ನವದೆಹಲಿ[ಮೇ.11]: ಅಬ್ಬರದ ಪ್ರಚಾರಕ್ಕೆ ಸಾಕ್ಷಿಯಾಗಿದ್ದ ಲೋಕಸಭೆ 6ನೇ ಹಂತದ ಚುನಾವಣಾ ಪ್ರಚಾರಕ್ಕೆ ಶುಕ್ರವಾರ ತೆರೆಬಿದ್ದಿದೆ. ಭಾನುವಾರ ಏಳು ರಾಜ್ಯಗಳ 59 ಕ್ಷೇತ್ರಗಳಿಗೆ ಚುನಾವಣೆ ನೆರವೇರಲಿದೆ.

ಉತ್ತರ ಪ್ರದೇಶದ 14, ಹರ್ಯಾಣದ 10, ಪಶ್ಚಿಮ ಬಂಗಾಳ ಮತ್ತು ಬಿಹಾರದ, ಮಧ್ಯ ಪ್ರದೇಶದ ತಲಾ 8, ದೆಹಲಿಯ 7 ಮತ್ತು ಜಾರ್ಖಂಡದ 4 ಕ್ಷೇತ್ರಗಳಲ್ಲಿ 6ನೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳಿಗೆ 164 ಅಭ್ಯರ್ಥಿಗಳು ಕಣದಲ್ಲಿ ಇದ್ದು, ಕ್ರಿಕೆಟಿಗ ಗೌತಮ್‌ ಗಂಭಿರ್‌, ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌, ಬಾಕ್ಸರ್‌ ವಿಜೇಂದರ್‌ ಸಿಂಗ್‌ ಸೇರಿದಂತೆ ಘಟಾನುಘಟಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಉತ್ತರ ಪ್ರದೇಶದಲ್ಲಿ ಕೇಂದ್ರ ಸಚಿವೆ ಮನೇಕಾ ಗಾಂಧಿ, ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್‌ ಯಾದವ್‌ ಸ್ಪರ್ಧೆಯಲ್ಲಿರುವ ಪ್ರಮುಖರಾಗಿದ್ದಾರೆ.

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ