ವಿವಾದ ಇಲ್ಲದ ವ್ಯಕ್ತಿಗಳು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಲ್ಲಿರಲಿ: ಕೇಂದ್ರ ಸಚಿವೆ ಕರಂದ್ಲಾಜೆ

*  ನಮ್ಮ ಮಕ್ಕಳು ನಮ್ಮ ಚರಿತ್ರೆಯನ್ನು ಕಲಿಯಬೇಕು
*  ನಮ್ಮ ಇತಿಹಾಸದಲ್ಲಿ ಆಗಿರುವ ಲೋಪದೋಷಗಳನ್ನು ತಿಳಿದುಕೊಳ್ಳಬೇಕು
*  ಇತಿಹಾಸಗಳಲ್ಲಿ ಆಗಿರುವ ತಪ್ಪುಗಳನ್ನು ಸರಿ ಮಾಡಬೇಕು
 

Union Minister Shobha Karandlaje React on Karnataka Textbook Revision Committee grg

ವರದಿ-ಶಶಿಧರ ಮಾಸ್ತಿಬೈಲು, ಏಷ್ಯಾನೆಟ್ ಸುವರ್ಣ ನ್ಯೂಸ್, ಉಡುಪಿ

ಉಡುಪಿ(ಮೇ.31):  ವಿವಾದ ಇಲ್ಲದಂತಹ ವ್ಯಕ್ತಿಗಳನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಲ್ಲಿ ಜೋಡಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಕೇಂದ್ರ ಕೃಷಿ ಸಚಿವ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಈ ಮೂಲಕ ಹಾಲಿ ಸಮಿತಿಯ ಬಗ್ಗೆ ಎದ್ದಿರುವ ಅಪಸ್ವರಗಳ ಬಗ್ಗೆ ತಮ್ಮದೇ ಶೈಲಿಯಲ್ಲಿ ವಿವರಣೆ ನೀಡಿದ್ದಾರೆ. ನಾಡಗೀತೆ ಹಾಗೂ ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನವಾಗಿದೆ ಎಂಬ ಕಾರಣಕ್ಕೆ ಸಮಿತಿಯ ಅಧ್ಯಕ್ಷ ಸ್ಥಾನದಿಂದ ರೋಹಿತ್ ಚಕ್ರತೀರ್ಥ ಅವರನ್ನು ವಜಾ ಮಾಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಈ ಬಗ್ಗೆ ಸಚಿವೆ ಶೋಭಾ ಕರಂದ್ಲಾಜೆ  ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ವ್ಯಕ್ತಿ ಅಥವಾ ಸಮಿತಿಯ ಬಗ್ಗೆ ನಾನು ಮಾತನಾಡಲ್ಲ, ವಿವಾದ ರಹಿತ ವ್ಯಕ್ತಿಗಳನ್ನು ಸಮಿತಿ ಒಳಗೊಳ್ಳಬೇಕು ಎಂದಷ್ಟೇ ಹೇಳಿದರು.

ನಮ್ಮ ಮಕ್ಕಳು ನಮ್ಮ ಚರಿತ್ರೆಯನ್ನು ಕಲಿಯಬೇಕು, ನಮ್ಮ ಮಕ್ಕಳು ನಮ್ಮ ದೇಶದ ಇತಿಹಾಸವನ್ನು ಕಲಿಯಬೇಕು. ನಮ್ಮ ಇತಿಹಾಸದಲ್ಲಿ ಆಗಿರುವ ಲೋಪದೋಷಗಳನ್ನು ತಿಳಿದುಕೊಳ್ಳಬೇಕು. ಬ್ರಿಟಿಷರ ದೇಶಕ್ಕೆ ಯಾಕೆ ಬಂದರು? ಮೊಘಲರು ಈ ದೇಶಕ್ಕೆ ಯಾಕೆ ಬಂದರು? ಘಜ್ನಿ ಮಹಮ್ಮದ್ 18 ಬಾರಿ ದಾಳಿ ಮಾಡಿದ್ದು ಯಾಕೆ? ನಮ್ಮ ಸಮಸ್ಯೆ ನಮ್ಮ ಕೊರತೆ ಏನು? ಎಲ್ಲವನ್ನು ನಮ್ಮ ಮಕ್ಕಳು ಅಧ್ಯಯನ ಮಾಡಬೇಕು. ಆದರೆ ನಮ್ಮ ಮಕ್ಕಳು ಡಿಗ್ರಿ ಮಾಡಿದರೂ ದೇಶದ ಚರಿತ್ರೆ ಗೊತ್ತಿರುವುದಿಲ್ಲ. ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದವರ ಬಗ್ಗೆ ಗೊತ್ತಿರುವುದಿಲ್ಲ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ರಾಜ್ಯ ನಮ್ಮದು.ನಮ್ಮ ಕನ್ನಡ ಸಾಹಿತ್ಯ ಸತ್ವಯುತವಾಗಿದೆ, ಕನ್ನಡದ ಸಾಹಿತಿ ಕವಿಗಳಲ್ಲಿ ಅಷ್ಟೊಂದು ತಾಕತ್ತು ಇದೆ.ನಮ್ಮ ರಾಜ್ಯದ ಏಕೀಕರಣ ದಂತಹ ವಿಚಾರಗಳು ಕೂಡ ಮಕ್ಕಳಿಗೆ ತಿಳಿಯುವಂತಾಗಬೇಕು.ಎಲ್ಲರಿಗೂ ಪ್ರಿಯವಾದ ವಿಚಾರಗಳನ್ನು ಹೇಳಬೇಕು, ಎಲ್ಲರನ್ನೂ ಖುಷಿಪಡಿಸುವುದು ಕಷ್ಟ, ಎಲ್ಲರೂ ಸಮಾನ ಎನ್ನುವ ರೀತಿಯಲ್ಲಿ ಪರಿಷ್ಕರಣೆ ಯಾಗಬೇಕು.ಮಕ್ಕಳ ಮನಸ್ಸನ್ನು ಪುಳಕಗೊಳಿಸುವ, ವಿಕಸಿತ ಗೊಳಿಸುವ ಪಠ್ಯಗಳು ಬರಬೇಕು ಎಂದರು.

BC Nagesh: ನಾಡಗೀತೆ ವಿವಾದ: ಚುಂಚಶ್ರೀಗೆ ನಾಗೇಶ್‌ ವಿವರಣೆ!

ಲವ್ ಜಿಹಾದ್ ನಿಯಂತ್ರಣಕ್ಕೆ ಕಠಿಣ ಕಾನೂನು ಅಗತ್ಯ

ಲವ್ ಜಿಹಾದ್ ನಮ್ಮ ಹೆಣ್ಣುಮಕ್ಕಳನ್ನು ನರಕದ ಕೂಪಕ್ಕೆ ತಳ್ಳುವ ಪ್ರಕ್ರಿಯೆಯಾಗಿದೆ. ಪ್ರೀತಿಯ ಹೆಸರಲ್ಲಿ ಮದುವೆಯಾಗುತ್ತಾರೆ ಅಥವಾ ಮದುವೆಯಾಗದೆ ಮೋಸ ಮಾಡುತ್ತಾರೆ. ಕೈಗೊಂದು ಮಗುವನ್ನು ಕೊಟ್ಟು ಓಡಿ ಹೋಗುತ್ತಾರೆ. ನಂತರ ತಲಾಖ್ ಎಂದು ಹೇಳಿ ಇನ್ನೊಬ್ಬರನ್ನು ಮದುವೆಯಾಗುತ್ತಾರೆ. ದೇಶದ ಅನೇಕ ಭಾಗಗಳಲ್ಲಿ ನಮ್ಮ ಹೆಣ್ಣುಮಕ್ಕಳು ಸಮಸ್ಯೆ ಎದುರಿಸುತ್ತಿದ್ದಾರೆ. ಲವ್ ಜಿಹಾದ್ ಒಂದು ಪಿಡುಗು ತಕ್ಷಣ ಕೊನೆಯಾಗಬೇಕು.ಲವ್ ಜಿಹಾದಿಗೆ ಹೆಣ್ಣುಮಕ್ಕಳು ಬಲಿಯಾದರೆ ತಂದೆ-ತಾಯಿಯ ದುಃಖ ಕೇಳುವವರ್ಯಾರು?ಲವ್ ಜಿಹಾದ್ ತಡೆಗೆ ಬಲವಾದ ಕಾನೂನು ಜಾರಿ ಮಾಡುವ ಅಗತ್ಯ ಇದೆ.ಹಿಂದಿನಿಂದಲೂ ಈ ಬಗ್ಗೆ ವಾದ ಮಾಡಿಕೊಂಡು ಬಂದಿದ್ದೇನೆ ಎಂದು ಶೋಭಾ ಹೇಳಿದರು.

ಟಿಕಾಯತ್‌ಗೆ ಮಸಿ ಬಳಿದಿರುವುದು ಸರಿಯಲ್ಲ

ಯಾವುದೇ ಹೋರಾಟಗಾರರ ಮೇಲೆ ಈ ರೀತಿ ಮಾಡುವುದು ಸರಿಯಲ್ಲ, ಪ್ರಜಾತಂತ್ರದಲ್ಲಿ ಹೋರಾಟಕ್ಕೆ ಹೆಚ್ಚು  ಬಲವಿದೆ. ಲೋಕಸಭೆ, ರಾಜ್ಯಸಭೆ, ವಿಧಾನಸಭೆ, ವಿಧಾನ ಪರಿಷತ್ ಗಳಲ್ಲಿ ಪ್ರತಿಪಕ್ಷಕ್ಕೆ ದೊಡ್ಡ ತಾಕತ್ತು ಇದೆ. ಸರಕಾರದ ಲೋಪದೋಷಗಳನ್ನು ಸರಿಪಡಿಸಿ ಎಚ್ಚರಗೊಳಿಸುವ ಕೆಲಸ ಹೋರಾಟದಿಂದಲೇ ಸಾಧ್ಯ. ಟಿಕಾಯತ್ ತನ್ನದೇ ಒಂದು ವಿಚಾರ ಇಟ್ಟು ಹೋರಾಟ ನಡೆಸುತ್ತಿದ್ದಾರೆ. ಅದರಿಂದ ರೈತರಿಗೆ ಎಷ್ಟು ಲಾಭ ಆಯ್ತು ನಷ್ಟ ಆಯ್ತು ? ಅನ್ನೋದನ್ನು ಅವರೇ ಅವಲೋಕನ ಮಾಡಲಿ. ಆದರೆ ಯಾವುದೇ ವ್ಯಕ್ತಿಯ ಮೇಲೆ ಈ ರೀತಿ ವೈಯಕ್ತಿಕ ದ್ವೇಷ ಕಾರುವುದು ಸರಿಯಲ್ಲ. ಮಸಿ ಬಳಿಯುವ ಕೆಲಸ ಯಾರು ಕೂಡ ಮಾಡಬಾರದು, ಶೋಭೆ ತರುವಂತದ್ದಲ್ಲ ಎಂದರು.

ಈ ನೆಲದಲ್ಲಿ ಬದುಕುವವರು ಕಾನೂನಿಗೆ ಗೌರವ ಕೊಡಿ

ಮಂಗಳೂರಿನಲ್ಲಿ ಮತ್ತೆ ತಲೆದೋರಿರುವ ಹಿಜಾಬ್ ವಿವಾದ ಕುರಿತು ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಹೈಕೋರ್ಟ್ ಆದೇಶ ಸ್ಪಷ್ಟವಾಗಿದೆ. ತರಗತಿಯ ಒಳಗೆ ಹಿಜಾಬ್ ಗೆ ಅವಕಾಶ ಇಲ್ಲ ಎಂದು ಹೇಳಿದೆ.ಈ ನೆಲದಲ್ಲಿ ಬದುಕುವಂಥ ಕಾನೂನಿಗೆ ಗೌರವ ಕೊಡುವಂತ ಎಲ್ಲರೂ ಈ ಆದೇಶ ಪಾಲಿಸಬೇಕು. ಹೈಕೋರ್ಟ್ ಕಾನೂನು ಉಲ್ಲಂಘನೆ ಮಾಡುತ್ತೇವೆ ಅನ್ನೋದು ಸರಿಯಲ್ಲ. ಅಂಥವರ ಮೇಲೆ ಕಠಿಣವಾದ ಕ್ರಮ ಕೈಗೊಳ್ಳಬೇಕು. ಮುಂದೆ ಸಮಾಜದ್ರೋಹಿ ದೇಶದ್ರೋಹಿ ಚಟುವಟಿಕೆಗೆ ಕಾರಣವಾಗುತ್ತೆ. ಹೈಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದರು.

ಪಠ್ಯ ಪರಿಷ್ಕರಣೆ ವಿವಾದ: ಅನುಮತಿ ಹಿಂಪಡೆದ ಇನ್ನೊಬ್ಬ ಸಾಹಿತಿ!

ಮಳಲಿ ಮಸೀದಿ ವಿವಾದ ಎರಡು ಧರ್ಮಿಯರು ಒಟ್ಟಿಗೆ ಕುಳಿತು ಬಗೆಹರಿಸಿಕೊಳ್ಳಿ

ಮಳಲಿ ಮಸೀದಿಯಲ್ಲಿ ತಲೆದೊರಿರುವ ವಿವಾದ ಮತ್ತು ಎಸ್ಡಿಪಿಐ ನೀಡಿರುವ ಎಚ್ಚರಿಕೆಯ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು , ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಲಾಖೆಗಳು ಈ ವಿಚಾರ ಗಮನಿಸುತ್ತೆ.ಗೃಹ ಇಲಾಖೆ ಕೂಡಾ ಈ ವಿಚಾರವನ್ನು ಗಮನಿಸುತ್ತಿದೆ. ಇತಿಹಾಸಗಳಲ್ಲಿ ಆಗಿರುವ ತಪ್ಪುಗಳನ್ನು ಸರಿ ಮಾಡಬೇಕು. ಯಾವುದು ಹಿಂದೂಗಳಿಗೆ ಸೇರಬೇಕು ಅನ್ನುವುದರ ನಿಷ್ಕರ್ಷೆಯಾಗಬೇಕು ಎಂದರು.

ಈ ಬಗ್ಗೆ ಎಲ್ಲರೂ ಆಲೋಚಿಸಿದರೆ ಒಟ್ಟಾಗಿ ಬದುಕಬಹುದು.ಹಲವಾರು ದೇವಸ್ಥಾನಗಳನ್ನು ಕೆಡವಿ ಮಸೀದಿಗಳನ್ನು ನಿರ್ಮಾಣ ಮಾಡಲಾಗಿದೆ.ಆದರೆ ನಾವ್ಯಾರೂ ಇದಕ್ಕೆ ಸಾಕ್ಷಿ ಗಳಲ್ಲ.ನಮ್ಮ ಹಿರಿಯರ ಕಾಲದಲ್ಲಿ ಕೆಲವೊಂದು ತಪ್ಪುಗಳಾಗಿವೆ.ಇತಿಹಾಸಜ್ಞರು ಉತ್ಖನನ ಮಾಡಿ ಯಾವುದು ಸರಿ ಯಾವುದು ತಪ್ಪು ಎನ್ನುವ ಬಗ್ಗೆ ತಿಳಿಸಬೇಕು.ಎಲ್ಲರೂ ಈ ಬಗ್ಗೆ ಒಟ್ಟಾಗಿ ಯೋಚನೆ ಮಾಡಿದರೆ ಖಂಡಿತ ಈ ಸಮಸ್ಯೆ ಬಗೆಹರಿಸಬಹುದು.ಮಳಲಿ ಮಸೀದಿ ವಿವಾದ ಎರಡು ಧರ್ಮದವರು ಒಟ್ಟಿಗೆ ಕುಳಿತು ಬಗೆಹರಿಸಿಕೊಳ್ಳಬೇಕು. ನಿಜವಾಗಿಯೂ ಇತಿಹಾಸದಲ್ಲಿ ಯಾರಿಗೆ ಸೇರಿತ್ತು ಅನ್ನೋದನ್ನು ಹರ್ಷದಿಂದ ಯೋಚನೆ ಮಾಡಬೇಕು ಎಂದರು.
 

Latest Videos
Follow Us:
Download App:
  • android
  • ios