ಬಿಹಾರ[ಮೇ.23]: ಬಿಹಾರ ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದೆ. ಟ್ರೆಂಡ್ ಗಮಿಸಿದರೆ ಬಿಜೆಪಿ- ಜೆಡಿಯು ಮೈತ್ರಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಆರ್ ಜೆಡಿ ಮೈತ್ರಿಗೆ ತೀವ್ರ ಹಿನ್ನಡೆಯಾಗಿದೆ. ರಾಜ್ಯದ ಒಟ್ಟು 40 ಕ್ಷೇತ್ರಗಳಲ್ಲಿ ಬಿಜೆಪಿ ಮೈತ್ರಿ 38 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಹಾಗೂ ಕಾಂಗ್ರೆಸ್ ಮೈತ್ರಿ ಕೂಡ ಕೇವಲ 2 ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ.

ಬಿಹಾರದ ಹೈವೋಲ್ಟೇಜ್ ಕಣವಾಗಿದ್ದ ಬೆಗುಸುರೈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗಿರಿರಾಜ್ ಸಿಂಗ್ ಮುನ್ನಡೆ ಸಾಧಿಸಿದ್ದಾರೆ. ಭಾರೀ ಆಕಾಂಕ್ಷೆಯೊಂದಿಗೆ ಲೋಕ ಅಖಾಡಕ್ಕಿಳಿದಿದ್ದ ಸಿಪಿಐ ನಾಯಕ ಕನ್ಹಯ್ಯಾ ಕುಮಾರ್ ಗೆ ಭಾರೀ ಹಿನ್ನಡೆಯಾಗಿದೆ. ಕನ್ಹಯ್ಯಾ ಪರವಾಗಿ ಬಾಲಿವುಡ್ ನಟಿ ಸ್ವರಾ ಭಾಸ್ಕರ್, ಜಾವೇದ್ ಅಖ್ತರ್ ಹಾಗೂ ಪ್ರಕಾಶ್ ರಾಜ್ ಪ್ರಚಾರ ನಡೆಸಿದ್ದರು ಎಂಬುವುದು ಉಲ್ಲೇಖನೀಯ.

ಬೆಗುಸುರೈ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿರುವ ಮಾಜಿ ಕೆಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಗಿರಿರಾಜ್ ಸಿಂಗ್ 90 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.