ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬೆಂಗಳೂರು ದಕ್ಷಿಣ ಮತ್ತು ಗ್ರಾಮಾಂತರದ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಅಂತಿಮವಾಗಿ ಸೋಮವಾರ ತಡರಾತ್ರಿ ಪ್ರಕಟ ಮಾಡಿದೆ.
ಬೆಂಗಳೂರು(ಮಾ.26) ಲೋಕಸಭೆ ಚುನಾವಣೆಗೆ ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಅಧಿಕೃತವಾಗಿ ಪ್ರಕಟಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ ಕಣಕ್ಕಿಳಿಯಲಿದ್ದು ಬಿಕೆ ಹರಿಪ್ರಸಾದ್‌ಗೆ ಸವಾಲು ಹಾಕಲಿದ್ದಾರೆ. ಇನ್ನು ಬೆಂಗಳೂರು ಗ್ರಾಮಾಂತರದಿಂದ ಬಿಜೆಪಿ ವಕ್ತಾರ, ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವಥ್ ನಾರಾಯಣ ಸ್ಪರ್ಧೆ ಮಾಡಲಿದ್ದು ಡಿ.ಕೆ.ಸುರೇಶ್ ಅವರನ್ನು ಎದುರಿಸಲಿದ್ದಾರೆ.
ಮೊದಲೆ ಸೂಚನೆ ನೀಡಿದ್ದ ತೇಜಸ್ವಿನಿ ಅನಂತ್ ಕುಮಾರ್ ಟ್ವಿಟ್
ಮೊದಲು ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ಸಿಗುತ್ತದೆ ಎಂದು ಭಾವಿಸಲಾಗಿತ್ತು. ಸೋಮವಾರ ಸಂಜೆ ವೇಳೆಗೆ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಮಾತುಗಾರ ತೇಜಸ್ವಿ ಸೂರ್ಯ ಅವರಿಗೆ ಮಣೆ ಹಾಕಿದೆ. ಗ್ರಾಮಾಂತರದಿಂದ ಸಿ.ಪಿ ಯೋಗೇಶ್ವರ ಅಥವಾ ಅವರ ಪುತ್ರಿ ನಿಶಾ ಯೋಗೇಶ್ವರ ಅಖಾಡಕ್ಕೆ ಇಳಿಯುತ್ತಾರೆ ಎಂಬ ಮಾತು ಕೇಳಿಬಂದಿದ್ದವು


