ಮಂಡ್ಯ : ಲೋಕ ಸಭಾ ಚುನಾವಣೆ ಮುಕ್ತಾಯವಾಗಿದೆ. ಇದೇ ವೇಳೆ ಅಭ್ಯರ್ಥಿಗಳಲ್ಲಿ ಗೆಲುವಿನ ಭರವಸೆ ಮೂಡಿದೆ. 

ಮೇ  23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಮೈಸೂರು - ಕೊಡಗು ಕ್ಷೇತ್ರದಲ್ಲಿ ತಮ್ಮದೇ ಗೆಲುವು ಎಂದು  ಮೈತ್ರಿ ಅಭ್ಯರ್ಥಿ ವಿಜಯ್ ಶಂಕರ್ ಭರವಸೆ ವ್ಯಕ್ತಪಡಿಸಿದ್ದಾರೆ. 

ಮೈತ್ರಿ ಪಕ್ಷದ 4 ದಿಗ್ಗಜರಿಗೆ ಸೋಲಿನ ಭವಿಷ್ಯ : ಗರಂ ಆದ ಸಿದ್ದರಾಮಯ್ಯ

ಇನ್ನು ಮಂಡ್ಯದಲ್ಲಿಯೂ ಕೂಡ ಮೈತ್ರಿ ಅಭ್ಯರ್ಥಿಗೆ ಗೆಲುವು ಸಿಗಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು. 

ಇನ್ನು ಮಂಡ್ಯದಲ್ಲಿ ರೆಬೆಲ್ ನಾಯಕರು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ವಿಜಯ್ ಶಂಕರ್ ಅಶಿಸ್ತು ತೋರುವವರಿಗೆ ಯಾವುದೇ ಕಾರಣಕ್ಕೂ ಕ್ಷಮೆ ಇಲ್ಲ ಎಂದರು. 

ಈ ಸಂದರ್ಭದಲ್ಲಿ ರಾಜ್ಯ ರಾಜಕೀಯದಲ್ಲಿ ಮೈತ್ರಿ ಪಕ್ಷವು ಮಹತ್ವದ ಪಾತ್ರ ವಹಿಸುತ್ತಿದೆ ಎಂದು ವಿಜಯ್ ಶಂಕರ್ ಹೇಳಿದರು.