ಕಾಂಗ್ರೆಸ್ ಸೇರಿದ ಬಾಕ್ಸರ್ ವಿಜೇಂದ್ರ ಸಿಂಗ್| ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ| ‘ದೇಶದಲ್ಲಿ ಪ್ರಧಾನಿ ಮೋದಿ ಅಲೆ ಇರುವುದನ್ನು ನಾನಂತೂ ನೋಡಿಲ್ಲ’| ‘20 ವರ್ಷಗಳಿಂದ ಬಾಕ್ಸಿಂಗ್ ಮೂಲಕ ದೇಶಸೇವೆ ಮಾಡಿದ್ದೇನೆ’|

ನವದೆಹಲಿ(ಏ.23): ಭಾರತದ ಪ್ರಸಿದ್ಧ ಬಾಕ್ಸಿಂಗ್ ಕ್ರೀಡಾಪಟು ವಿಜೇಂದ್ರ ಸಿಂಗ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಿಂದ ವಿಜೇಂದ್ರ ಸಿಂಗ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

Scroll to load tweet…

ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿರುವ ವಿಜೇಂದ್ರ ಸಿಂಗ್, ದೇಶದಲ್ಲಿ ಪ್ರಧಾನಿ ಮೋದಿ ಅಲೆ ಇರುವುದನ್ನು ನಾನಂತೂ ನೋಡಿಲ್ಲ ಎಂದು ಹೇಳಿದ್ದಾರೆ.

Scroll to load tweet…

ಈ ಕುರಿತು ಟ್ವೀಟ್ ಮಾಡಿರುವ ವಿಜೇಂದ್ರ ಸಿಂಗ್, ಕಳೆದ 20 ವರ್ಷಗಳಿಂದ ಬಾಕ್ಸಿಂಗ್ ಮೂಲಕ ದೇಶಸೇವೆ ಮಾಡಿದ್ದು, ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೂಲಕ ಮತ್ತೆ ದೇಶ ಸೇವೆಗೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏ.18ರಂದು ಮುಗಿದಿದ್ದು,ಏ.23ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.