Asianet Suvarna News Asianet Suvarna News

ಬಿಜೆಪಿಯತ್ತ ಕಾಂಗ್ರೆಸ್ ನಾಯಕ : ಕೊಪ್ಪಳ ಅಭ್ಯರ್ಥಿಯಾಗಿ ಸ್ಪರ್ಧೆ ?

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು,  ಇದೇ ವೇಳೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೂ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊಪ್ಪಳ ಕಾಂಗ್ರೆಸ್ ಮುಖಂಡ ಬಸವರಾಜ ರಾಯರೆಡ್ಡಿ ಇದೇ ಹಿನ್ನೆಲೆಯಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಚರ್ಚೆಯೊಂದು ನಡೆಯುತ್ತಿದೆ. 

Basavaraj Rayareddy May Join BJP Contest From Koppal
Author
Bengaluru, First Published Mar 23, 2019, 3:11 PM IST

ಕೊಪ್ಪಳ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ಅಭ್ಯರ್ಥಿಗಳ ಆಯ್ಕೆಯೂ ವಿವಿಧ ಪಕ್ಷಗಳಲ್ಲಿ ನಡೆಯುತ್ತಿದೆ. ಇನ್ನು ಕೆಲ ಪಕ್ಷಗಳಲ್ಲಿ ಟಿಕೆಟ್ ಸಿಗದವರಲ್ಲಿ ಅಸಮಧಾನವೂ ಕೂಡ ಭುಗಿಲೇಳುತ್ತಿದೆ. 

ಇನ್ನು ಬಸವರಾಜ ರಾಯರೆಡ್ಡಿ ಕೊಪ್ಪಳ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಇಲ್ಲಿಂದ ರಾಜಶೇಖರ್ ಹಿಟ್ನಾಳ್ ಗೆ ಟಿಕೆಟ್ ಫಿಕ್ಸ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ರಾಯರೆಡ್ಡಿ ಕಣಕ್ಕೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಿಂದು ಆರಂಭವಾಗಿದೆ. 

Basavaraj Rayareddy May Join BJP Contest From Koppal

ಸಾಮಾಜಿಕ ಜಾಲತಾಣದಲ್ಲಿ ಬಸವರಾಜ್ ರಾಯರೆಡ್ಡಿ ಫೋಟೊ ಅಪ್ಲೋಡ್ ಮಾಡಿ , ದೇಶಕ್ಕಾಗಿ ಮೋದಿ,ಮೋದಿಗಾಗಿ ನಾವು ಎಂಬ ಟ್ಯಾಗ್ ಲೈನ್ ಹಾಕಲಾಗಿದ್ದು, ಇದರಿಂದ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎನ್ನಲಾಗುತ್ತಿದೆ. 

ಬಿಜೆಪಿಗೆ ತೆರಳಲು ದೆಹಲಿ ಮಟ್ಟದಲ್ಲಿ ಲಾಭಿ ನಡೆಸಿದ್ದು, ಈಗಾಗಲೇ ಒಂದು ಸುತ್ತಿನ ಮಾತುಕತೆಯೂ ನಡೆದಿದೆ. ಅಲ್ಲದೇ ಇನ್ನೂ ಕೂಡ ಕೊಪ್ಪಳ ಬಿಜೆಪಿ ಅಭ್ಯರ್ಥಿ ಘೋಷಣೆಯಾಗದ ನಿಟ್ಟಿನಲ್ಲಿ ಬಿಜೆಪಿಯಿಂದ ಟಿಕೆಟ್ ನೀಡದಲ್ಲಿ ಕಾಂಗ್ರೆಸ್ ತೊರೆಯಲಿದ್ದಾರೆ ಎನ್ನಲಾಗಿದೆ. 

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ

 

Follow Us:
Download App:
  • android
  • ios