ನವದೆಹಲಿ(ಮೇ.05): ತಮ್ಮ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಇದು ಬಿಜೆಪಿಯ ವ್ಯವಸ್ಥಿತ ಷಡ್ಯಂತ್ರ ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತನಾಡಿದರೆ ಕ್ಷಮಿಸಲಾಗುವುದಿಲ್ಲ ಎಂಬ ಸಂದೇಶ ರವಾನಿಸಲೆಂದೇ ಯುವಕನನ್ನು ಕಳುಹಿಸಿ ತಮ್ಮ ಮೇಲೆ ಹಲ್ಲೆ ಮಾಡಿಸಲಾಗಿದೆ ಎಂದು ಕೇಜ್ರಿವಾಲ್​ ಆರೋಪಿಸಿದ್ದಾರೆ.

ದೇಶದಲ್ಲಿ ಮೋದಿ ವಿರುದ್ಧ ಮಾತನಾಡುವವರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ಇದೊಂದು ರೀತಿಯಲ್ಲಿ ಸರ್ವಾಧಿಕಾರಿ ಧೋರಣೆಯಾಗಿದೆ ಎಂದು ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿಯ ಮೋತಿ ನಗರದಲ್ಲಿ ನಿನ್ನೆ(ಮೇ.05)ಚುನಾವಣಾ ಪ್ರಚಾರ ನಿಮಿತ್ತ ರೋಡ್​ ಶೋ ನಡೆಸುತ್ತಿದ್ದ ಅರವಿಂದ ಕೇಜ್ರಿವಾಲ್​ ಅವರಿಗೆ ಸುರೇಶ್​ ಚವ್ಹಾಣ್ ಎಂಬ ಯುವಕ ಕಪಾಳ ಮೋಕ್ಷ ಮಾಡಿದ್ದ.

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ