ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ತೊರೆದ ಸಂಸದ| ಮೊದಲ ಪಟ್ಟಿ ಬಿಡುಗಡೆ ಬಳಿಕ ಬಿಜೆಪಿಗೆ ಶಾಕ್| ಉತ್ತರಪ್ರದೇಶದ ಪ್ರಯಾಗರಾಜ್ ಬಿಜೆಪಿ ಸಂಸದ ಶ್ಯಾಮಾ ಚರಣ್ ಗುಪ್ತಾ ರಾಜೀನಾಮೆ| ಮರಳಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡ ಗುಪ್ತಾ| ಬಂಡಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ|
ಪ್ರಯಾಗರಾಜ್(ಮಾ.16): ಮಹತ್ವದ ಬೆಳವಣಿಗೆಯೊಂದರಲ್ಲಿ ಉತ್ತರಪ್ರದೇಶದ ಪ್ರಯಾಗರಾಜ್ ಬಿಜೆಪಿ ಸಂಸದ ಶ್ಯಾಮಾ ಚರಣ್ ಗುಪ್ತಾ ಪಕ್ಷ ತೊರೆದಿದ್ದಾರೆ.
2014ರಲ್ಲಿ ಅಲಹಾಬಾದ್(ಪ್ರಯಾಗರಾಜ್) ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದ ಶ್ಯಾಮಾ ಚರಣ್ ಗುಪ್ತಾ, ಇದೀಗ ಮರಳಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇಂದು ಬೆಳಗ್ಗೆಯಷ್ಟೇ ಬಿಜೆಪಿ ಲೋಕಸಭೆ ಚುನಾವಣೆಯ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿತ್ತು. ಇದಾದ ಕೆಲ ಸಮಯದಲ್ಲೇ ರಾಜೀನಾಮೆ ಪ್ರಕಟಿಸಿದ ಗುಪ್ತಾ, ಬಂಡಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಘಿ ಸ್ಪರ್ಧೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಮೇಲೆ ಹರಿಹಾಯ್ದಿರುವ ಶ್ಯಾಮಾ ಚರಣ್ ಗುಪ್ತಾ, ಅಧಿಕಾರಕ್ಕಾಗಿ ಬಿಜೆಪಿ ನಾಯಕರು ಸಮಾಜ ಒಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇದೇ ಏಪ್ರಿಲ್ 11ರಿಂದ ಒಟ್ಟು 7 ಹಂತಗಳಲ್ಲಿ ಲೋಕಸಭೆಗೆ ದೇಶಾದ್ಯಂತ ಚುನಾವಣೆ ನಡೆಯಲಿದ್ದು, ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು ಏಪ್ರಿಲ್ 23ರಂದು ಒಟ್ಟು ಎರಡು ಹಂತಗಳಲ್ಲಿ ಚುನಾವಣೆ ಘೋಷಣೆಯಾಗಿದೆ. ಮೇ 23 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಣೆಯಾಗಲಿದೆ.
