ಭುವನೇಶ್ವರ್(ಮೇ.18): ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಈ ಮಧ್ಯೆ ಹೊಸ ಸರ್ಕಾರ ರಚನೆಯ ಸಾಧ್ಯತೆಗಳ ಕುರಿತು ಎಲ್ಲಾ ರಾಜಕೀಯ ಪಕ್ಷಗಳು ತಮ್ಮದೇ ಆದ ವಾದ ಮಂಡಿಸುತ್ತಿದ್ದು, ಕೆಲವು ರಾಜಕೀಯ ಪಕ್ಷಗಳು ಯಾವ ಮೈತ್ರಿಕೂಟ ಸೇರಬಹುದು ಎಂಬ ಲೆಕ್ಕಾಚಾರದಲ್ಲಿ ನಿರತವಾಗಿವೆ.

ಅದರಂತೆ ಒಡಿಶಾ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಘೋಷಿಸುವ ಯಾವುದೇ ಪಕ್ಷಕ್ಕೆ ತಮ್ಮ ಬೆಂಬಲ ಇರಲಿದೆ ಎಂದು ಒಡಿಶಾ ಸಿಎಂ ನವೀನ್ ಪಟ್ನಾಯಕ್ ಹೇಳಿದ್ದಾರೆ. ಚುನಾವಣೆಗೂ ಮೊದಲು ಬಿಜೆಪಿ ಮತ್ತು ಕಾಂಗ್ರೆಸ್ ನಿಂದ ಸಮಾನ ಅಂತರ ಕಾಯ್ದುಕೊಂಡಿದ್ದ ಬಿಜೆಡಿ, ಇದೀಗ ವಿಶೇಷ ಸ್ಥಾನಮಾನದ ಬೇಡಿಕೆಯೊಂದಿಗೆ ಮೈತ್ರಿಯ ಸಾಧ್ಯತೆ ಕುರಿತು ಸಂದೇಶ ಕಳುಹಿಸಿದೆ.

ಒಡಿಶಾಗೆ ವಿಶೇಷ ಸ್ಥಾನಮಾನ ನೀಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದ್ದು, ಈ ಬೇಡಿಕೆಯನ್ನು ಈಡೇರಿಸುವ ಯಾವುದೇ ಪಕ್ಷಕ್ಕೆ ಅಥವಾ ಮೈತ್ರಿಕೂಟಕ್ಕೆ ತಮ್ಮ ಬೆಂಬಲ ಇರಲಿದೆ ಎಂದು ನವೀನ್ ಪಟ್ನಾಯಕ್ ಹೇಳಿದ್ದಾರೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.