ನವದೆಹಲಿ[ಏ.30]: ಪೂರ್ವ ದೆಹಲಿ ಬಿಜೆಪಿ ಅಭ್ಯರ್ಥಿ ಹಾಗೂ ಕ್ರಿಕೆಟಿಗ ಗೌತಮ್ ಗಂಭೀರ್ 2 ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಆಪ್ ಗೆ ಮುಖಭಂಗವಾಗಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್ ಅವರು ಕೂಡ ಎರಡು ವೋಟರ್ ಐಡಿ ಹೊಂದಿದ್ದಾರೆ ಎಂದು ದೆಹಲಿ ಬಿಜೆಪಿ ವಕ್ತಾರ ಹರೀಶ್ ಖುರಾನಾ ಸೋಮವಾರ ದೆಹಲಿ ಕೋರ್ಟ್‌ಗೆ ದೂರು ಸಲ್ಲಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಗೆ ಸಂಕಷ್ಟ, FIR ದಾಖಲು!

ಸುನಿತಾ ಅವರ ಒಂದು ಗುರುತಿನ ಚೀಟಿ ಉತ್ತರಪ್ರದೇಶದ ಗಾಜಿಯಾಬಾದ್ ಲೋಕಸಭಾ ಕ್ಷೇತ್ರದಲ್ಲಿದ್ದರೆ, ಇನ್ನೊಂದು ದೆಹಲಿಯ ಚಾಂದನಿ ಚೌಕ್ ಕ್ಷೇತ್ರದಲ್ಲಿದೆ.