Asianet Suvarna News Asianet Suvarna News

ಭೋಪಾಲ್‌ನಿಂದ ಸಾಧ್ವಿ, ದೆಹಲಿಯಿಂದ ತಿವಾರಿ ನಾಮಪತ್ರ: ಸಪ್ನಾ ಚೌಧರಿ ಸಾಥ್!

ಭೋಪಾಲ್‌ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಪ್ರಜ್ಞಾ ಸಿಂಗ್ ಠಾಕೂರ್| ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ವಿರುದ್ಧ ಪ್ರಜ್ಞಾ ಠಾಕೂರ್ ಸ್ಪರ್ಧೆ| ಈಶಾನ್ಯ ದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮನೋಜ್ ತಿವಾರಿ ಕೂಡ ನಾಮಪತ್ರ| ಮನೋಜ್ ತಿವಾರಿಗೆ ಸಾಥ್ ನೀಡಿದ ಸಪ್ನಾ ಚೌಧರಿ|

BJP Candidate Pragya Singh Thakur Files Nomination from Bhopal Lok Sabha Constituency
Author
Bengaluru, First Published Apr 22, 2019, 4:19 PM IST

ನವದೆಹಲಿ(ಏ.22): 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮಧ್ಯ ಪ್ರದೇಶ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಸ್ಪರ್ಧಿಸುತ್ತಿರುವ ಪ್ರಗ್ಯಾ ಸಿಂಗ್ ಥಾಕೂರ್ ಅವರು ತಮ್ಮ ಮೂವರು ಬೆಂಬಲಿಗರು ಹಾಗೂ ವಕೀಲರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು.

ಅತ್ತ ಈಶಾನ್ಯ ದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮನೋಜ್ ತಿವಾರಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಬೆಂಬಲಿಗರೊಂದಿಗೆ ಚುನಾವಣಾ ಆಯೋಗದ ಕಚೇರಿಗೆ ಆಗಮಸಿದ ತಿವಾರಿ, ತಮ್ಮ ನಾಮಪತ್ರ ಸಲ್ಲಿಸಿದರು.

ಈ ವೇಳೆ ಜನಪ್ರಿಯ ಗಾಯಕಿ ಸಪ್ನಾ ಚೌಧರಿ ಕೂಡ ಭಾಗವಹಿಸಿದ್ದು ವಿಶೇಷವಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಸಪ್ನಾ ಚೌಧರಿ, ಮನೋಜ್ ತಿವಾರಿ ನನ್ನ ಸ್ನೇಹಿತರಾದ ಕಾರಣ ಅವರಿಗೆ ಬೆಂಬಲ ಕೋರಿದ್ದೇನೆ ಹೊರತು ಬಿಜೆಪಿ ಸೇರಿಲ್ಲ ಎಂದು ಸ್ಪಷ್ಟಪಡಿಸಿದರು.

BJP Candidate Pragya Singh Thakur Files Nomination from Bhopal Lok Sabha Constituency

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏ.18ರಂದು ಮುಗಿದಿದ್ದು,ಏ.23ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.

Follow Us:
Download App:
  • android
  • ios