ನವದೆಹಲಿ[ಮಾ.17]: ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಹೆಬ್ಬಯಕೆಯಲ್ಲಿರುವ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಮುಂದಾಳತ್ವದ ಬಿಜೆಪಿ, 2014ರ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ ಈಡೇರಿಸಿದ ಸಾಧನಾ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ.

ಕಳೆದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ 549 ಭರವಸೆಗಳಲ್ಲಿ 520ಕ್ಕೂ ಹೆಚ್ಚು ಭರವಸೆಗಳನ್ನು ಸರ್ಕಾರ ಈಡೇರಿಸಿದೆ. ಆದರೆ ವಿಪಕ್ಷಗಳು ಟೀಕಿಸುತ್ತಿರುವ ಹಿನ್ನೆಲೆಯಲ್ಲಿ ಕಳೆದ ಚುನಾವಣೆ ವೇಳೆ ನೀಡಿದ್ದ ಆಶ್ವಾಸನೆಗಳಲ್ಲಿ ಈಡೇರಿಸಿಸಲಾದ ಪ್ರತಿಯೊಂದರ ವಿವರಗಳಿರುವ ಸಾಧನಾ ಹೊತ್ತಿಗೆಯನ್ನು ಜನರ ಮುಂದಿಡಲು ತಯಾರಿ ನಡೆದಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಉದ್ಯೋಗ ಸೃಷ್ಟಿ, ನಾಗರಿಕರ ಸಾಮಾಜಿಕ ಭದ್ರತೆ ಮತ್ತು ಆಂತರಿಕ ಭದ್ರತೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಪರಿಚಯಿಸಿ ಅನುಷ್ಠಾನಗೊಳಿಸಲಾದ ಯೋಜನೆಗಳ ವಿವರ ಸಂಗ್ರಹಿಸುವಲ್ಲಿ ಪಕ್ಷ ಮುಖಂಡರನ್ನು ಒಳಗೊಂಡ ತಂಡ ತಯಾರಿಯಲ್ಲಿ ತೊಡಗಿಕೊಂಡಿದೆ.