ಪಾಟ್ನಾ :  ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ಇದೇ ವೇಳೆ ವಿವಿಧ ಪಕ್ಷಗಳಲ್ಲಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಲಾಗುತ್ತಿದೆ.

ಬಿಹಾರದಲ್ಲಿ NDA ಮೈತ್ರಿಕೂಟದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲೇ  ಒಟ್ಟು 40 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ.  ಕೇಂದ್ರ ಸಚಿವರು ಹಾಗೂ ಅನೇಕ ಹಾಲಿ ಸಂಸದರಿಗೆ ಟಿಕೆಟ್ ನೀಡಲಾಗಿದೆ.   

ಪ್ರಮುಖವಾಗಿ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಗೆ ಪಾಟ್ನಾದಿಂದ ಟಿಕೆಟ್ ನೀಡಲಾಗಿದೆ.  ಸದ್ಯ ಪಾಟ್ನಾ ಬಿಜೆಪಿ ಸಂಸದರಾಗಿರುವ ಶತ್ರುಘ್ನ ಸಿನ್ಹಾ ಕಾಂಗ್ರೆಸ್ ಸೇರುವ ಸಾಧ್ಯತೆ ಇದ್ದು, ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. 

ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಹಾಲಿ ಸಂಸದರಿಗೆ ಟಿಕೆಟ್ ನೀಡಲಾಗಿದೆ. ಅಲ್ಲದೇ ಕೇಂದ್ರ ಸಚಿವ ರಾಧಾ  ಮೋಹನ್ ಸಿಂಗ್, ರಾಮ್ ಕೃಪಾಲ್ ಯಾದವ್, ರಾಜೀವ್ ಪ್ರತಾಪ್ ರೂಡಿ,  ರಾಜ್ ಕುಮಾರ್  ಸಿಂಗ್, ಗಿರಿರಾಜ್ ಸಿಂಗ್ ಸೇರಿದಂತೆ ಹಲವರಿಗೆ ಟಿಕೆಟ್ ಲಭ್ಯವಾಗಿದೆ. 

ಕಳೆದ ಚುನಾವಣೆಯಂತೆ ಈ ಬಾರಿಯೂ ಕೂಡ ಬಿಜೆಪಿ ಹಾಗೂ ಹಾಗೂ ಜೆಡಿಯು ಹಾಗೂ ಲೋಕಜನಶಕ್ತಿ ಪಕ್ಷದ ಮೈತ್ರಿ ಮುಂದುವರಿದಿದ್ದು ಸಂತೋಷ್ ಕುಮಾರ್ ಕುಶ್ವಾ, ಕುಶಲೇಂದ್ರ ಕುಮಾರ್ ಟಿಕೆಟ್ ಪಡೆದಿದ್ದಾರೆ. 

ಬಿಜೆಪಿ 18 ಕ್ಷೇತ್ರ, ಜೆಡಿಯು 17. ಲೋಕಜನಶಕ್ತಿ ಪಕ್ಷ 6 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. 

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ