ನವದೆಹಲಿ(ಮೇ.29): ಪ್ರಸಕ್ತ ಲೋಕಸಭೆಗೆ ಆಯ್ಕೆಯಾಗಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಸ್ಮೃತಿ ಇರಾನಿ ಸೇರಿದಂತೆ ಹಲವು ಗಣ್ಯರು ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಹಿಂದೆ ರಾಜ್ಯಸಭಾ ಸಂಸದರಾಗಿದ್ದ ಅಮಿತ್ ಶಾ, ಸ್ಮೃತಿ ಇರಾನಿ, ರವಿಶಂಕರ್ ಪ್ರಸಾದ್, ಕನಿಮೋಳಿ ಇದೀಗ ಲೋಕಸಭೆಗೆ ಆಯ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಸಭಾ ಸ್ಥಾನವನ್ನು ತೊರೆದಿದ್ದಾರೆ.

ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ರಾಜ್ಯಸಭಾ ಕಾರ್ಯದರ್ಶಿ, ಲೋಕಸಭೆಗೆ ಆಯ್ಕೆಯಾದ ಸದಸ್ಯರು ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.