ಶಿಮ್ಲಾ : ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ರಾಷ್ಟ್ರ ರಾಜಕಾರಣಲ್ಲಿ ವಿವಿಧ ರೀತಿಯ ಬೆಳವಣಿಗೆಗಳಾಗುತ್ತಿದೆ. 

 ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕೆ ಇಳಿದಿದ್ದು, ಅವರ ತಂದೆ ಅಲ್ಲಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದಾರೆ. 

ಮಂಡಿ ವಿಧಾನಸಭಾ ಕ್ಷೇತ್ರದಲ್ಲಿ ತಂದೆ ಅನಿಲ್ ಶರ್ಮ ಸಚಿವರಾಗಿದ್ದು, ಪುತ್ರ ಆಶ್ರಯ್ ಶರ್ಮ ಕಾಂಗ್ರೆಸ್ ನಿಂದ ಕಣಕ್ಕೆ ಇಳಿದಿದ್ದು, ಈ ನಿಟ್ಟಿನಲ್ಲಿ ಪುತ್ರನ ವಿರುದ್ಧ ಪ್ರಚಾರ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಸಚಿವರಾಗಿರುವ ಅನಿಲ್ ಶರ್ಮ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವ ಸಾಧ್ಯತೆ ಇತ್ತು. ಆದರೆ ಇದೀಗ ಪ್ರಚಾರಕ್ಕೆ ನಿರಾಕರಿಸಿದ್ದಾರೆ.