Asianet Suvarna News Asianet Suvarna News

UPSC ESE Prelims Exam 2022: ಯುಪಿಎಸ್‌ಸಿ ಪ್ರಿಲಿಮ್ಸ್‌ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕೇಂದ್ರ ಲೋಕಸೇವಾ ಆಯೋಗ ಎಂಜಿನಿಯರಿಂಗ್ ಸೇವೆಗಳ ಪರೀಕ್ಷೆ 2022 ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗಳು ಫೆಬ್ರವರಿ 20 ರಂದು ನಡೆಯಲಿದೆ. 

UPSC ESE Prelims Exam 2022 date has been released gow
Author
Bengaluru, First Published Jan 25, 2022, 5:16 PM IST

ಬೆಂಗಳೂರು(ಜ.25): ಕೇಂದ್ರ ಲೋಕಸೇವಾ ಆಯೋಗ (Union Public Service Commission- UPSC) ಎಂಜಿನಿಯರಿಂಗ್ ಸೇವೆಗಳ ಪರೀಕ್ಷೆ 2022 ರ (Engineering Services Examination 2020 ) ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪರಿಶೀಲನೆ ನಡೆಸಲು ಅಧಿಕೃತ ವೆಬ್‌ಸೈಟ್‌ upsc.gov.in ಗೆ ಭೇಟಿ ನೀಡಲು ಕೋರಲಾಗಿದೆ.  UPSC ESE Prelims 2022, ಫೆಬ್ರವರಿ 20 ರಂದು ನಡೆಯಲಿದೆ.

ಯುಪಿಎಸ್‌ಸಿ ಇಂಜಿನಿಯರಿಂಗ್ ಸೇವೆಗಳ ಪ್ರಿಲಿಮ್ಸ್‌ ಪರೀಕ್ಷೆಯನ್ನು ಫೆಬ್ರುವರಿ 20 ರಂದು ಎರಡು ಶಿಫ್ಟ್‌ಗಳಲ್ಲಿ ನಡೆಸಲಾಗುತ್ತದೆ. ಎರಡು ಆಬ್ಜೆಕ್ಟಿವ್ ಟೈಪ್ ಪ್ರಶ್ನೆಪತ್ರಿಕೆಗಳು ಇರಲಿದ್ದು, ಪೇಪರ್-1 200 ಅಂಕಗಳಿಗೆ, ಪೇಪರ್‌-2 300 ಅಂಕಗಳಿಗೆ ಪ್ರಶ್ನೆಗಳನ್ನು ಹೊಂದಿರುತ್ತದೆ. ಒಟ್ಟು 500 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.

ಶಿಫ್ಟ್‌ 1 ಪರೀಕ್ಷೆಯು 200 ಅಂಕಗಳಿಗೆ ಜೆನೆರಲ್ ಸ್ಟಡೀಸ್ ಮತ್ತು ಇಂಜಿನಿಯರಿಂಗ್ ಆಪ್ಟಿಟ್ಯೂಡ್ ಬಗ್ಗೆ ಪ್ರಶ್ನೆಗಳನ್ನು ಹೊಂದಿರುತ್ತದೆ. ಶಿಫ್ಟ್‌-2 ಪರೀಕ್ಷೆಯು 300 ಅಂಕಗಳಿಗೆ ಸಿವಿಲ್, ಮೆಕ್ಯಾನಿಕಲ್, ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್‌, ಟೆಲಿಕಂಮ್ಯೂನಿಕೇಷನ್‌ ಇಂಜಿನಿಯರಿಂಗ್ ಕುರಿತು ಪ್ರಶ್ನೆಗಳನ್ನು ಹೊಂದಿರುತ್ತದೆ.

RANCHO SCHOOL CBSE AFFILIATION: 3 ಈಡಿಯಟ್ ಚಿತ್ರದ ರಾಂಚೋ ಸ್ಕೂಲ್‌ಗೆ ಈಗ ಸಿಬಿಎಸ್‌ಇ ಮಾನ್ಯತೆ ಸಾಧ್ಯತೆ

ವೇಳಾಪಟ್ಟಿ ಮತ್ತು ಇತರೆ ಹೆಚ್ಚಿನ ಮಾಹಿತಿಗಳಿಗೆ ಯುಪಿಎಸ್‌ಸಿ ನೋಟಿಸ್‌ ಅನ್ನು ಈ ಕೆಳಗಿನಂತೆ ಚೆಕ್‌ ಮಾಡಬಹುದು. ಯುಪಿಎಸ್‌ಸಿ ಇಎಸ್‌ಇ ಪರೀಕ್ಷೆಗೆ 2021 ರ ಸೆಪ್ಟೆಂಬರ್ 22 ರಂದು ರಿಜಿಸ್ಟ್ರೇಷನ್‌ ಆರಂಭಿಸಲಾಗಿತ್ತು. ಅಕ್ಟೋಬರ್ 12, 2021 ರವರೆಗೆ ಅರ್ಜಿ ಸ್ವೀಕರಿಸಲಾಗಿತ್ತು. ಈ ನೇಮಕಾತಿ ಪ್ರಕ್ರಿಯೆ ಮೂಲಕ ಒಟ್ಟು 247 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಯುಪಿಎಸ್‌ಸಿ ಇಂಜಿನಿಯರಿಂಗ್ ಸೇವೆಗಳ ಪ್ರಿಲಿಮ್ಸ್‌ ಪರೀಕ್ಷೆಗೆ ಶೀಘ್ರದಲ್ಲೇ ಅಡ್ಮಿಟ್‌ ಕಾರ್ಡ್‌ ಅನ್ನು ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಲಾಗಿನ್‌ ಆಗುವ ಮೂಲಕ ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಬಹುದು.

Akkamahadevi Women's University ಮುಚ್ಚುವ ಪ್ರಶ್ನೇಯೇ ಇಲ್ಲವೆಂದ ಕಾರಜೋಳ

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ: ಭಾರತೀಯ ವಿಜ್ಞಾನ ಸಂಸ್ಥೆ(Indian Institute of Science)ಬೆಂಗಳೂರಿನಲ್ಲಿ ಖಾಲಿ ಇರುವ 1 ಪ್ರಾಜೆಕ್ಟ್​ ಎಂಜಿನಿಯರ್ ಮತ್ತು ಎಸ್ಟೇಟ್ ಆಫೀಸರ್ (Project Engineer and Estate Officer) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಜನವರಿ 13ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​(Online) ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 4 ಕೊನೆಯ ದಿನವಾಗಿದೆ.  ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ವಿಜ್ಞಾನ ಸಂಸ್ಥೆಯ ಅಧಿಕೃತ ವೆಬ್​ಸೈಟ್​​ www.iisc.ac.in ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು ಖಾಲಿ ಇರುವ ಪ್ರಾಜೆಕ್ಟ್​ ಎಂಜಿನಿಯರ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು. ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ 15 ವರ್ಷ ಅನುಭವ ಹೊಂದಿರಬೇಕು.

ವಯೋಮಿತಿ: ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು ಖಾಲಿ ಇರುವ ಪ್ರಾಜೆಕ್ಟ್​ ಎಂಜಿನಿಯರ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 4, 2022ಕ್ಕೆ 55 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ: ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು ಖಾಲಿ ಇರುವ ಪ್ರಾಜೆಕ್ಟ್​ ಎಂಜಿನಿಯರ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗೆ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ: ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು ಖಾಲಿ ಇರುವ ಪ್ರಾಜೆಕ್ಟ್​ ಎಂಜಿನಿಯರ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗೆ  ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,23,100 ರಿಂದ 2,15,900 ರೂ ವೇತನ ಸಿಗಲಿದೆ.

Follow Us:
Download App:
  • android
  • ios