ಶಿವಮೊಗ್ಗ, (ಮಾ.19): ಮಂಡ್ಯ  ಅಖಾಡ ಈ ಬಾರಿಯ ಲೋಕಸಭಾ ಚುನಾವಣೆಯ ಕೇಂದ್ರ ಬಿಂದುವಾಗಿದೆ. ಸುಮಲತಾ ಅಂಬರೀಶ್ ಹಾಗೂ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ನಡುವೆ ನೇರ ಹಣಾಹಣಿ ನಡೆಯಲಿದೆ. 

ಇದ್ರಿಂದ ಮಂಡ್ಯ ಲೋಕಸಭಾ ಕ್ಷೇತ್ರ ಭಾರೀ ಕುತೂಹಲ ಮೂಡಿಸಿದೆ. ಇದರ ನಡುವೆಯೇ ಸುಮಲತಾ ಅವರು ಬಿಜೆಪಿ ಸೇರಬೇಕು ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿದೆ.

ಮಲ್ಟಿ ಸ್ಟಾರ್ ಸಿನಿಮಾ ಆಗಿರುವ ಮಂಡ್ಯ ಲೋಕಸಭಾ ಕ್ಷೇತ್ರ!

ಆದ್ರೆ ಸುಮಲತಾ ಅವರು ಸ್ವತಂತ್ರವಾಗಿ ಸ್ಪರ್ಧಿಸುವ ನಿರ್ಧಾರಕ್ಕೆ ಕೈಗೊಂಡಿದ್ದಾರೆ, ಇತ್ತ ಬಿಜೆಪಿ ತನ್ನ ಅಭ್ಯರ್ಥಿಯನ್ನ ಕಣಕ್ಕಿಳಿಸಬೇಕೋ...? ಬೇಡವೋ..? ಎನ್ನುವ ಚಿಂತನೆ ನಡೆಸಿದೆ. ಹೀಗಿರುವಾಗ ಸೊರಬ ಬಿಜೆಪಿ ಶಾಸಕ ಕುಮಾರ ಬಂಗಾರಪ್ಪ ಅವರು ಸುಮಲತಾ ಪರ ಬ್ಯಾಟಿಂಗ್ ಮಾಡಿದ್ದಾರೆ. 

ಪತ್ರ ಬರೆದು ಮಂಡ್ಯ ಜನರೊಂದಿಗೆ ಭಾವನಾತ್ಮಕವಾಗಿ ಬೆಸೆದುಕೊಂಡ ಸುಮಲತಾ

ಶಿವಮೊಗ್ಗದಲ್ಲಿಂದ ಮಾತನಾಡಿದ ಅವರು, ಮಂಡ್ಯದಲ್ಲಿ ಸುಮಲತಾ ಅಂಬರೀಶ್  ತೆಗೆದುಕೊಂಡ ನಿರ್ಧಾರ ಸೂಕ್ತವಾಗಿದೆ. ಮಂಡ್ಯದಲ್ಲಿ ಸುಮಲತಾ ಪರ ಅವಕಾಶ ಸಿಕ್ಕರೆ ಚುನಾವಣಾ ಪ್ರಚಾರ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. 

 ಬಿಜೆಪಿ ತನ್ನ ನಿಲುವು ಸ್ಪಷ್ಟಪಡಿಸಿಲ್ಲ. ಆದರೂ ಕುಮಾರ ಬಂಗಾರಪ್ಪ ಅವರ ಈ ಹೇಳಿಕೆ ದಳಪತಿಗಳಿಗೆ ನಿದ್ದೆಗೆಡಿಸಿದಂತೂ ಸತ್ಯ.