ಬೆಂಗಳೂರು[ಮಾ. 25] ಬೆಂಗಳೂರು ದಕ್ಷಿಣಕ್ಕೆ ಅಚ್ಚರಿ ಅಭ್ಯರ್ಥಿಯಾಗಿ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಕಣಕ್ಕೆ ಇಳಿಯುವುದು ಪಕ್ಕಾ ಆಗಿದೆ.  ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ ರವಿ ಸುಬ್ರಹ್ಮಣ್ಯ ಮತ್ತು ಕಾಂಗ್ರೆಸ್ ನ ಬಿ.ಕೆ. ಹರಿಪ್ರಸಾದ್ ನಡುವೆ ನೇರ ಹಣಾಹಣಿ ನಡೆಯಲಿದೆ.

ಬೆಂಗ್ಳೂರು ದಕ್ಷಿಣ ಟಿಕೆಟ್: ಚರ್ಚೆಗೆ ಗ್ರಾಸವಾಯ್ತು ತೇಜಸ್ವಿನಿ ಅನಂತ ಕುಮಾರ್ ಟ್ವೀಟ್

ಬೆಂಗಳೂರು ದಕ್ಷಿಣಕ್ಕೆ ಬಿಜೆಪಿ ಯಾರನ್ನು ಕಣಕ್ಕೆ ಇಳಿಸುತ್ತದೆ ಎಂಬುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಈಗ ಅಂತಿಮವಾಗಿ ರವಿ ಸುಬ್ರಹ್ಮಣ್ಯ ಅವರ ಹೆಸರನ್ನು ಫೈನಲ್ ಮಾಡಲಾಗಿದ್ದು ಅಚ್ಚರಿ ಆಯ್ಕೆ ಎಂದು ಹೇಳಲಾಗಿದೆ.

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.