ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ನಟಿ ರಾಗಿಣಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಸುದ್ದಿಯಾಗಿತ್ತು. ಆದರೆ ಇದೀಗ ದಿಢೀರ್ ಮುಂದೂಡಿಕೆಯಾಗಿದೆ. 

ಬೆಂಗಳೂರು :  ಚಿತ್ರನಟಿ ರಾಗಿಣಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಿಗದಿಯಾಗಿ ದಿಢೀರನೆ ಮುಂದೂಡಲ್ಪಟ್ಟಿದೆ. ಹಿರಿಯ ನಾಯಕರ ಅನುಪಸ್ಥಿತಿ ಹಿನ್ನೆಲೆಯಲ್ಲಿ ಸೇರ್ಪಡೆ ಕಾರ್ಯಕ್ರಮ ಮುಂದೂಡಲಾಗಿದೆ. ಇನ್ನೆರಡು ದಿನಗಳಲ್ಲಿ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಗಿಣಿ ಅವರು ಭಾನುವಾರ ಮಧ್ಯಾಹ್ನ 2 ಗಂಟೆಗೆ ಬಿಜೆಪಿಯ ಚುನಾವಣಾ ಕಚೇರಿಯಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಸಮ್ಮುಖದಲ್ಲಿ ಸೇರ್ಪಡೆಯಾಗಲಿದ್ದಾರೆ ಎಂಬ ಅಧಿಕೃತ ಆಹ್ವಾನವನ್ನು ಮಾಧ್ಯಮಗಳಿಗೆ ಕಳುಹಿಸಲಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಆ ಕಾರ್ಯಕ್ರಮ ರದ್ದಾಯಿತು.

ಅರವಿಂದ ಲಿಂಬಾವಳಿ ಅವರು ಪ್ರಚಾರದ ನಿಮಿತ್ತ ಬೇರೊಂದು ಸ್ಥಳಕ್ಕೆ ತೆರಳಬೇಕಾಗಿರುವುದರಿಂದ ಮಲ್ಲೇಶ್ವರ ಕ್ಷೇತ್ರದ ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ರಾಗಿಣಿ ಅವರ ಸೇರ್ಪಡೆ ಮಾಡಿಸಲು ತಯಾರಿ ನಡೆದಿತ್ತು. ಈ ಮಾಹಿತಿಯನ್ನು ರಾಗಿಣಿ ಅವರಿಗೆ ತಲುಪಿಸಲಾಯಿತು. ಆದರೆ, ಹಿರಿಯ ನಾಯಕರ ಸಮ್ಮುಖದಲ್ಲೇ ಸೇರ್ಪಡೆಯಾಗುವೆ ಎಂಬ ಮಾತನ್ನು ಹೇಳಿ ಭಾನುವಾರದ ಸೇರ್ಪಡೆಯಾಗಲು ನಿರಾಕರಿಸಿದರು ಎಂದು ಮೂಲಗಳು ತಿಳಿಸಿವೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.