Asianet Suvarna News Asianet Suvarna News

ವಿವಿಪ್ಯಾಟ್‌ ಮತಗಳ ಎಣಿಕೆಗೆ 5000 ಜನ ಬೇಕು

ಪ್ರತಿ ವಿಧಾನಸಭಾ ಕ್ಷೇತ್ರದ ಕನಿಷ್ಠ ಐದು ಮತಗಟ್ಟೆಗಳ ವಿವಿಪ್ಯಾಟ್‌ ಮತಗಳನ್ನು ಎಣಿಕೆ ಮಾಡಿ, ಮತಯಂತ್ರಗಳೊಂದಿಗೆ ತಾಳೆ ಮಾಡಬೇಕು ಎಂಬ ಸುಪ್ರೀಂಕೋರ್ಟ್‌ ನಿರ್ದೇಶನದಿಂದ ಐದು ಸಾವಿರಕ್ಕೂ ಹೆಚ್ಚು ಹೆಚ್ಚುವರಿ ಸಿಬ್ಬಂದಿಯ ಅಗತ್ಯ ಇದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್‌ ಅವರು ತಿಳಿಸಿದ್ದಾರೆ.

5000 staff required to VVPAT vote counting says Chief Electoral Officer Mr Sanjiv Kumar
Author
Bengaluru, First Published Apr 10, 2019, 9:43 AM IST

ಬೆಂಗಳೂರು (ಏ. 10): ಪ್ರತಿ ವಿಧಾನಸಭಾ ಕ್ಷೇತ್ರದ ಕನಿಷ್ಠ ಐದು ಮತಗಟ್ಟೆಗಳ ವಿವಿಪ್ಯಾಟ್‌ ಮತಗಳನ್ನು ಎಣಿಕೆ ಮಾಡಿ, ಮತಯಂತ್ರಗಳೊಂದಿಗೆ ತಾಳೆ ಮಾಡಬೇಕು ಎಂಬ ಸುಪ್ರೀಂಕೋರ್ಟ್‌ ನಿರ್ದೇಶನದಿಂದ ಐದು ಸಾವಿರಕ್ಕೂ ಹೆಚ್ಚು ಹೆಚ್ಚುವರಿ ಸಿಬ್ಬಂದಿಯ ಅಗತ್ಯ ಇದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್‌ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಪ್ರತಿ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಲ್ಲಿ ವಿವಿಪ್ಯಾಟ್‌ ಮತಗಳನ್ನು ಮತ್ತು ಮತಯಂತ್ರಗಳನ್ನು ತಾಳೆ ಮಾಡುವ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ. ಇದೀಗ ಸುಪ್ರೀಂಕೋರ್ಟ್‌ ಐದು ಮತಗಟ್ಟೆಗಳಲ್ಲಿ ತಾಳೆ ಮಾಡಬೇಕು ಎಂದು ಹೇಳಿದೆ. ಇದರಿಂದ ಮೂರು ಗಂಟೆ ಹೆಚ್ಚುವರಿ ಸಮಯ ಮತ್ತು ಐದು ಸಾವಿರಕ್ಕಿಂತ ಹೆಚ್ಚು ಹೆಚ್ಚುವರಿ ಸಿಬ್ಬಂದಿಯ ಅಗತ್ಯ ಇದೆ ಎಂದು ಹೇಳಿದರು.

ಚುನಾವಣೆಗೆ 4 ಲಕ್ಷ ಸಿಬ್ಬಂದಿ:

ಚುನಾವಣಾ ಕಾರ್ಯಕ್ಕಾಗಿ ನಾಲ್ಕು ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ. ಮೂರುವರೆ ಲಕ್ಷ ಸಿವಿಲ್‌ ಸಿಬ್ಬಂದಿ ಮತ್ತು 80 ಸಾವಿರ ಪೊಲೀಸರು ಚುನಾವಣಾ ದಿನದಂದು ಕಾರ್ಯನಿರ್ವಹಿಸಲಿದ್ದಾರೆ ಅವರು ತಿಳಿಸಿದ್ದಾರೆ.

ಪ್ರತಿ ಮತಗಟ್ಟೆಯಲ್ಲಿ ನಾಲ್ಕು ಸಿಬ್ಬಂದಿ ಸೇರಿದಂತೆ ಇತರರು ನಿಯೋಜನೆಗೊಂಡಿದ್ದಾರೆ. ಚುನಾವಣೆ ದಿನದಂದು 4 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡಿದರೆ, ಮತ ಎಣಿಕೆ ದಿನದಂದು 30 ಸಾವಿರ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಪ್ರತಿಯೊಬ್ಬರೂ ಈಗಾಗಲೇ ತರಬೇತಿ ನೀಡಲಾಗಿದೆ. ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ತರಬೇತಿ ನೀಡಲಾಗಿದೆ.

Follow Us:
Download App:
  • android
  • ios