Asianet Suvarna News Asianet Suvarna News

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ದಿನವೇ ವಿದ್ಯಾರ್ಥಿಗಳಿಗೆ ಕೊಡುಗೆ ಘೋಷಿಸಿದ ಸಿಎಂ

* ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ
* ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಚಾಲನೆ
* ಈ ವೇಳೆ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಂ

will provide ipod to Students Says Karnataka CM Basavaraj Bommai rbj
Author
Bengaluru, First Published Aug 23, 2021, 3:36 PM IST
  • Facebook
  • Twitter
  • Whatsapp

ಬೆಂಗಳೂರು, (ಆ.23): ದೇಶದಲ್ಲಿ ಮೊದಲು ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ  ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗಿದ್ದು, ಈ ವೇಳೆ ಸಿಎಂ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನ ನೀಡಿದ್ದಾರೆ.

ಹೌದು..ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಐಪಾಡ್ ಒದಗಿಸಲಾಗುವುದು ಎಂದು ಘೋಷಣೆ ಮಾಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್  ಇಂದು (ಆ.23)  2021-22ನೇ ಸಾಲಿನ ಪ್ರವೇಶ ಪ್ರಕ್ರಿಯೆಗೆ ಚಾಲನೆ ನೀಡಿದರು.

ಶಾಲೆ ಪ್ರಾರಂಭದ ಬೆನ್ನಲ್ಲೇ ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ

ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಐಪಾಡ್ ನೀಡುತ್ತೇವೆ. ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಐಪಾಡ್ ಒದಗಿಸುತ್ತೇವೆ. ನನ್ನ ಕರ್ನಾಟಕ ಜ್ಞಾನವಂತ ರಾಜ್ಯವಾಗಬೇಕು. ಆಗ ಮಾತ್ರ ಕರ್ನಾಟಕ ಕಲ್ಯಾಣ ಕರ್ನಾಟಕ ಆಗಲಿದೆ. ಕೊರೊನಾ ಸಂಕಷ್ಟದಿಂದ ಸರ್ಕಾರಕ್ಕೆ ಆರ್ಥಿಕ ಸಮಸ್ಯೆ ಇದೆ. ಆದರೆ ಹೊಸ ಯೋಜನೆಗಳಿಗೆ ಯಾವುದೇ ಸಮಸ್ಯೆ ಆಗಲ್ಲ. ರಾಷ್ಟ್ರೀಯ ಶಿಕ್ಷಣ ನೀತಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಶಿಕ್ಷಣಕ್ಕೆ ಮುಂದಿನ ಬಜೆಟ್‌ನಲ್ಲಿ ಹೆಚ್ಚು ಅನುದಾನ ಮೀಸಲಿಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಹೊಸ ಡಿಜಿಟಲೀಕರಣ ನೀತಿಯ ಜತೆಗೆ ಸಂಶೋಧನೆ ಮತ್ತು ಅಭಿವೃದ್ಧಿ ಪಾಲಿಸಿಯನ್ನು ಜಾರಿಗೆ ತರಲಿದ್ದೇವೆ. ಹೊಸ ಡಿಜಿಟಲೈಸೇಷನ್ ಪಾಲಿಸಿ (ಹೊಸ ಡಿಜಿಟಲೀಕರಣ ನೀತಿ)ಯನ್ನು ಜಾರಿಗೆ ತರಲಿದ್ದೇವೆ. ಬ್ರಾಡ್ಬ್ಯಾಂಡ್ ಹಾಗೂ ಇಂಟರ್ ನೆಟ್ ವ್ಯವಸ್ಥೆಯನ್ನು ಗ್ರಾಹಕರ ಪ್ರಿಯವಾಗಿ ಮಾಡಲಿದ್ದೇವೆ. ಇದಕ್ಕೆ ತಜ್ಞರ ಸಲಹೆಯನ್ನು ಪಡೆಯಲಿದ್ದೇವೆ. ತಜ್ಞರು ಎಷ್ಟು ಬೇಗ ಸಲಹೆ ನೀಡುತ್ತಾರೋ ಅಷ್ಟು ಬೇಗ ಡಿಜಿಟಲ್ ನೀತಿ ಅನುಷ್ಠಾನ ಮಾಡಲಿದ್ದೇವೆ ಎಂದರು.
 

Follow Us:
Download App:
  • android
  • ios