ಬಿಜೆಪಿಗೆ ಸೇರ್ಪಡೆಗೊಂಡ ಬಾಲಿವುಡ್ ನಟ ಸನ್ನಿ ಡಿಯೋಲ್| ದೇಶ ನಿರ್ಮಾಣ ಕಾರ್ಯದಲ್ಲಿ ಬಿಜೆಪಿ ಜೊತೆ ಕೈ ಜೋಡಿಸಿದ್ದಾಗಿ ಹೇಳಿದ ನಟ| ಪ್ರಧಾನಿ ಮೋದಿ ಕೈ ಬಲಪಡಿಸುವ ವಾಗ್ದಾನ ಮಾಡಿದ ಸನ್ನಿ ಡಿಯೋಲ್| ಪಂಜಾಬ್‌ನ ಗುರುದಾಸ್‍ಪೂರ್ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಸಾಧ್ಯತೆ|

ನವದೆಹಲಿ(ಏ.23): ಬಾಲಿವುಡ್ ನಟ ಸನ್ನಿ ಡಿಯೋಲ್ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್ ಸಮ್ಮುಖದಲ್ಲಿ ಸನ್ನಿ ಡಿಯೋಲ್ ಬಿಜೆಪಿಗೆ ಸೇರ್ಪಡೆಗೊಂಡರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
Scroll to load tweet…

ಈ ವೇಳೆ ಮಾತನಾಡಿದ ಸನ್ನಿ ಡಿಯೋಲ್, ತಮ್ಮ ತಂದೆ ನಟ, ಮಾಜಿ ಸಂಸದ ಧರ್ಮೇಂದ್ರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬೆಂಬಲಿಸಿದಂತೆ ತಾವೂ ಕೂಡ ಪ್ರಧಾನಿ ಮೋದಿ ಅವರನ್ನು ಬೆಂಬಲಸಿವುದಾಗಿ ಹೇಳಿದ್ದಾರೆ.

Scroll to load tweet…

ನಿನ್ನೆಯಷ್ಟೇ (ಏ.22) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದ ಸನ್ನಿ ಡಿಯೋಲ್, ಇಂದು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡರು. ಪಂಜಾಬ್‌ನ ಗುರುದಾಸ್‍ಪೂರ್ ಲೋಕಸಭೆ ಕ್ಷೇತ್ರದಿಂದ ಸನ್ನಿ ಡಿಯೋಲ್ ಸ್ಪರ್ಧಿಸುವ ಸಾಧ್ಯತೆಗಳಿವೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏ.18ರಂದು ಮುಗಿದಿದ್ದು,ಏ.23ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.