ಉಡುಪಿ:  ಬಿಜೆಪಿ ಮುಖಂಡ ಜಯಪ್ರಕಾಶ್ ಹೆಗ್ಡೆ ಅವರನ್ನು ಜೆಡಿಎಸ್ ಸೆಳೆಯುವ ಯತ್ನ ನಡೆಯುತ್ತಿದ್ದು, ಮತ್ತೊಂದೆಡೆ ಜೆಪಿಗೇ ಟಿಕೆಟ್ ನೀಡಬೇಕೆಂದು ಉಡುಪಿಯಲ್ಲಿ ಅವರ ಬೆಂಬಲಿಗರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆಂಬ ಸುದ್ದಿಗಳಿಗೂ ಜೆಪಿ ಸ್ಪಷ್ಟನೆ ನೀಡಿದ್ದಾರೆ.

ಈ ನಿಟ್ಟಿನಲ್ಲಿ ಉಡುಪಿ ಕೃಷ್ಣಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ ಅಭ್ಯರ್ಥಿಯಾಗಬೇಕು ಎಂದು ಶ್ರೀಕೃಷ್ಣ ಮುಖ್ಯಪ್ರಾಣ ದೇವರಲ್ಲಿ ಪ್ರಾರ್ಥನೆ ಮಾಡಿದರು. 

ಹಾಲಿ ಸಂಸದೆ ವಿರುದ್ಧ ಜಯಪ್ರಕಾಶ್ ಹೆಗ್ಡೆ ಬೆಂಬಲಿಗ ಆಕ್ರೋಶಗೊಂಡಿದ್ದು, ಜಯಪ್ರಕಾಶ್ ಹೆಗ್ಡೆಗೆ ಟಿಕೆಟ್ ನೀಡಿದ್ರೆ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ಅನುಕೂಲ. ಜನರ ಜೊತೆಯಿರುವ ನಾಯಕ ಜಯಪ್ರಕಾಶ್ ಹೆಗ್ಡೆಗೆ ಟಿಕೆಟ್ ಸಿಗಬೇಕು ಎಂದರು. 

ಅಭಿವೃದ್ಧಿ ಕೆಲಸ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇನೆ: ಪ್ರತಾಪ್ ಸಿಂಹ

ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಸಂಭವನೀಯ ಅಭ್ಯರ್ಥಿಯಾಗಿರುವುದರಿಂದ  ಸ್ವಪಕ್ಷೀಯರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ಹಿಂದೆ ಶೋಭಾ ಗೋ ಬ್ಯಾಕ್ ಅಭಿಯಾನ ನಡೆಸಿದ್ದರು. ಇದೀಗ  ಪಕ್ಷದ ಟಿಕೆಟ್ ಜಯಪ್ರಕಾಶ್ ಹೆಗ್ಡೆಗೆ ನೀಡುವಂತೆ ಹೈಕಮಾಂಡ್ ಗೆ ಆಗ್ರಹಿಸಿದ್ದಾರೆ. 

ಕಾಂಗ್ರೆಸ್ ತೊರೆಯಲು ಸಿದ್ಧವಾದ ಮಾಜಿ ಸಚಿವಗೆ ಬಿಜೆಪಿ ಟಿಕೆಟ್..?

ಜಯಪ್ರಕಾಶ್ ಹೆಗ್ಡೆ ಸ್ಪಷ್ಟನೆ :  ಜೆಡಿಎಸ್ ಸೇರಲಿದ್ದಾರೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕರ ಜಯಪ್ರಕಾಶ್ ಹೆಗ್ಡೆ ತಾವು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದಿದ್ದಾರೆ. ಅಲ್ಲದೇ ಪಕ್ಷಾಂತರ ಮಾಡುವುದಿಲ್ಲ. ಟಿಕೆಟ್ ಕೊಟ್ಟರೆ ಬಿಜೆಪಿಯಿಂದಷ್ಟೇ ಸ್ಪರ್ಧೆ ಎಂದಿದ್ದಾರೆ.