ಮುಂದಿನ ವರ್ಷದಿಂದ ಹೈಸ್ಕೂಲ್‌, ಕಾಲೇಜಿನಲ್ಲಿ ಯೋಗ ಪಾಠ: ಸಿಎಂ ಬೊಮ್ಮಾಯಿ

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ ಹಾಗೂ ಯೋಗಾಭ್ಯಾಸ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

Yoga lesson in high school and college from next year says cm basavaraj bommai gvd

ಬೆಂಗಳೂರು (ಮೇ.30): ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ ಹಾಗೂ ಯೋಗಾಭ್ಯಾಸ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಭಾನುವಾರ ನಗರದ ಹೊರವಲಯದ ಜಿಗಣಿ ಬಳಿಯ ಪ್ರಶಾಂತಿ ಕುಟೀರಂನಲ್ಲಿ ‘ಎಸ್‌. ವ್ಯಾಸ ಸ್ವಾಯತ್ತ ವಿಶ್ವವಿದ್ಯಾಲಯ’ ಭಾನುವಾರ ಆಯೋಜಿಸಿದ್ದ ಯೋಗ ಸಂಶೋಧನೆ ಕುರಿತ 24ನೇ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ನಮ್ಮ ರಾಜ್ಯದಲ್ಲೂ ಯೋಗದ ಬಗ್ಗೆ ಯೋಗಾಭ್ಯಾಸದ ಪ್ರಯೋಜನಗಳ ಬಗ್ಗೆ ದೊಡ್ಡ ಪ್ರಚಾರ ನೀಡುವ ಅವಶ್ಯಕತೆ ಇದೆ. ಅದರಲ್ಲೂ ಕೋವಿಡ್‌ ಬಳಿಕ ಮಕ್ಕಳು ಬೇರೆ ಬೇರೆ ರೀತಿಯ ಒತ್ತಡಗಳಿಗೆ ಒಳಗಾಗಿದ್ದಾರೆ. ಇದರಿಂದ ಅವರನ್ನು ಹೊರಗೆ ತಂದು ಯಥಾಪ್ರಕಾರ ಬಾಲ್ಯವನ್ನು ಸಂತೋಷವಾಗಿ ಕಳೆಯುವಂತಾಗಬೇಕು. ಇದಕ್ಕೆ ಯೋಗ ಬಹಳ ಅಗತ್ಯವಿದೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆ, ಕಾಲೇಜುಗಳಲ್ಲಿ ಯೋಗ ಶಿಕ್ಷಣ ಮತ್ತು ಯೋಗಾಭ್ಯಾಸ ಪ್ರಾರಂಭಿಸಲಾಗುವುದು’ ಎಂದು ಹೇಳಿದರು.

'ಮುಕ್ತ ಚರ್ಚೆಗೆ ಬನ್ನಿ, ನೀವು ಖರೀದಿಸಿಟ್ಟಿರುವ 'ಟ್ರೋಲ್ ಗ್ಯಾಂಗ್' ಮೂಲಕ ಉತ್ತರ ಕೊಡಿಸಲು ಹೋಗ್ಬೇಡಿ'

‘ವಿಶೇಷವಾಗಿ ಮುಂದಿನ ವರ್ಷ ಪ್ರೌಢ ಶಾಲೆ ಮತ್ತು ಕಾಲೇಜುಗಳ ಹಂತದಲ್ಲಿ ಯೋಗ ಆರಂಭಿಸಲು ಸರ್ಕಾರ ಉದ್ದೇಶಿಸಿದೆ. ಪರಿಣಿತರೊಂದಿಗೆ ಚರ್ಚಿಸಿ ಮಕ್ಕಳಿಗೆ ಬಾಲ್ಯಾವಸ್ಥೆಯಲ್ಲಿ ಎಷ್ಟುಬೇಕೋ ಅಷ್ಟುಯೋಗದ ಶಿಕ್ಷಣ ಮತ್ತು ಯೋಗಾಭ್ಯಾಸಕ್ಕೆ ಪಠ್ಯಕ್ರಮ ತಯಾರಿಸುವುದು, ಅಗತ್ಯ ಯೋಗ ಶಿಕ್ಷಕರ ನೇಮಕ ಸೇರಿದಂತೆ ಎಲ್ಲ ತಯಾರಿ ಮಾಡಿಕೊಳ್ಳಲಾಗುವುದು’ ಎಂದರು.

ಯೋಗ ದಿನಾಚರಣೆಗೆ ಮೈಸೂರಿಗೆ ಮೋದಿ: ಈ ಬಾರಿಯ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸಲಿದ್ದಾರೆ. ಇದರಿಂದ ರಾಜ್ಯವು ವಿಶ್ವ ಮಟ್ಟದಲ್ಲಿ ಗಮನ ಸೆಳೆಯಲಿದೆ ಎಂದು ಇದೇ ವೇಳೆ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು. ‘ಹಲವು ಶಾಲಾ, ಕಾಲೇಜುಗಳು, ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ದೊಡ್ಡ ಪ್ರಮಾಣದಲ್ಲಿ ಯೋಗ ದಿನದ ಕಾರ್ಯಕ್ರಮ ಆಯೋಜಿಸಲಾಗುವುದು. ‘ಯೋಗದಿಂದ ಆರೋಗ್ಯ’ ಎಂಬ ಘೋಷವಾಕ್ಯದೊಂದಿಗೆ ಕಾರ್ಯಕ್ರಮ ಆಯೋಜಿಸುವ ಚಿಂತನೆ ಇದೆ. ಮೋದಿ ಅವರ ಮುಂದೆ ಯೋಗ ಕ್ಷೇತ್ರದಲ್ಲಿ ಕರ್ನಾಟಕದ ಕೊಡುಗೆ ಮತ್ತು ಯೋಗ ಪ್ರಚಾರ ಮತ್ತು ಬೆಳವಣಿಗೆಗೆ ಏನು ಮಾಡಬೇಕೆಂಬ ಅಂಶಗಳನ್ನು ಅನಾವರಣ ಮಾಡಲಾಗುತ್ತದೆ’ ಎಂದರು.

ಹಿಜಾಬ್‌ ವಿಷಯದಲ್ಲಿ ಕೋರ್ಟ್‌ನ ಆದೇಶ ಪಾಲನೆ ಕಡ್ಡಾಯ: ಸಿಎಂ ಬೊಮ್ಮಾಯಿ

ಬಾಲ್ಯಾವಸ್ಥೆಗೆ ತಕ್ಕಂತೆ ಪಾಠ: ವಿಶೇಷವಾಗಿ ಮುಂದಿನ ವರ್ಷ ಪ್ರೌಢ ಶಾಲೆ ಮತ್ತು ಕಾಲೇಜುಗಳ ಹಂತದಲ್ಲಿ ಯೋಗ ಆರಂಭಿಸಲು ಸರ್ಕಾರ ಉದ್ದೇಶಿಸಿದೆ. ಪರಿಣಿತರೊಂದಿಗೆ ಚರ್ಚಿಸಿ ಮಕ್ಕಳಿಗೆ ಬಾಲ್ಯಾವಸ್ಥೆಯಲ್ಲಿ ಎಷ್ಟು ಬೇಕೋ ಅಷ್ಟು ಯೋಗದ ಶಿಕ್ಷಣ ಮತ್ತು ಯೋಗಾಭ್ಯಾಸಕ್ಕೆ ಪಠ್ಯಕ್ರಮ ತಯಾರಿಸುವುದು, ಅಗತ್ಯ ಯೋಗ ಶಿಕ್ಷಕರ ನೇಮಕ ಸೇರಿದಂತೆ ಎಲ್ಲ ತಯಾರಿ ಮಾಡಿಕೊಳ್ಳಲಾಗುವುದು.

Latest Videos
Follow Us:
Download App:
  • android
  • ios