆಣ್ಣು ಮಕ್ಕಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವಾಗಲು ಸರಕಾರ ಸಹಿತ ಅನೇಕ ಸಂಘ ಸಂಸ್ಥೆಗಳು ವಿದ್ಯಾರ್ಥಿ ವೇತನವನ್ನು ಒದಗಿಸುತ್ತವೆ. ಆದರೆ, ಬಹಳಷ್ಟು ಜನರಿಗೆ ಈ ಬಗ್ಗೆ ಮಾಹಿತಿ ಇರುವುದಿಲ್ಲ. ಕೇಂದ್ರ ಸರಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC) ವು, ವಿವಿಧ ವಿದ್ಯಾರ್ಥಿವೇತನ ಯೋಜನೆಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ scholarships.gov.in ಗೆ ಭೇಟಿ ಅರ್ಜಿ ಸಲ್ಲಿಸಬಹುದು. ಯುಜಿಸಿ ನಾಲ್ಕು ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಯುಜಿಸಿ ಸ್ಕಾಲರ್ಶಿಪ್ಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31, 2022 ಕೊನೆಯ ದಿನವಾಗಿದೆ. ಇಶಾನ್ ಉದಯ್ ವಿಶೇಷ ವಿದ್ಯಾರ್ಥಿವೇತನ, ಒಂಟಿ ಹೆಣ್ಣು ಮಗುವಿಗೆ ಪಿಜಿ ಇಂದಿರಾ ಗಾಂಧಿ, ವಿಶ್ವವಿದ್ಯಾಲಯದ ಶ್ರೇಣಿ ಹೊಂದಿರುವವರಿಗೆ ಪಿಜಿ ವಿದ್ಯಾರ್ಥಿವೇತನ ಮತ್ತು ವೃತ್ತಿಪರ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ಪಿಜಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಇಶಾನ್ ಉದಯ್ ವಿಶೇಷ ಸ್ಕಾಲರ್‌ಶಿಪ್ ಯೋಜನೆಗೆ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ, ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳ ಜನಗಣತಿಯ ಆಧಾರದ ಮೇಲೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಇದರ ಅಡಿಯಲ್ಲಿ ಪ್ರತಿ ವರ್ಷ ಒಟ್ಟು 10,000 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯವು ವಾರ್ಷಿಕ 4.5 ಲಕ್ಷ ರೂಪಾಯಿಗಳನ್ನು ಮೀರದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಪ್ರತಿ ವರ್ಷ ಒಟ್ಟು 10,000 ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡಲಾಗುವುದು. ಸಾಮಾನ್ಯ ಪದವಿ ಕೋರ್ಸ್‌ಗೆ ತಿಂಗಳಿಗೆ ರೂ.5400/- ಮತ್ತು ತಾಂತ್ರಿಕ/ವೈದ್ಯಕೀಯ/ವೃತ್ತಿಪರ/ಪ್ಯಾರಾಮೆಡಿಕಲ್ ಕೋರ್ಸ್‌ಗಳಿಗೆ ತಿಂಗಳಿಗೆ ರೂ.7800/-ರೂಪಾಯಿ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಪಿಜಿ ಇಂದಿರಾ ಗಾಂಧಿ ವಿದ್ಯಾರ್ಥಿ ವೇತನವನ್ನು ಕುಟುಂಬದಲ್ಲಿ ಏಕೈಕ ಹೆಣ್ಣು ಮಗು ಆಗಿರುವ ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಅಣ್ಣ, ತಮ್ಮ, ಅಕ್ಕ, ತಂಗಿ ಯಾರು ಇಲ್ಲದ ವಿದ್ಯಾರ್ಥಿನಿಯರು ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಯುಜಿಸಿ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಮೊದಲ ವರ್ಷದ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿಯರು ಈ ಸ್ಕಾಲರ್ ಶಿಪ್ಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳಿಗೆ ರೂ. ವಾರ್ಷಿಕ 36,200, ಮತ್ತು ಪ್ರತಿ ವರ್ಷ, 3,000 ಹೊಸ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳಿಗೆ ನೀಡಲಾಗುವುದು. ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಡಿಗ್ರಿ ಹಂತದಲ್ಲಿ ಮೊದಲ ಮತ್ತು ಎರಡನೇ ರಾಂಕ್ ಪಡೆದ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದು. ಹಾಗೇ ಯಾವುದೇ ಸ್ನಾತಕೋತ್ತರ ಕೋರ್ಸ್‌ನಲ್ಲಿ ಪ್ರವೇಶ ಪಡೆದವರಿಗೆ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಇದರ ಅಡಿಯಲ್ಲಿ, ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಅವಧಿಗೆ, ಅಂದರೆ ಪಿಜಿ ಕೋರ್ಸ್‌ನ ಪೂರ್ಣ ಅವಧಿಗೆ ತಿಂಗಳಿಗೆ ಒಟ್ಟು 3,100 ರೂ. ಸ್ಕಾಲರ್ಶಿಪ್ ಸಿಗಲಿದೆ. ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಐಐಟಿ ಮದ್ರಾಸ್-ಸೋನಿ ಇಂಡಿಯಾದಿಂದ ಇಡಬ್ಲುಎಸ್ ವಿದ್ಯಾರ್ಥಿಗಳಿಗೆ ಕೌಶಲ್ಯ ಕೋರ್ಸ್
ಯುಜಿಸಿ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ವೃತ್ತಿಪರ ಕೋರ್ಸ್‌ಗಳನ್ನು ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ಗೆ ಅರ್ಜಿ ಹಾಕಬಹುದು. ಎಂಇ ಮತ್ತು ಎಂಟೆಕ್ ಕೋರ್ಸ್ ವಿದ್ಯಾರ್ಥಿಗಳಿಗೆ ತಿಂಗಳಿಗೆ 7,800 ರೂಪಾಯಿ ಹಾಗೂ ಇನ್ನಿತರ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತಿಂಗಳಿಗೆ 4,500 ರೂ. ನೀಡಲಾಗುತ್ತದೆ. ಆನ್‌ಲೈನ್ ಮೂಲಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ. ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.