ಕಲಬುರಗಿ: ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿರುವ ರಾಜ್ಯ ಸರ್ಕಾರದ ಮಾಜಿ ಕಾರ್ಯದರ್ಶಿ ಕೆ.ರತ್ನಪ್ರಭಾ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಅವರಿಗೆ ವೀಡಿಯೋ ಕಾಲ್‌ ಮಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಹೈದ್ರಾಬಾದ್‌ ಕರ್ನಾಟಕ ಅಭಿವೃದ್ಧಿಯಲ್ಲಿ ಮಹಿಳೆಯ ಪಾತ್ರ ಕುರಿತು ಗುರುವಾರ ಹಮ್ಮಿಕೊಂಡ ಮಹಿಳಾ ಸಂವಾದ ಕಾರ್ಯಕ್ರಮದ ನಡುವೆಯೇ ಸುಮಲತಾ ಅವರಿಗೆ ವೀಡಿಯೋ ಕಾಲ್‌ ಮಾಡಿ ಹೈದ್ರಾಬಾದ್‌ ಕರ್ನಾಟಕ ಮಹಿಳೆಯರೆಲ್ಲರೂ ನಿಮ್ಮ ಬೆಂಬಲಕ್ಕಿದ್ದೇವೆ ಎಂದು ಧೈರ್ಯ ತುಂಬಿದರು.

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.