ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಈ ಬಗ್ಗೆ ಕೆಇಎ ಪ್ರಕಟಣೆ ಬಿಡುಗಡೆ ಮಾಡಿದೆ
ಬೆಂಗಳೂರು, (ಸೆ.04) : ಯುಜಿಸಿಇಟಿ 2020 ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ದಾಖಲೆಗಳನ್ನು ಅಪ್ ಲೋಡ್ ಮಾಡುವ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಕರ್ನಟಕ ಪರೀಕ್ಷೆ ಪ್ರಾಧಿಕಾರ ತಾತ್ಕಾಲಿಕವಾಗಿ ಮುಂದೂಡಿದೆ.
ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಆನ್ ಲೈನ್ ಮೂಲಕ ದಾಖಲೆಗಳನ್ನು ಅಪ್ ಲೋಡ್ ಮಾಡುವ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಕ.ಪ.ಪ್ರಾಧಿಕಾರ ತಾತ್ಕಾಲಿಕವಾಗಿ ಮುಂದೂಡಿದೆ. ಯುಜಿಸಿಇಟಿ 2020 ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳನ್ನು ಅಪ್‌ಲೋಡ್ ಮಾಡಲು ಪರಿಷ್ಕೃತ ವೇಳಾಪಟ್ಟಿ ಶೀಘ್ರ ಪ್ರಕಟವಾಗಲಿದೆ ಎಂದು ತಿಳಿಸಿದೆ.
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್....!
ಇನ್ನೂ ವಿಶೇಷ ಪ್ರವರ್ಗ(NCC, Sports, Defence, Ex Defence, CARF/CISF/BSF, ITBP & Ex CARF, Scouts & Guides/Anglo Indian)ಗಳ ವಿದ್ಯಾರ್ಥಿಗಳಿಗೆ ಮಾತ್ರ ರಾಜ್ಯದ 6 ಕೇಂದ್ರಗಳಲ್ಲಿ ದಾಖಲೆಗಳ ಪರಿಶೀಲನೆ ಸೆ.7ರಿಂದ ಸೆ.21ರ ತನಕ ನಡೆಯಲಿದೆ ಎಂದು ಹೇಳಿದೆ.
