ಬೆಂಗಳೂರು(ಮಾ.28]: ಲೋಕಸಭಾ ಚುನಾವಣಾ ಅಖಾಡದಲ್ಲಿ ಸಲ್ಲಿಕೆಯಾಗಿರುವ 335 ಅಭ್ಯರ್ಥಿಗಳ 450 ನಾಮಪತ್ರಗಳ ಪೈಕಿ 49 ನಾಮಪತ್ರಗಳು ತಿರಸ್ಕೃತಗೊಂಡಿದ್ದು, 237 ಉಮೇದುವಾರಿಕೆಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾ ಆಯೋಗವು ತಿಳಿಸಿದೆ.

ಮೊದಲ ಹಂತದ ಲೋಕಸಭಾ ಚುನಾವಣೆಗೆ ಬುಧವಾರ ನಾಮಪತ್ರಗಳ ಪರಿಶೀಲನೆ ನಡೆಯಿತು. 14 ಕ್ಷೇತ್ರಗಳಿಗೆ 335 ಅಭ್ಯರ್ಥಿಗಳು 450 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಈ ಪೈಕಿ 49 ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ. 237 ಅರ್ಜಿಗಳು ಸ್ವೀಕರಿಸಲಾಗಿದೆ.

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಅತಿ ಹೆಚ್ಚು ನಾಮಪತ್ರಗಳು (9) ತಿರಸ್ಕೃತಗೊಂಡಿವೆ. ಉಡುಪಿ-ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ ಯಾವುದೇ ನಾಮಪತ್ರಗಳು ತಿರಸ್ಕೃತಗೊಂಡಿಲ್ಲ. ಹಾಸನದಲ್ಲಿ 4, ದಕ್ಷಿಣ ಕನ್ನಡದಲ್ಲಿ 3, ತುಮಕೂರಿನಲ್ಲಿ 4, ಮಂಡ್ಯದಲ್ಲಿ 1, ಮೈಸೂರಿನಲ್ಲಿ 5 ನಾಮಪತ್ರಗಳು ತಿರಸ್ಕೃತಗೊಂಡಿವೆ.