ಬೆಂಗಳೂರು : ಕಾಂಗ್ರೆಸ್ ಟ್ರಬಲ್ ಶೂಟರ್ ಎಂದೇ ಕರೆಸಿಕೊಳ್ಳುವ ಟ್ರಬಲ್  ಡಿ.ಕೆ.ಶಿವಕುಮಾರ್ ಗೆ ಮುಖಭಂಗವಾದಂತಾಗಿದೆ. ಈ ಬಾರಿ ಡಿಕೆಶಿ ಉಸ್ತುವಾರಿ ವಹಿಸಿಕೊಂಡಿದ್ದ ಎರಡೂ ಕ್ಷೇತ್ರಗಳಲ್ಲಿಯೂ ಕೂಡ ಕಾಂಗ್ರೆಸ್ ಮುಗ್ಗರಿಸಿದೆ. 

ಲೋಕಸಭಾ ಚುನಾವಣೆಯ ಈ ಸಂದರ್ಭದಲ್ಲಿ ಸಚಿವ ಡಿಕೆ ಶಿವಕುಮಾರ್ ಗೆ ಬಳ್ಳಾರಿ ಹಾಗೂ ಶಿವಮೊಗ್ಗ ಕ್ಷೇತ್ರಗಳ ಉಸ್ತುವಾರಿ ವಹಿಸಲಾಗಿತ್ತು. ಎರಡೂ ಕ್ಷೇತ್ರ ಬಿಜೆಪಿ ವಶವಾಗಿವೆ.

ಎರಡೂ ಕ್ಷೇತ್ರಗಳಲ್ಲಿಯೂ ಕೂಡ ಕಾಂಗ್ರೆಸ್ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಅಭ್ಯರ್ಥಿಗಳು ಗೆಲುವು ಖಚಿತವಾಗಿದೆ.   ಬಳ್ಳಾರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಕೈ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಅವರನ್ನು ಪರಾಭವಗೊಳಿಸುವತ್ತ ಸಾಗಿದ್ದರೆ,  ಇತ್ತ ಶಿವಮೊಗ್ಗದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಮಧು ಬಂಗಾರಪ್ಪ ಸೋಲನ್ನನುಭವಿಸಿದ್ದು,  ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಪಡೆದಿದ್ದಾರೆ. ಇದರಿಂದ ಕಳೆದ ನವೆಂಬರ್ ನಲ್ಲಿ ನಡೆದ ಲೋಕಸಭಾ  ಉಪ ಚುನಾವಣೆಯಲ್ಲಿ ಗೆಲುವು ಪಡೆದಿದ್ದ ರಾಘವೇಂದ್ರ ಇದೀಗ ಮತ್ತೊಮ್ಮೆ ಗೆಲುವಿನ ನಗೆ ಬೀರಿದ್ದಾರೆ.

ಕಳೆದ ನವೆಂಬರ್ ತಿಂಗಳಲ್ಲಿ ನಡೆದಿದ್ದ ಲೋಕಸಭಾ ಉಪ ಚುನಾವಣೆಯಲ್ಲಿ ಡಿ.ಕೆ ಶಿವಕುಮಾರ್ ಬಳ್ಳಾರಿ ಉಸ್ತುವಾರಿ ವಹಿಸಿಕೊಂಡು ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇದೀಗ ಟ್ರಬಲ್ ಶೋಟರ್ ಪ್ಲಾನ್ ಗಳು ಎರಡೂ ಕ್ಷೇತ್ರಗಳಲ್ಲಿಯೂ ಮುಗ್ಗರಿಸಿದೆ.

ಶಿವಕುಮಾರ್ ಉಸ್ತುವಾರಿ ವಹಿಸಿಕೊಂಡಿದ್ದ ಬಳ್ಳಾರಿ, ಶಿವಮೊಗ್ಗದಲ್ಲಿ ಕಮಲ ಪಾಳಯ ಗೆಲುವಿನ ನಗೆ ಬೀರಿದೆ.