ಹೋರಾಟಕ್ಕೆ ಜಯ: ಕನ್ನಡ ಬಲ್ಲ ಶಿಕ್ಷಕಿ ನೇಮಿಸಲು ಕೇರಳ ಹೈಕೋರ್ಟ್ ಆದೇಶ
ಗಡಿನಾಡು ಕಾಸರಗೋಡು ಜಿಲ್ಲೆಯ ಅಡೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ ಕನ್ನಡ ವಿಭಾಗಕ್ಕೆ ಮಲಯಾಳ ಶಿಕ್ಷಕಿ ನೇಮಕ ವಿವಾದಕ್ಕೆ ಸಂಬಂಧಿಸಿದ ಹೋರಾಟಕ್ಕೆ ಇದೀಗ ಕೇರಳ ಹೈಕೋರ್ಟ್ ಮಹತ್ವದ ಜಯ ಲಭಿಸಿದೆ.
ಮಂಗಳೂರು (ಆ.24) : ಗಡಿನಾಡು ಕಾಸರಗೋಡು ಜಿಲ್ಲೆಯ ಅಡೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ ಕನ್ನಡ ವಿಭಾಗಕ್ಕೆ ಮಲಯಾಳ ಶಿಕ್ಷಕಿ ನೇಮಕ ವಿವಾದಕ್ಕೆ ಸಂಬಂಧಿಸಿದ ಹೋರಾಟಕ್ಕೆ ಇದೀಗ ಕೇರಳ ಹೈಕೋರ್ಟ್‌ನಲ್ಲಿ(Kerala highcourt) ಮಹತ್ವದ ಜಯ ಲಭಿಸಿದೆ. ಮಲಯಾಳಿ ಭಾಷಿಕ ಶಿಕ್ಷಕಿಗೆ(Malayalam teacher in kannada govt school) ಕನ್ನಡದಲ್ಲಿ ವ್ಯವಹರಿಸಲು ತಿಳಿಯದು ಎಂಬುದನ್ನು ಅಥೆæೖರ್‍ಸಿಕೊಂಡಿರುವ ನ್ಯಾಯಾಲಯ, ಕೂಡಲೇ ಆ ಶಿಕ್ಷಕಿಯನ್ನು ಬೇರೆ ಶಾಲೆಗೆ ವರ್ಗಾಯಿಸಿ ತಕ್ಷಣವೇ ಅವರ ಸ್ಥಾನಕ್ಕೆ ಕನ್ನಡ ತಿಳಿದಿರುವ ಶಿಕ್ಷಕರನ್ನು ನೇಮಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಅನೇಕ ವರ್ಷಗಳಿಂದ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿರುವ ಕೇರಳ ಸರ್ಕಾರÜ, ಶಿಕ್ಷಣ ಇಲಾಖೆ ಮತ್ತು ಕೇರಳ ಲೋಕಸೇವಾ ಆಯೋಗಕ್ಕೆ ಈ ತೀರ್ಪು ಚಾಟಿ ಬೀಸಿದಂತಾಗಿದೆ.
ಕನ್ನಡಪರ ನಿಲುವು: ಮಲಯಾಳಿ ಶಿಕ್ಷಕಿ ಬದಲು ಮುಖ್ಯ ಶಿಕ್ಷಕನೇ ವರ್ಗ!
ಅಡೂರು ಶಾಲೆಗೆ ಮಲೆಯಾಳ ಶಿಕ್ಷಕಿ ನೇಮಕದಿಂದಾಗಿ ಸುಮಾರು ಎರಡು ತಿಂಗಳಿಂದ ಕನ್ನಡ ವಿಭಾಗದ ಮಕ್ಕಳಿಗೆ ಸಮಾಜ ವಿಜ್ಞಾನ ಪಾಠವೇ ಇಲ್ಲ ಎಂಬಂತಾಗಿತ್ತು. ಕಳೆದ ವರ್ಷ ಉದುಮ ಮತ್ತು ಹೊಸಕೋಟೆ ಸರ್ಕಾರಿ ಪ್ರೌಢಶಾಲೆಗಳ ಕನ್ನಡ ವಿಭಾಗಗಳಿಗೆ ಮಲಯಾಳ ಭಾಷೆ ಮಾತ್ರ ತಿಳಿದಿರುವ ಸಮಾಜ ವಿಜ್ಞಾನ ಶಿಕ್ಷಕರನ್ನು ನೇಮಿಸಲಾಗಿತ್ತು. ಉದುಮ ಪ್ರೌಢಶಾಲೆಗೆ ಕೂಡ ಇದೇ ರೀತಿ ಶಿಕ್ಷಕಿ ನೇಮಕಗೊಂಡಿದ್ದರು. ಕೇರಳ ಲೋಕಸೇವಾ ಆಯೋಗ ಈ ನೇಮಕಾತಿ ನಡೆಸಿತ್ತು. ಉದುಮ ಹಾಗೂ ಅಡೂರು ಶಾಲೆಗಳಿಗೆ ಮಲಯಾಳ ಭಾಷಿಕ ಶಿಕ್ಷಕರರ ನೇಮಕವಾದಾಗ ಇದನ್ನು ವಿರೋಧಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ್ದರು. ಅಲ್ಲದೆ, ಈ ಕುರಿತು ಕೇರಳ ಹೈಕೋರ್ಚ್ ಮೆಟ್ಟಿಲೇರಿದ್ದರು. ಇದೀಗ ಅಡೂರು ಶಾಲೆಯಲ್ಲಿ ಕನ್ನಡ ಮಾಧ್ಯಮಕ್ಕೆ ಮಲಯಾಳ ಶಿಕ್ಷಕಿ ಪಾಠ ಮಾಡುವಂತಿಲ್ಲ ಎಂದು ಇತ್ತೀಚೆಗೆ ಈ ತೀರ್ಪು ನೀಡಿದೆ. ಈ ತೀರ್ಪನ್ನು ಮಲಯಾಳ ಭಾಷಿಕ ಶಿಕ್ಷಕರು ನೇಮಕಗೊಂಡಿರುವ ಎಲ್ಲ ಕನ್ನಡ ಮಾಧ್ಯಮ ಶಾಲೆಗಳಿಗೆ ಅನ್ವಯಿಸುವಂತೆ ವಾದ ಮಂಡಿಸಿದ್ದು, ಅಂತಿಮ ತೀರ್ಪು ಬಾಕಿ ಇದೆ ಎಂದು ಕೋರ್ಚ್ ಮೆಟ್ಟಿಲೇರಿದ್ದ ಅಡೂರು ಶಾಲಾ ಪೋಷಕರು ತಿಳಿಸಿದ್ದಾರೆ.
ಗಡಿನಾಡು ಸರ್ಕಾರಿ ಶಾಲೆಗೆ ಮತ್ತೆ ಆಪತ್ತು; ಕನ್ನಡದ ಗಂಧಗಾಳಿ ಗೊತ್ತಿಲ್ಲದ ಮಲಯಾಳಂ ಶಿಕ್ಷಕಿ ನೇಮಿಸಿದ ಕೇರಳ!