ನವದೆಹಲಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದೇ ವೇಳೆ ದೇಶದಲ್ಲಿ ಪಕ್ಷಾಂತರ ಪರ್ವ ಜೋರಾಗಿದ್ದು, ಪಕ್ಷದಿಂದಿಂದ ಪಕ್ಷಕ್ಕೆ ಜಿಗಿಯುವವರ ಸಂಖ್ಯೆ ಹೆಚ್ಚಿದೆ. 

ಇದೀಗ ಪಾಟ್ನಾ ಸಾಹಿಬ್ ಬಿಜೆಪಿ ಸಂಸದರಾಗಿರುವ ಶತ್ರುಘ್ನಾ ಸಿನ್ಹಾ ಕೂಡ ಶೀಘ್ರ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೋರ್ವರು ಹೇಳಿದ್ದಾರೆ. 

ಈಗಾಗಲೇ ಬಿಡುಗಡೆಗೊಂಡಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಶತ್ರುಘ್ನ ಸಿನ್ಹಾ ಹೆಸರು ಕೈ ಬಿಡಲಾಗಿದ್ದು, ಅವರ ಕ್ಷೇತ್ರದಿಂದ  ರವಿ ಶಂಕರ್ ಪ್ರಸಾದ್  ಕಣಕ್ಕೆ ಇಳಿಸಲಾಗಿದೆ. 

ಬಿಜೆಪಿಯಲ್ಲಿದ್ದುಕೊಂಡೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುತ್ತಿದ್ದ ಸಿನ್ಹಾ ಇದೀಗ ಪಕ್ಷಾಂತರಕ್ಕೆ ಸಜ್ಜಾಗಿದ್ದಾರೆ. 

ಕಳೆದ ಎರಡು ದಿನಗಳ ಹಿಂದಷ್ಟೇ ಶತ್ರುಘ್ನ ಸಿನ್ಹಾ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಹೊಗಳಿದ್ದರು. ಇದೇ ಬೆನ್ನಲ್ಲೇ ಇದೀಗ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. 

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ