ನವದೆಹಲಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ.  ಈ ನಿಟ್ಟಿನಲ್ಲಿ ಬಿಜೆಪಿ ತನ್ನ 8ನೇ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮಾರ್ಚ್ 26 ಕೊನೆಯ ದಿನವಾಗಿದ್ದು, ಈ ಪಟ್ಟಿಯಲ್ಲಿಯೂ ಕೂಡ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯಾಗಿಲ್ಲ. 

"

ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಈ ಹಿಂದೆ ತೇಜಸ್ವಿನಿ ಅನಂತ್ ಕುಮಾರ್ ಹೆಸರು ಬಹುತೇಕ ಖಚಿತವಾಗಿದ್ದು, ಆದರೆ ಇದೀಗ ಇನ್ನೂ ಕೂಡ ಅಭ್ಯರ್ಥಿ ಘೋಷಣೆಯಾಗಿಲ್ಲ. ಅಲ್ಲದೇ ಈ ಕ್ಷೇತ್ರಕ್ಕೆ ಇನ್ನೂ ಇಬ್ಬರು ನಾಯಕರ ಹೆಸರು ಕೇಳಿಬರುತ್ತಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. 

ಬೆಂಗಳೂರು ದಕ್ಷಿಣಕ್ಕೆ ಯುವ ನಾಯಕ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಹೆಸರುಗಳೂ ಕೇಳಿಬರುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಉಳಿದಿದ್ದು, ಅಭ್ಯರ್ಥಿ ಮಾತ್ರ ಅಂತಿಮವಾಗಿಲ್ಲ. 

ಬಿಜೆಪಿಯ 8ನೇ ಪಟ್ಟಿಯಲ್ಲಿ ಒಟ್ಟು 9 ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದ್ದು, 8 ಒಡಿಶಾ ಹಾಗೂ ಒಂದು ಪಶ್ಚಿಮ ಬಂಗಾಳದ ಕ್ಷೇತ್ರಕ್ಕೆ ಅಭ್ಯರ್ಥಿ ಫೈನಲ್ ಮಾಡಲಾಗಿದೆ. 

ಒಟ್ಟಿನಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುವ ಅಭ್ಯರ್ಥಿಯು ಇನ್ನೂ ನಿಗೂಢವಾಗಿದ್ದು, ಸಾಕಷ್ಟು ಕುತೂಹಲ ಗರಿಗೆದರುವಂತೆ ಮಾಡಿದೆ. 

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ