ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ...!
ಪ್ರತಿಪಕ್ಷಗಳು ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ ರಾಜ್ಯದ ಶಿಕ್ಷಕರಿಗೆ ಹಾಗೂ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದೆ.
ಬೆಂಗಳೂರು, (ಅ.11): ಕೊರೋನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಅ.12ರಿಂದ ಅ.30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಬಿಎಸ್‌ವೈ ಸರ್ಕಾರ ಆದೇಶ ಹೊರಡಿಸಿದೆ.
"
ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪತ್ರದಲ್ಲಿ ಮಾಹಿತಿ ನೀಡಿದ್ದು, ಕೋವಿಡ್-19 ಸೋಂಕಿನ ಹಿನ್ನಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ.
'ವಿದ್ಯಾಗಮ' ಯೋಜನೆ: ಕೊನೆಗೂ ಮಹತ್ವದ ನಿರ್ಧಾರ ಕೈಗೊಂಡ ಸಚಿವ ಸುರೇಶ್ ಕುಮಾರ್
ಹಲವಾರು ಶಿಕ್ಷಕರು ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನ ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳ ಆರೋಗ್ಯದ ಹಿತದೃಷ್ಠಿಯಿಂದ ಶಾಲೆಗಳಿಗೆ ದಿನಾಂಕ 12-10-2020ರಿಂದ ಮೂರು ವಾರಗಳ ಕಾಲ ಅಂದರೆ ದಿನಾಂಕ 30-10-2020ರವರೆಗೆ ಮದ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿರುತ್ತೇನೆ ಎಂದು ತಿಳಿಸಿದ್ದಾರೆ.