ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯುನಿವರ್ಸಿಟಿ ಗ್ರಾಂಟ್ಸ್ ಕಮಿಶನ್ (ಯುಜಿಸಿ) ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ನವದೆಹಲಿ, (ಮೇ.07): ದೇಶದಲ್ಲಿ ಕೊರೋನಾ ಗಣನೀಯವಾಗಿ ಏರುತ್ತಿರುವ ಹಿನ್ನೆಲೆಯಲ್ಲಿ ಮೇ ತಿಂಗಳಲ್ಲಿ ನಡೆಯಬೇಕಿದ್ದ ಎಲ್ಲಾ ಆಫ್​ಲೈನ್ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲು ಯುನಿವರ್ಸಿಟಿ ಗ್ರಾಂಟ್ಸ್ ಕಮಿಶನ್ (ಯುಜಿಸಿ) ಮುಂದೂಡಿದೆ. 

ಈ ಕುರಿತು ಎಲ್ಲ ವಿಶ್ವವಿದ್ಯಾಲಯಗಳಿಗೆ ಪತ್ರ ಬರೆದಿರುವ ಯುಜಿಸಿ ಮೇ ತಿಂಗಳಲ್ಲಿ ಯಾವುದೇ ಆಫ್​ಲೈನ್ ಪರೀಕ್ಷೆಗಳನ್ನೂ ನಡೆಸುವುದು ಬೇಡ. ಜೂನ್ ತಿಂಗಳಲ್ಲಿ ಸಭೆ ಸೇರಿ ಪರೀಕ್ಷೆ ನಡೆಸುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

ಕರ್ನಾಟಕ ಸರ್ಕಾರದಿಂದ ಶಾಲೆ ಬೇಸಿಗೆ ರಜೆ ಪರಿಷ್ಕರಣೆ 

ಪರೀಕ್ಷೆ ನಡೆಸಿದರೆ ವಿದ್ಯಾರ್ಥಿಗಳು ಗುಂಪು ಸೇರುತ್ತಾರೆ. ಇದರಿಂದ ಕೊರೋನಾ ಸೋಂಕು ಮತ್ತಷ್ಟು ಉಲ್ಬಣವಾಗಲಿದೆ. ಹೀಗಾಗಿ ಉನ್ನತ ಶಿಕ್ಷಣ ಇಲಾಖೆಯ ಎಲ್ಲ ಆಫ್​ಲೈನ್ ಪರೀಕ್ಷೆಗಳಿಗೂ ತಾತ್ಕಾಲಿಕ ತಡೆ ಒಡ್ಡಲಾಗಿದ್ದು, ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಗಮನಿಸಿ ಜೂನ್ ತಿಂಗಳಲ್ಲಿ ಆಫ್​ಲೈನ್ ಪರೀಕ್ಷೆ ಕುರಿತು ತೀರ್ಮಾನಿಸಲಾಗುವುದು ಎಂದು ಯುಜಿಸಿ ಸ್ಪಷ್ಟಪಡಿಸಿದೆ.

ಇನ್ನು ಕರ್ನಾಟಕದಲ್ಲೂ ಸಹ ಕೊರೋನಾ ಮಿತಿ ಮೀರುತ್ತಿರುವುದರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಿರುವುದನ್ನು ಇಲ್ಲಿ ಸ್ಮರಿಸಬಹುದು.