ಕೋಲ್ಕತ್ತಾ(ಮೇ.18): ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಂಬಂಧಿ ಹಾಗೂ ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ನೋಟಿಸ್ ನೀಡಿದ್ದಾರೆ.

ಬುಧವಾರ ಪ.ಬಂಗಾಳದ ಡೈಮಂಡ್ ಹಾರ್ಬರ್‌ನಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದ್ದ ಪ್ರಧಾನಿ ಮೋದಿ, ತಮ್ಮ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.

36 ಗಂಟೆಗಳ ಅವಧಿಯಲ್ಲಿ ಪ್ರಧಾನಿ ಮೋದಿ ತಮಗೆ ಬಹಿರಂಗ ಕ್ಷಮೆ ಕೇಳದಿದ್ದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಭಿಷೇಕ್ ಬ್ಯಾನರ್ಜಿ ಎಚ್ಚರಿಕೆ ಕೂಡ ನೀಡಿದ್ದಾರೆ.

ತಮ್ಮ ಭಾಷಣದಲ್ಲಿ ಮೋದಿ ಬಂಗಾಳದಲ್ಲಿ ಭುವಾ-ಭತೀಜಾ ದರ್ಬಾರ್ ನಡೆಯುತ್ತಿದೆ ಎಂದು ಹರಿಹಾಯ್ದಿದ್ದರು. ಇದೇ ವಿಚಾರವಾಗಿ ಅಭಿಷೇಕ್ ಬ್ಯಾನರ್ಜಿ ಪ್ರಧಾನಿ ಮೋದಿ ಅವರಿಗೆ ಮಾನನಷ್ಟ ನೋಟಿಸ್ ಜಾರಿ ಮಾಡಿದ್ದಾರೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.